ಬ್ರೇಕಿಂಗ್ ನ್ಯೂಸ್
22-05-24 10:58 pm Mangalore Correspondent ಕರಾವಳಿ
ಮಂಗಳೂರು, ಮೇ.22: ದಿನವಿಡೀ ಪ್ರತಿಭಟನೆ, ಹೈಡ್ರಾಮಾ ನಾಟಕದ ಬಳಿಕ ರಾತ್ರಿ ವೇಳೆಗೆ ಶಾಸಕ ಹರೀಶ್ ಪೂಂಜ ವಕೀಲರು ಮತ್ತು ಪಕ್ಷದ ನಾಯಕರ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ರಾತ್ರಿ 9.30ಕ್ಕೆ ಜಿಲ್ಲೆಯ ಇತರ ಬಿಜೆಪಿ ಶಾಸಕರು, ವಕೀಲರು ಮತ್ತು ಇತರ ನಾಯಕರ ಜೊತೆಗೆ ಪೂಂಜ ಠಾಣೆಗೆ ಹಾಜರಾಗಿದ್ದು, ವಿಚಾರಣೆ ಎದುರಿಸಿದ್ದಾರೆ.
ಸಂಜೆ ವೇಳೆಗೆ ತಾನೇ ಖುದ್ದಾಗಿ ಶಾಸಕರನ್ನು ಪೊಲೀಸ್ ಠಾಣೆಗೆ ಕರೆತರುವುದಾಗಿ ಸಂಸದ ನಳಿನ್ ಕುಮಾರ್ ಹೇಳಿದ್ದರಿಂದ ಪೊಲೀಸರು ಠಾಣೆಗೆ ಹಿಂತಿರುಗಿದ್ದರು. ಅದರಂತೆ, ಸಂಸದರ ಸೂಚನೆಯಂತೆ ಬಿಜೆಪಿ ನಾಯಕರ ಜೊತೆಗೆ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಠಾಣೆಗೆ ಬಂದಿದ್ದು ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ.




ಬೆಳ್ತಂಗಡಿ ಠಾಣೆಯಲ್ಲಿ ಶಾಸಕ ಪೂಂಜ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದು ಅದರ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪ್ರತಿಭಟನೆ ಸಭೆಯಲ್ಲಿ ಪೊಲೀಸರಿಗೆ ನಿಂದಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಎಸ್ಪಿ ರಿಷ್ಯಂತ್ ಸಿಂಗ್ ರಾತ್ರಿ 10.45ಕ್ಕೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಶಾಸಕ ಹರೀಶ್ ಪೂಂಜ, ಕಾರ್ಯಕರ್ತರ ಕಾರಣಕ್ಕೆ ಪೊಲೀಸರ ಕಾಲರ್ ಪಟ್ಟಿ ಹಿಡಿಯುತ್ತೇನೆ ಎಂದಿದ್ದರು.ಅಲ್ಲದೆ, ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲಿ ಠಾಣೆಗೆ ನುಗ್ಗಿ ಪೊಲೀಸರಿಗೂ ಬೆದರಿಕೆ ಹಾಕಿದ್ದರು. ಪ್ರಕರಣ ನೆಪದಲ್ಲಿ ಶಾಸಕರನ್ನು ವಶಕ್ಕೆ ಪಡೆದು ಠಾಣೆಗೆ ಒಯ್ಯಲು ಪೊಲೀಸರು ಬಂದಿದ್ದರು. ಆದರೆ ಮನೆಯ ಆವರಣದಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಶಾಸಕರ ಬಂಧನಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ರಂಪ ಮಾಡಿದ್ದರು. ಇದೀಗ ಒಂದು ಪ್ರಕರಣದಲ್ಲಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದಾರೆ. ಮತ್ತೊಂದು ಪ್ರಕರಣದ ಬಗ್ಗೆ ವಿಚಾರಣೆಗೆ ಮತ್ತೆ ಬರುವಂತೆ ಕರೆಯುವ ಸಾಧ್ಯತೆಯಿದೆ.
Police to investigate MLA Harish poonja full night over making threats to the police at Belthangady. Nalin Kateel who convinced the police of getting poonja to the station is now in the process of enuiry.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm