ಬ್ರೇಕಿಂಗ್ ನ್ಯೂಸ್
27-06-24 07:14 pm HK News Desk ಕರಾವಳಿ
ಮಂಗಳೂರು, ಜೂ.27: ಅರ್ಜುನ ಪ್ರಶಸ್ತಿ ಪುರಸ್ಕೃತ ಭಾರತೀಯ ವೃತ್ತಿಪರ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ, ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎನ್ಐಟಿಕೆ) ಕರ್ನಾಟಕ ಇದರ ಹಳೆ ವಿದ್ಯಾರ್ಥಿ ಡಾ.ಸುಹಾಸ್ ಲಾಲಿನಕೆರೆ ಯತಿರಾಜ್ ಅವರು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ನ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ನಂಬರ್ ವನ್ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿದ್ದಾರೆ.
ಕರ್ನಾಟಕದ ಹಾಸನ ಮೂಲದ ಸುಹಾಸ್ ಸುರತ್ಕಲ್ ಎನ್ ಐಟಿಕೆಯಲ್ಲಿ 2004ರ ಬ್ಯಾಚ್ ನಲ್ಲಿ ಬಿಟೆಕ್ ವಿದ್ಯಾರ್ಥಿಯಾಗಿದ್ದರು. ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನಕ್ಕೇರಿದ್ದು ತನ್ನ ಹತ್ತಿರದ ಪ್ರತಿಸ್ಪರ್ಧಿ ಫ್ರಾನ್ಸ್ ನ ಲುಕಾಸ್ ಮಝೂರ್ ಅವರನ್ನು ಹಿಂದಿಕ್ಕಿದ್ದಾರೆ. ಡಾ.ಸುಹಾಸ್ ಎಲ್ ಯತಿರಾಜ್ ಅವರು ಪ್ರಸ್ತುತ ಉತ್ತರ ಪ್ರದೇಶದಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಫೆಬ್ರವರಿ 2023 ರಿಂದ ಉತ್ತರ ಪ್ರದೇಶ ಸರ್ಕಾರದ ಯುವಜನ ಕಲ್ಯಾಣ ಮತ್ತು ಪ್ರಾಂತೀಯ ರಕ್ಷಕ್ ದಳದ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕ ಸ್ಥಾನದಲ್ಲಿದ್ದಾರೆ. ಅವರು ಈ ಹಿಂದೆ ಗೌತಮ್ ಬುದ್ಧ ನಗರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಸೇವೆ ಸಲ್ಲಿಸಿದ್ದು ಜನಮನ್ನಣೆ ಪಡೆದಿದ್ದರು.
ಆಡಳಿತಾತ್ಮಕ ಜವಾಬ್ದಾರಿಯ ಜೊತೆಗೆ ಸುಹಾಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುವಾಗಿದ್ದು, ಅಂತರರಾಷ್ಟ್ರೀಯ ವೇದಿಕೆಯಲ್ಲಿ ರಾಷ್ಟ್ರವನ್ನು ಹೆಮ್ಮೆಯಿಂದ ಪ್ರತಿನಿಧಿಸುತ್ತಿದ್ದಾರೆ. ಸುರತ್ಕಲ್ ಎನ್ ಐಟಿಕೆ ಡಾ.ಸುಹಾಸ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. 2019 ರಲ್ಲಿ ಎನ್ಐಟಿಕೆಯ ವಜ್ರ ಮಹೋತ್ಸವ ವರ್ಷದಲ್ಲಿ ಅವರನ್ನು ವಿಶೇಷ ಹಳೆಯ ವಿದ್ಯಾರ್ಥಿ ಎಂದು ಗೌರವಿಸಲಾಗಿತ್ತು.
ಸುಹಾಸ್ ಗಮನಾರ್ಹ ಸಾಧನೆಗಳು
• ಡಾ.ಸುಹಾಸ್ ಪ್ರಸ್ತುತ ಪ್ಯಾರಾ ಬ್ಯಾಡ್ಮಿಂಟನ್ ವಿಭಾಗದ ಪುರುಷರ ಸಿಂಗಲ್ಸ್ ನಲ್ಲಿ ವಿಶ್ವದ ನಂ.1 ಸ್ಥಾನದಲ್ಲಿದ್ದಾರೆ.
• ಟೋಕಿಯೊ ಪ್ಯಾರಾಲಿಂಪಿಕ್ಸ್ 2021 ರಲ್ಲಿ ಎಸ್ಎಲ್ -4 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
• ಮಾರ್ಚ್ 2018 ರಲ್ಲಿ ವಾರಣಾಸಿಯಲ್ಲಿ ನಡೆದ ಎರಡನೇ ರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸುಹಾಸ್ ಚಿನ್ನದ ಪದಕ ಗೆದ್ದರು.
• ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆದ್ದ ಮೊದಲ ಭಾರತೀಯ ಅಧಿಕಾರಿ. ಚೀನಾದ ಬೀಜಿಂಗ್ ನಲ್ಲಿ ನಡೆದ 2016 ರ ಏಷ್ಯನ್ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ, ಸುಹಾಸ್ ವೃತ್ತಿಪರ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆದ್ದ ಮೊದಲ ಭಾರತೀಯ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಅಜಂಗಢದ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ ಫೈನಲ್ ನಲ್ಲಿ ಇಂಡೋನೇಷ್ಯಾದ ಹ್ಯಾರಿ ಸುಸಾಂಟೊ ಅವರನ್ನು ಸೋಲಿಸುವ ಮೂಲಕ ಸುಹಾಸ್ ಚಿನ್ನದ ಪದಕ ಗಳಿಸಿದ್ದರು.
• ಯಶ್ ಭಾರತಿ ಪ್ರಶಸ್ತಿ: ಪ್ಯಾರಾ ಸ್ಪೋರ್ಟ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನಕ್ಕಾಗಿ ಡಿಸೆಂಬರ್ 2016 ರಲ್ಲಿ, ಸುಹಾಸ್ ಉತ್ತರ ಪ್ರದೇಶದ ಅತ್ಯುನ್ನತ ನಾಗರಿಕ ಗೌರವವಾದ ಯಶ್ ಭಾರತಿ ಪ್ರಶಸ್ತಿಯನ್ನು ಪಡೆದರು.
• ಐಎಎಸ್ ಅಧಿಕಾರಿ ಮತ್ತು ಪ್ಯಾರಾಲಿಂಪಿಕ್ಸ್ ಪದಕ ವಿಜೇತ: ಪ್ಯಾರಾಲಿಂಪಿಕ್ಸ್ ಪದಕ ಮತ್ತು ಅರ್ಜುನ ಪ್ರಶಸ್ತಿ ಎರಡನ್ನೂ ಗೆದ್ದ ಭಾರತದ ಏಕೈಕ ಐಎಎಸ್ ಅಧಿಕಾರಿ ಸುಹಾಸ್.
Emerging as the new world number 1 in the Men’s Singles category, Mr Suhas has surpassed the long-standing leader, Lucas Mazur of France, marking his first-ever ascent to the pinnacle of the sport. Mr. Suhas is currently posted in Sports Department of Uttar Pradesh as Secretary. He is India’s first IAS officer to win a medal at the Paralympics.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm