ಬ್ರೇಕಿಂಗ್ ನ್ಯೂಸ್
19-06-24 10:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 19: ಮಂಗಳೂರಿನ ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ "ಆರಾಟ" ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಗಳ ಎಲ್ಲ ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಮಾಹಿತಿ ನೀಡಿದ್ದಾರೆ.
ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದ್ದು ಚಿತ್ರದ ಟೀಸರ್, ಟ್ರೈಲರ್ ಹಾಗೂ 2 ಹಾಡುಗಳನ್ನು ಕನ್ನಡದ ಹೆಸರಾಂತ ಯೂಟ್ಯೂಬ್ ಚಾನೆಲ್ ಆನಂದ್ ಆಡಿಯೋ ಮೂಲಕ ಬಿಡುಗಡೆಗೊಳಿಸಿದ್ದು ಈಗಾಗಲೇ ಜನಮನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ" ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.



"ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದ್ದು ಪಿ.ಎನ್.ಆರ್ ಬ್ಯಾನರ್ ಅಡಿಯಲ್ಲಿ ರಾಘವೇಂದ್ರ ಹೊಳ್ಳ ಟಿ, ರಾಂಪ್ರಸಾದ್ ಕೆ, ನಿತೇಶ್ ಮಾಡಮ್ಮೆ ಹಾಗೂ ಸ್ನೇಹಿತರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಎಂದು ನಟ ಜ್ಯೋತಿಷ್ ಶೆಟ್ಟಿ ಹೇಳಿದರು. ನಾಯಕ ನಟ ರಂಜನ್ ಕಾಸರಗೋಡು ಮಾತನಾಡಿ, "ಚಿತ್ರದಲ್ಲಿ ಕರಾವಳಿಯ ಸೊಗಡನ್ನು ತುಂಬ ಚೆನ್ನಾಗಿ ಚಿತ್ರಿಸಲಾಗಿದೆ. ದೇವರ ಜಾತ್ರೆಯ ಸಂದರ್ಭದಲ್ಲಿ ನಡೆಯುವ ಜಳಕದ ಸನ್ನಿವೇಶಕ್ಕೆ ಆರಾಟ ಎಂದು ಕರೆಯಲಾಗುತ್ತಿದ್ದು ಇಡೀ ಸಿನಿಮಾ ತುಳುನಾಡಿನಲ್ಲಿ ಚಿತ್ರಿಸಲಾಗಿದೆ. ಎಲ್ಲರೂ ಚಿತ್ರಮಂದಿರದಲ್ಲಿ ಸಿನಿಮಾ ನೋಡಿ" ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ರಾಘವೇಂದ್ರ ಹೊಳ್ಳ, ಸಂಗೀತ ನಿರ್ದೇಶಕ ಸಮೀರ್ ಮುಡಿಪು, ಸುನಿಲ್ ನೆಲ್ಲಿಗುಡ್ಡೆ, ರಂಜನ್ ಕಾಸರಗೋಡು, ಯೋಗೀಶ್ ಕೆ.ಎನ್., ಜ್ಯೋತಿಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಿನಿಮಾದ ಮೂಲಕಥೆ ರಾಘವೇಂದ್ರ ಹೊಳ್ಳ ಅವರದ್ದಾಗಿದ್ದು ಚಿತ್ರಕಥೆ, ಸಂಭಾಷಣೆ, ನಿರ್ದೇಶನದ ಜವಾಬ್ದಾರಿಯನ್ನು ಪುಷ್ಪರಾಜ್ ರೈ ಮಲಾರಬೀಡು ವಹಿಸಿದ್ದಾರೆ. ನಿರ್ದೇಶನ ತಂಡದಲ್ಲಿ ಜಯರಾಜ್ ಹೆಜಮಾಡಿ, ರೋಷನ್ ಆರ್ ಆಳ್ವ, ಹರ್ಷರಾಜ್ ಬಂಟ್ವಾಳ, ಅಭಿ ಬೋಳ್ಯಾರ್, ಸುಶಿನ್ ದುಡಿದಿದ್ದಾರೆ. ಛಾಯಾಗ್ರಹಣ ರವಿ ಸುವರ್ಣ, ಸಂಕಲನ ದಾಮು ಕನ್ಸೂರ್ , ಸಂಗೀತ ರಾಘವೇಂದ್ರ ಬೀಜಾಡಿ ಹಾಗೂ ಶಮೀರ್ ಮುಡಿಪು, ಸಾಹಿತ್ಯ ಹೆಚ್.ಎಸ್ ವೆಂಕಟೇಶ್ ಮೂರ್ತಿ ಹಾಗೂ ಯೋಗೀಶ್ ಎ.ಎನ್ ನೀಡಿದ್ದಾರೆ.
ತಾರಾಗಣದಲ್ಲಿ ಸರಕಾರಿ ಹಿ.ಪ್ರಾ ಶಾಲೆ ಖ್ಯಾತಿಯ ದಡ್ಡ ಪ್ರವೀಣ ರಂಜನ್ ಕಾಸರಗೋಡು, ವೆನ್ಯ ರೈ, ಜ್ಯೋತಿಶ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ರಾಜ್ ಉಪ್ಪಳ, ಚೇತನ್ ರೈ ಮಾಣಿ, ರವಿ ರಾಮಕುಂಜ, ಸುರೇಶ್ ಮಂಜೇಶ್ವರ, ಪ್ರಭಾಕರ್ ಕಾಸರಗೋಡು , ತೇಜಸ್ವಿನಿ ಕಿಶೋರ್, ಸಂದೀಪ್ ಭಕ್ತ, ಆಶಾ ಮಾರ್ನಾಡ್, ನಯನ ಸಾಲ್ಯಾನ್, ದೀಕ್ಷಾ ಭಾಗ್ಯರಾಜ್ ನಾವೂರು, ವಿನೋದ್ ಶೆಟ್ಟಿ ಸಂಕೇತ್, ಉದಯ ಶೆಟ್ಟಿ ಇಡ್ಯಾ, ಉತ್ಸವ್ ವಾಮಂಜೂರ್, ತುಳಸೀಧರನ್, ಶಶಿ ಗುಜರನ್ ಪಡುಬಿದ್ರಿ ನಟಿಸಿದ್ದಾರೆ.
Much awaited Kannada film Aratat to releases on June 21 from Mangalore team. Mangalore P.N.R. The director of the film Pushparaj Rai Malarbidu has informed that the Kannada movie "Aarat" produced under the production banner will be released on June 21 in all theaters of the coastal districts.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm