ಬ್ರೇಕಿಂಗ್ ನ್ಯೂಸ್
24-05-24 09:50 pm Udupi Correspondent ಕರಾವಳಿ
ಉಡುಪಿ, ಮೇ.24: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಎರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಮತ್ತು ಜೆಡಿಎಸ್ ಅಭ್ಯರ್ಥಿ ಭೋಜೇಗೌಡ ಅವರು ಉಡುಪಿ ಮತ್ತು ಮಂಗಳೂರಿನ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಮತಯಾಚನೆ ಮಾಡಿದ್ದಾರೆ.
ಶುಕ್ರವಾರ ಬೆಳಗ್ಗೆ ಮಂಗಳೂರಿನ ಕೆನರಾ ಸ್ಕೂಲ್ ಮತ್ತು ಶಾರದಾ ಎಜುಕೇಷನಲ್ ಇನ್ಸ್ಟಿಟ್ಯೂಷನ್ ಸಂಸ್ಥೆಗಳಿಗೆ ಭೇಟಿ ನೀಡಿದ ಎನ್ ಡಿಎ ಮೈತ್ರಿಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್ ಭೋಜೆಗೌಡ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಬೆಂಬಲಿಸಿ ಮತಹಾಕುವಂತೆ ಅಲ್ಲಿನ ಉಪನ್ಯಾಸಕ ವರ್ಗ ಮತ್ತು ಸಿಬ್ಬಂದಿಯಲ್ಲಿ ವಿನಂತಿಸಲಾಯಿತು
ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಧಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ಧಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾಲೇಜಿನ ಆಡಳಿತ ವರ್ಗ, ಉಪನ್ಯಾಸಕ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಉಪಸ್ಥಿತರಿದ್ದರು.
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶುಕ್ರವಾರ ಉಡುಪಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಂಬಳ್ಳಿ ಸಂಜೀವ ಶೆಟ್ಟಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ , ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆ ಹಿನ್ನೆಲೆ ಉಡುಪಿಯ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಎನ್ ಡಿಎ ಅಭ್ಯರ್ಥಿಗಳು ಅಲ್ಲಿನ ಉಪನ್ಯಾಸ ವರ್ಗ ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತ ಯಾಚಿಸಿದರು. ಉಡುಪಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮತಯಾಚನೆ ಮಾಡಲಾಯಿತು
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಶುಕ್ರವಾರ ಮಾಜಿ ಸಚಿವ ದಿ. ಡಾ ವಿ. ಎಸ್. ಆಚಾರ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಇದೇ ವೇಳೆ, ಅವರು ಡಾ ವಿ. ಎಸ್. ಆಚಾರ್ಯ ಅವರ ಮಣಿಪಾಲದ ನಿವಾಸಕ್ಕೆ ಭೇಟಿ ನೀಡಿ ಅವರ ಧರ್ಮಪತ್ನಿ ಡಾ. ಶಾಂತಾ ಆಚಾರ್ಯ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಕುಶಲೋಪಚರಿ ವಿಚಾರಿಸಿದರು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ , ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಪೇಜಾವರ ಮಠದ ಸ್ವಾಮೀಜಿಗಳ ಆಶೀರ್ವಾದ
ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಉಡುಪಿಯ ಶ್ರೀಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಪರ್ಯಾಯ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಭೇಟಿ
ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಪುತ್ತಿಗೆ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.
Dr Dhananjaya Sarji campaigns at Mangalore and Udupi over vidhan Parishad elections. Dr Dhananjay Sarji, candidate for the Graduates Constituency, and Bhoje Gowda, candidate for the Teachers Constituency, voiced their commitment to addressing the challenges faced by teachers and students in their district.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm