ಬ್ರೇಕಿಂಗ್ ನ್ಯೂಸ್
21-06-24 11:08 pm Mangalore Correspondent ಕರಾವಳಿ
ಮಂಗಳೂರು, ಜೂನ್.21: “ಯೋಗ ಮತ್ತು ಯೋಗ್ಯತೆ ಎರಡೂ ಕೂಡಿ ಬಂದಾಗ ಮಾತ್ರ ವಿಕಾಸ ಸಾಧ್ಯ. ಆದರೆ ಎರಡೂ ಫಲಿಸಬೇಕೆಂದರೆ ಅತ್ಯಗತ್ಯ ನಮ್ಮ ಪ್ರಯತ್ನ. ದಕ್ಷಿಣ ಕನ್ನಡ ಎಂಬ ಸಾಧ್ಯತೆಗಳ ಸಾಗರದಲ್ಲಿ ಅಭಿವೃದ್ಧಿಯ ಒಂದು ನವಯುಗ ಪ್ರಾರಂಭಿಸಲು ನಾವೆಲ್ಲ ಸೇರಿ ಈ ನವಪಥದಲ್ಲಿ ನವ ಪ್ರಯತ್ನಗಳನ್ನು ಮಾಡಬೇಕು. ಇಡಿ ವಿಶ್ವವೇ ನಮ್ಮ ದಕ್ಷಿಣ ಕನ್ನಡದತ್ತ ನೋಡುವಂತೆ ಮಾಡಬೇಕು ಎಂಬ ಆಶಯದಿಂದ ಈಗಾಗಲೇ ಸಾಹಸ ಕ್ರೀಡೆಗಳ ಮೂಲಕ ಅಂತರಾಷ್ಟ್ರೀಯ ಪ್ರವಾಸೋದ್ಯಮದ ನಕ್ಷೆಯಲ್ಲಿ ತನ್ನ ಸ್ಥಾನವನ್ನು ಕಲ್ಪಿಸಿದ ಸಸಿಹಿತ್ಲು ಕಡಲ ತೀರದಲ್ಲಿ ಇಂದು “ಯೋಗ ವಿದ್ ಯೋಧ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.
ಸಸಿಹಿತ್ಲು ಬೀಚಿನಲ್ಲಿ ನಡೆದ “ಯೋಗ ವಿದ್ ಯೋಧ” ವಿಶ್ವ ಯೋಗ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರಮುಖ ಕ್ರೀಡಾಪಟುಗಳು, ನಿವೃತ್ತ ಸೇನಾಧಿಕಾರಿಗಳು, ಚಲನಚಿತ್ರ ನಟರು, ಸಮಾಜ ಸೇವಕರು ಮತ್ತು ಇತರ ಗಣ್ಯರು ಸೇರಿ ಸಮುದ್ರ ತಟದ ಪ್ರಶಾಂತ ವಾತಾವರಣದಲ್ಲಿ ಯೋಗಾಭ್ಯಾಸ ಮಾಡಿದರು.
“ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವಸಂಸ್ಥೆಗೆ ಶಿಫಾರಸು ಮಾಡಿ ಕಳೆದ ಹತ್ತು ವರ್ಷಗಳಿಂದ ಲೋಕದೆಲ್ಲೆಡೆ ಯೋಗ ಒಂದು ಜಾಗತಿಕ ಹಬ್ಬವಾಗಿ ಆಚರಿಸಲ್ಪಡುತ್ತಿದೆ. ಈ ಹಬ್ಬದಲ್ಲಿ ಇಂದು ನಾವೆಲ್ಲ ಸೇರಿರುವುದು ಅತ್ಯಂತ ಉತ್ಸಾಹ ತಂದಿದೆ ಎಂದು ಸಂಸದರು ಹೇಳಿದರು.
“ಮುಂಬರುವ ದಿನಗಳಲ್ಲಿ ಸಸಿಹಿತ್ಲು ಬೀಚ್ ಸಾಹಸ ಕ್ರೀಡೆಗಳ ಒಂದು ದೊಡ್ಡ ತಾಣವಾಗಲಿ. ಇದಕ್ಕೆ ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡಲು ನಾವು ಬದ್ಧರಾಗಿದೇವೆ” ಎಂದು ಸಂಸದರು ಹೇಳಿದರು. ಸಂಸದರಾಗಿ ಆಯ್ಕೆಯಾದ ಬಳಿಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಘಟಿಸಿದ ಮೊದಲ ಕಾರ್ಯಕ್ರಮ “ಯೋಗ ವಿದ್ ಯೋಧ” ಯಶಸ್ವಿಯಾಗಿ ನಡೆಯಿತು. ಯೋಗ ಶಿಕ್ಷಕಿ ಶ್ರದ್ಧಾ ಸಂದೇಶ್ ರೈ ಯೋಗಾಭ್ಯಾಸವನ್ನು ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಈಶ್ವರ್ ಪ್ರಸಾದ್ ಶೆಟ್ಟಿ ನಿರೂಪಿಸಿದರು.
Yoga day with Mangalore MP Brijesh Chowta at Sasihitlu Beach in Mangalore. He was speaking at the "Yoga with Yodha" World Yoga Day celebrations at Sasihitlu Beach. Prominent sportspersons, retired army officers, film actors, social workers and other dignitaries of the district gathered at the seaside resort.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm