ಬ್ರೇಕಿಂಗ್ ನ್ಯೂಸ್
23-05-24 07:02 pm HK NEWS ಕರಾವಳಿ
ಉಡುಪಿ, ಮೇ 23: 24 ಗಂಟೆಯೊಳಗಾಗಿ ರಘುಪತಿ ಭಟ್ ಅವರು ವಿಧಾನಪರಿಷತ್ ಚುನಾವಣಾ ಕಣದಿಂದ ನಿವೃತ್ತರಾಗದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಅನಿವಾರ್ಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಘುಪತಿ ಭಟ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಏನು ಬೇಕೋ ಅದನ್ನೆಲ್ಲ ನಾವು ಪಕ್ಷದ ವತಿಯಿಂದ ಮಾಡುತ್ತೇವೆ. ರಘುಪತಿ ಭಟ್ ಆಗಲಿ ಯಾರೇ ಆಗಲಿ, ಪಕ್ಷಕ್ಕೆ ಮುಜುಗರ ತರುವ ಕೆಲಸವನ್ನು ಯಾರೇ ಮಾಡಿದರೂ ಪಕ್ಷ ಶಿಸ್ತುಕ್ರಮ ತೆಗೆದುಕೊಳ್ಳುತ್ತದೆ. ಅವರಿಗೆ ಇನ್ನೂ ಕಾಲಾವಕಾಶ ಇದೆ, ಅವರು ಕಣದಿಂದ ನಿವೃತ್ತಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಪಕ್ಷದಿಂದ ರಘುಪತಿ ಭಟ್ ಉಚ್ಚಾಟನೆಗೆ ತೀವ್ರ ಆಗ್ರಹ ;
ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಬಿಜೆಪಿಯ ಮಾಜಿ ಶಾಸಕರಾದ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ಮುಖಂಡರು ಪಕ್ಷದ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.
ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್
ಬಿಜೆಪಿ ವಿರುದ್ಧ ರಘುಪತಿ ಭಟ್ ಬಹಿರಂಗ ಅಸಮಾಧಾನ ;
ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ರಘುಪತಿ ಭಟ್ ಬಹಿರಂಗವಾಗಿ ಬಿಜೆಪಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ.
1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು. ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ.
ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು? ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ ಎಂದು ರಘುಪತಿ ಭಟ್ ಬಿಜೆಪಿ ವಿರುದ್ಧ ಬೇಸರ ಹೊರಹಾಕಿದ್ದರು.
Sunil kumar warns of action against candidate Raghupathi Bhat if he doesnt quit vidhan Parishad elections
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm