ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm