ಬ್ರೇಕಿಂಗ್ ನ್ಯೂಸ್
27-06-24 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಮತ್ತೊಬ್ಬ ಯುವತಿ ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದಾರೆ. ಬೆಳ್ತಂಗಡಿಯಲ್ಲಿ ವಿದ್ಯುತ್ ಕಂಬದ ಸ್ಟೇ ವೈರ್ ಗೆ ವಿದ್ಯುತ್ ಪ್ರವಹಿಸಿ ಯುವತಿ ಸಾವನಪ್ಪಿದ್ದಾಳೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತ ಯುವತಿ. ಮನೆ ಬಳಿಯ ರಸ್ತೆಗೆ ಪಾರ್ಸೆಲ್ ಬಂತು ಎಂದು ಯುವತಿ ಮಳೆ ಬರುತ್ತಿದ್ದಾಗಲೇ ರಸ್ತೆಗೆ ಬಂದಿದ್ದಳು. ಈ ವೇಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ್ದು ಯುವತಿ ಶಾಕ್ ಆಗಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ. ವಿದ್ಯುತ್ ಕಂಬಕ್ಕೆ ಕೊಡುವ ಕಬ್ಬಿಣದ ಸ್ಟೇ ತಂತಿಯ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿತ್ತು ಎನ್ನಲಾಗಿದೆ. ಯುವತಿ ತನ್ನ ತಂದೆಯ ಎದುರಲ್ಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದು ರಕ್ಷಣೆಗೆ ಧಾವಿಸಿದ ಅವರಿಗೂ ಶಾಕ್ ತಗುಲಿದೆ.
ಯುವತಿಯನ್ನು ಕೂಡಲೇ ಬೆಳ್ತಂಗಡಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು. ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆಗೆ ಸಂತ್ರಸ್ತ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡುವಂತೆ ಸ್ಪೀಕರ್ ಯುಟಿ ಖಾದರ್ ಸೂಚನೆ ನೀಡಿದ್ದಾರೆ. ಮಳೆಯಿಂದಾಗಿ ಎರಡು ದಿನಗಳಲ್ಲಿ ಏಳು ಜನ ಮೃತಪಟ್ಟಿದ್ದು ಜಿಲ್ಲಾಡಳಿತ ಪ್ರಾಣ ಹಾನಿಯಾಗದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.
Heavy rains, 20 year old dies of current shock at Belthangady in Mangalore. Mangalore reports seven deaths in just two days time.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm