ಬ್ರೇಕಿಂಗ್ ನ್ಯೂಸ್
20-05-24 09:56 pm Mangalore Correspondent ಕರಾವಳಿ
ಉಳ್ಳಾಲ, ಮೇ.20: ಹರೇಕಳ ಗ್ರಾಮದ ನ್ಯೂಪಡ್ಪು ಶಾಲೆಯ ಆವರಣ ಗೋಡೆ ಕುಸಿದು ಏಳರ ಹರೆಯದ ಬಾಲಕಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಘಟನೆಯ ವೇಳೆ ಜೊತೆಗಿದ್ದ ಮತ್ತೋರ್ವ ಬಾಲಕಿ ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಸಿದ್ಧೀಕ್ ಮತ್ತು ಜಮೀಲಾ ದಂಪತಿಯ ಪುತ್ರಿ ಶಾಝಿಯಾ(7) ಮೃತಪಟ್ಟ ಬಾಲಕಿ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯೆಂದೇ ಗುರುತಿಸಲ್ಪಟ್ಟಿರುವ ನ್ಯೂಪಡ್ಪು ಶಾಲೆಯಲ್ಲಿ ಶಾಝಿಯಾ ಬಾನು 3ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಮುಡಿಪು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಂದ ಈ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ನಡೆಯುತ್ತಿದ್ದು, ಸಂಜೆಯ ವೇಳೆ ಸೇವಾ ಯೋಜನೆಯ ವಿದ್ಯಾರ್ಥಿಗಳು ಶ್ರಮದಾನದಲ್ಲಿ ನಿರತರಾಗಿದ್ದರು. ಇದೇ ಸಂದರ್ಭದಲ್ಲಿ ಶಾಝಿಯಾ ಬಾನು ಕೂಡಾ ಶ್ರಮದಾನ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಆಟವಾಡುತ್ತಿದ್ದಳು ಎನ್ನಲಾಗಿದೆ.


ಗೇಟ್ ನಲ್ಲಿ ಈಕೆ ಹಾಗೂ ಇನ್ನೋರ್ವ ಸಮೀಪದ ಮನೆಯ ಹನ್ನೊಂದರ ಹರೆಯದ ಬಾಲಕಿ ಆಟವಾಡುತ್ತಿದ್ದಾಗ ಗೇಟ್ ಸಮೇತ ಆವರಣ ಗೋಡೆ ಏಕಾಏಕಿಯಾಗಿ ಕುಸಿದು ಬಿದ್ದು ಶಾಝಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್, ಕೊಣಾಜೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿದ್ಧೀಕ್ ಹಾಗೂ ಜಮೀಲಾ ದಂಪತಿಗೆ ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳಿದ್ದು, ಇದರಲ್ಲಿ ಶಾಝಿಯಾ ಬಾನು ಕೊನೆಯ ಪುತ್ರಿಯಾಗಿದ್ದಳು.
ಶಾಲೆಯಲ್ಲಿ ಮುಡಿಪು ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಶಿಬಿರ ನಡೆಯುತ್ತಿದೆ. ಈ ಸ್ಥಳಕ್ಕೆ ಬಂದಿದ್ದ ಬಾಲಕಿ ವಿಧಿಯ ಕ್ರೂರ ಲೀಲೆಗೆ ಬಾಲಕಿ ಬಲಿಯಾಗಿದ್ದಾಳೆ. ಘಟನೆಯಿಂದ ತುಂಬಾ ಬೇಸರವಾಗಿದೆ ಎಂದು ಹರೇಕಳ ಹಾಜಬ್ಬ ಶೋಕ ವ್ಯಕ್ತಪಡಿಸಿದ್ದಾರೆ.
A tragic accident occurred at Harekala Hajabba Government Senior Primary School in Newpadpu, resulting in the death of a class 3 student, Shazia Banu (7), due to the collapse of the school's compound wall. The incident happened on the evening of Monday, May 20, following heavy rains.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm