ಬ್ರೇಕಿಂಗ್ ನ್ಯೂಸ್
20-05-24 10:43 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 20: ಬಿಜೆಪಿ ಕಾರ್ಯಕರ್ತರನ್ನು ವಿನಾಕಾರಣ ಬಂಧಿಸಿದರೆ, ಕಿರುಕುಳ ನೀಡಿದರೆ ಪೊಲೀಸರ ಕಾಲರ್ ಹಿಡಿಯಲು ಹೇಸುವುದಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹರಿಹಾಯ್ದಿದ್ದಾರೆ.
ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯನ್ನು ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹರೀಶ್ ಪೂಂಜ ಮಾತಿನುದ್ದಕ್ಕೂ ಪೊಲೀಸರನ್ನು ಕಾಂಗ್ರೆಸ್ ಏಜೆಂಟ್ ಎನ್ನುತ್ತ ಕಿಚಾಯಿಸಿದರು.
ಎಸ್ಪಿ ತಲೆಯಲ್ಲಿ ಕೂದಲು ಇಲ್ಲ, ಕೂದಲು ಮಾತ್ರ ಇಲ್ಲ ಅಂದ್ಕೊಂಡಿದ್ದೆ. ಈಗ ತಲೆಯಲ್ಲಿ ಬೊಂಡೂ ಇಲ್ಲ ಎಂಬಂತೆ ಕಾಣುತ್ತಿದೆ. ಬೆಳ್ತಂಗಡಿ ಪೊಲೀಸರು ಮಾತ್ರ ಅಲ್ಲ, ಎಸ್ಪಿ ಅವರೂ ಕಾಂಗ್ರೆಸ್ ಏಜಂಟ್ ಆಗಿದ್ದಾರೆ. ಕಾಂಗ್ರೆಸ್ ಸರಕಾರ ಇದೆ, ಇವರೆಲ್ಲ ಏನು ಮಾಡಿದರೂ ನಡೆಯುತ್ತೆ ಅಂದ್ಕೊಂಡಿದ್ದಾರೆ. ಪೊಲೀಸರ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಕಟ್ಟಿ ಹಾಕಿ, ನಮ್ಮನ್ನು ಬಗ್ಗಿಸಬಹುದು, ಹತೋಟಿಗೆ ತರಬಹುದು ಅಂತ ಕೆಲವರು ಅಂದ್ಕೊಂಡಿದ್ದಾರೆ. ನಾವು ಇದಕ್ಕೆಲ್ಲ ಬಗ್ಗಲ್ಲ. ನಮ್ಮ ಕಾರ್ಯಕರ್ತರನ್ನು ವಿನಾಕಾರಣ ಬಂಧಿಸಿದರೆ ಪೊಲೀಸರ ಕಾಲರನ್ನೇ ಹಿಡಿಯುತ್ತೇವೆ. ಅದಕ್ಕಾಗಿ ಜೈಲಿಗೆ ಹೋಗುವುದಕ್ಕೂ ಹಿಂಜರಿಯಲ್ಲ ಎಂದು ಹರೀಶ್ ಪೂಂಜ ಹೇಳಿದ್ದಾರೆ.
ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಶನಿವಾರ ರಾತ್ರೋರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನೇ ಅವಾಚ್ಯವಾಗಿ ನಿಂದಿಸಿದ್ದ ಹರೀಶ್ ಪೂಂಜ ವಿರುದ್ಧ ದುರ್ವರ್ತನೆ ತೋರಿದ್ದಕ್ಕಾಗಿ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪೊಲೀಸ್ ಠಾಣೆ ನಿಮ್ಮ ಅಪ್ಪನ ಮನೆ ಆಸ್ತಿಯಲ್ಲ ಎಂದು ಹೇಳಿ ಧಮಕಿ ಹಾಕುವ ರೀತಿ ಪೊಲೀಸರನ್ನು ಬೆದರಿಸುವ ಯತ್ನ ಮಾಡಿದ್ದರು. ಆದರೆ, ಸೋಮವಾರ ಮತ್ತೆ ಪ್ರತಿಭಟನಾ ಸಭೆಯಲ್ಲಿ ಪೊಲೀಸರ ವಿರುದ್ಧ ಬೆದರಿಕೆ ಹಾಕುವ ರೀತಿ ಮಾತನಾಡಿದ್ದಾರೆ.
Mangalore Harish poonja says will not even care to hold police collar if any BJP member is arrested, sparks controversy. The Belthangady police on Sunday, May 19, filed a case against Harish Poonja, BJP MLA, on charges of creating a ruckus in the Belthangady police station on Saturday night (May 18). The ruckus was over police arresting Belthangady Taluk president of BJP Yuva Morcha Shashiraj Shetty in connection with Shetty’s alleged involvement in illegal stone quarrying at Melantabettu village of Belthangady taluk in Dakshina Kannada.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm