ಬ್ರೇಕಿಂಗ್ ನ್ಯೂಸ್
10-06-24 10:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮವಾಗಿದ್ದು, ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಇಡೀ ದೇಶದಲ್ಲಿಯೇ ಮಂಗಳೂರಿನಲ್ಲಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜು ಅತಿ ಹೆಚ್ಚು ಇರುವುದರಿಂದ ಇದರ ಎಫೆಕ್ಟ್ ದೊಡ್ಡ ಮಟ್ಟದಲ್ಲಿ ಮಂಗಳೂರಿಗೆ ಆಗುತ್ತಿದೆ. ಈ ಬಾರಿ ನೀಟ್ ಪರೀಕ್ಷೆ ಬರೆದವರಿಗೆ ಅನ್ಯಾಯ ಆಗಿದೆ, ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರಿಗೆ ಮಾತ್ರ ರ್ಯಾಂಕ್ ಬಂದಿರುವುದು ಅಕ್ರಮಕ್ಕೆ ಸಾಕ್ಷಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಒಂದೇ ರೀತಿಯ ರೋಲ್ ನಂಬರ್ ಇರುವ ವಿದ್ಯಾರ್ಥಿಗಳಿಗೆ ಒಂದೇ ರೀತಿ ಅಂಕ ಬಂದಿದೆ. ಇದು ಹೇಗೆ ಸಾಧ್ಯ. ಈ ಬಗ್ಗೆ ಈಗಾಗಲೇ ದೆಹಲಿ ಹೈಕೋರ್ಟಿನಲ್ಲಿ ರಿಟ್ ಅರ್ಜಿ ದಾಖಲಾಗಿದೆ. ದೆಹಲಿ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ. ಮೇ 14ರಂದು ನೀಟ್ ಪರೀಕ್ಷೆ ಫಲಿತಾಂಶ ಬರಬೇಕಿದ್ದರೂ, ಅದನ್ನು ಜೂನ್ 4ರಂದು ಲೋಕಸಭೆ ಫಲಿತಾಂಶ ದಿನವೇ ಬರುವಂತೆ ಮಾಡಲಾಗಿತ್ತು. ಆಮೂಲಕ ಅಕ್ರಮ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದರು.
ಸಂಸತ್ತಿನ ಜಂಟಿ ತನಿಖಾ ಸಮಿತಿಯಿಂದ ನೀಟ್ ಅಕ್ರಮದ ಬಗ್ಗೆ ತನಿಖೆಯಾಗಬೇಕು. ಈ ಬಗ್ಗೆ ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಮಾತನಾಡಿದ್ದಾರೆ. ಆದರೆ ಆಡಳಿತ ನಡೆಸುತ್ತಿರುವವರು ಮೌನವಾಗಿದ್ದಾರೆ. ಈ ರೀತಿ ಅಕ್ರಮ ನಡೆದಿದ್ದೇ ಆದಲ್ಲಿ ಅದೊಂದು ದೊಡ್ಡ ಅಪರಾಧ. ಕಲಿಯುವ ಮಕ್ಕಳಿಗೆ ಅನ್ಯಾಯ ಮಾಡಿದಂತೆ. ಇದನ್ನು ಲಘುವಾಗಿ ಪರಿಗಣಿಸದೆ ಸರಿಯಾಗಿ ತನಿಖೆ ನಡೆಸಬೇಕು ಎಂದು ಹೇಳಿದರು. ಇಂತಹ ಅಕ್ರಮದಲ್ಲಿ ಕೋಚಿಂಗ್ ಇನ್ಸ್ ಟಿಟ್ಯೂಟ್ ಗಳ ಪಾತ್ರವನ್ನು ಅಲ್ಲಗಳೆಯುವಂತಿಲ್ಲ. ಸರಿಯಾದ ತನಿಖೆ ನಡೆದಲ್ಲಿ ಎಲ್ಲವೂ ಹೊರಬರುತ್ತದೆ ಎಂದರು. ಸುದ್ದಿಗೋಷ್ಟಿಯಲ್ಲಿ ಪದ್ಮರಾಜ್, ಕೋಡಿಜಾಲ್ ಇಬ್ರಾಹಿಂ, ಶಶಿಧರ್ ಹೆಗ್ಡೆ ಮತ್ತಿತರರಿದ್ದರು.
Former Minister and Congress leader B. Ramanath Rai on Monday demanded a Supreme Court-monitored probe into the alleged irregularities in the conduct of National Eligibility cum Entrance Test (NEET-undergraduate) by the National Testing Agency.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm