ಬ್ರೇಕಿಂಗ್ ನ್ಯೂಸ್
28-05-24 07:01 pm Mangalore Correspondent ಕರಾವಳಿ
ಮಂಗಳೂರು, ಮೇ.28: ಮಂಗಳೂರಿನಲ್ಲಿ ನಡುರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿ ಮಾಜಿ ಸಚಿವ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂಥವರನ್ನು ಒದ್ದು ಒಳಗೆ ಹಾಕಿ, ದೇಶದ್ರೋಹದ ಕೇಸ್ ಹಾಕಿ. ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ, ಬೇಡ ಅನ್ನಲ್ಲ ಎಂದು ಟೀಕಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರ ದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತವರನ್ನು ಒದ್ದು ಒಳಗೆ ಹಾಕಿದ್ರೆ, ಇತರೇ ಮುಸ್ಲಿಮರಿಗೆ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ನಮ್ಮ ಬ್ರದರ್, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಅಂತಾರೆ ಸಿದ್ದರಾಮಯ್ಯ. ಇದು ಟಿಪ್ಪು ನಗರ, ಟಿಪ್ಪು ರಾಜ್ಯ ಅಂತ ಹೇಳ್ತಾರೆ. ಇವರದು ಎಷ್ಟು ಸೊಕ್ಕಿನ ಮಾತು, ಎಲ್ಲಿಂದ ಧೈರ್ಯ ಬಂತು ಹೀಗನ್ನಲು.
ಇವರ ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಕಾಂಗ್ರೆಸನ್ನು ಭಸ್ಮ ಮಾಡುತ್ತೆ. ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರ ದ್ರೋಹದ ಕೃತ್ಯ ಕೇಸ್ ಹಾಕಿ. ಹಿಂದು ಮುಸ್ಲಿಂ ಸಂತೋಷದಿಂದ ಇರೋದು ಇವರಿಗೆ ಇಷ್ಟ ಇಲ್ವಾ ಎಂದು ಈಶ್ವರಪ್ಪ ಮಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಬಗ್ಗೆ ಕೇಳಿದ ಪ್ರಶ್ನೆಗೆ, ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಾನು ಮಾತಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಬಲ್ ಸ್ಟ್ಯಾಂಡರ್ಡ್ ಹೊಂದಿದ್ದಾರೆ. ನನ್ನ ವಿರುದ್ಧ ಆರೋಪ ಬಂದಾಗ ತಕ್ಷಣ ರಾಜಿನಾಮೆ ನೀಡಿದ್ದೆ. ಇದೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆಯಾಗಿ ಪ್ರತಿಭಟನೆ ಮಾಡಿದ್ದರು. ಈಗ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಈ ಇಬ್ಬರು ಮೌನವಾಗಿದ್ದಾರೆ. ನನ್ನ ವಿರುದ್ಧ ಆಪಾದನೆ ಬಂದಾಗ ನಾನು ರಾಜನಾಮೆ ನೀಡಿ ತನಿಖೆಗೆ ಸಹಕಾರ ನೀಡಿದ್ದೆ. ಈಗ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಡೆತ್ ನೋಟ್ ನಲ್ಲಿ ಕೆಲವು ಅಧಿಕಾರಿಗಳ ವಿರುದ್ದ, ಸಚಿವ ನಾಗೇಂದ್ರ ಅವರ ಬಗ್ಗೆ ಆರೋಪ ಮಾಡಿದ್ದಾರೆ. ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು. ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
Namaz in the middle of the road in Mangalore, Eshwarappa they are anti nationals must arrest them immediately he added speaking at press club in Mangalore.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm