ಬ್ರೇಕಿಂಗ್ ನ್ಯೂಸ್
28-06-24 10:21 pm Mangalore Correspondent ಕರಾವಳಿ
ಮಂಗಳೂರು, ಜೂನ್ 28: ತನ್ನ ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಸುಳ್ಯ ಮೂಲದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ದೀವ್ಸ್ ಎಂಬಸ್ಸಿ ಕಚೇರಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ವಿದ್ಯಮಾನ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂನ್ 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ದೀವ್ಸ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕಿದ್ದು, ತಂದೆಯ ನಿಧನ ವಿಷಯ ತಿಳಿದು ಊರಿಗೆ ಬರಲು ಪ್ರಯತ್ನ ಮಾಡಿದ್ದರು. ಆದರೆ, ಕಂಪನಿಯವರು ರಜೆಯನ್ನೂ ಕೊಡದೆ ಕೆಲಸ ಬಿಟ್ಟು ಹೋಗದಂತೆ ಪಾಸ್ಪೋರ್ಟ್ ಪ್ರತಿಯನ್ನೇ ತೆಗೆದಿಟ್ಟಿದ್ದರು. ಇತ್ತ ಮನೆಯವರು ಏಕೈಕ ಮಗ ವಿದೇಶದಿಂದ ಬರುತ್ತಾನೆಂದು ಜೂನ್ 20ರದು ಗುರುಪ್ರಸಾದ್ ನಿಧನ ಆಗಿದ್ದರೂ, 24ರ ವರೆಗೂ ಕಾದಿದ್ದರು. ಕೊನೆಗೆ, ತ್ರಿಶೂಲ್ ತನಗೆ ಬರಲಾಗುವುದಿಲ್ಲ, ನೀವು ಅಂತ್ಯಕ್ರಿಯೆ ಪೂರ್ತಿಗೊಳಿಸಿ ಎಂದು ಹೇಳಿದ್ದರಿಂದ ಅಂತ್ಯಕ್ರಿಯೆ ನೆರವೇರಿಸಿದ್ದರು.
ಜೂನ್ 24ರಂದು ಸಂಸದ ಬ್ರಿಜೇಶ್ ಚೌಟ ಪ್ರಮಾಣ ವಚನಕ್ಕಾಗಿ ದೆಹಲಿಗೆ ಹೋಗಿದ್ದಾಗಲೇ, ಗುರುಪ್ರಸಾದ್ ಅವರ ಹತ್ತಿರದ ಸಂಬಂಧಿಕ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದ ನಿವೃತ್ತ ಉಪನ್ಯಾಸಕ ರುಕ್ಮಯ ಗೌಡ ನೇರವಾಗಿ ಸಂಸದರಿಗೆ ಫೋನ್ ಕರೆ ಮಾಡಿದ್ದರು. ತ್ರಿಶೂಲ್ ನನ್ನು ಕರೆತರಲು ಸಹಾಯ ಮಾಡುವಂತೆ ಕೇಳಿಕೊಂಡಿದ್ದರು. ಕೂಡಲೇ ಸ್ಪಂದಿಸಿದ ಸಂಸದರು, ವಿದೇಶಾಂಗ ಇಲಾಖೆ ಮತ್ತು ಮಾಲ್ದೀವ್ಸ್ ಹೈಕಮಿಷನ್ ಗೆ ನೇರವಾಗಿ ಇಮೇಲ್ ಮೂಲಕ ಸಂದೇಶ ಕಳುಹಿಸಿದ್ದರು. ಸಂಸದರ ಮನವಿಗೆ ಮಾಲ್ದೀವ್ಸ್ ಭಾರತೀಯ ರಾಯಭಾರ ಕಚೇರಿಯಿಂದ ಪ್ರತಿಕ್ರಿಯೆ ಬಂದಿದ್ದು, ಯುವಕನ ಬಿಡುಗಡೆಗೆ ಪ್ರಯತ್ನಿಸುವ ಭರವಸೆ ಲಭಿಸಿತ್ತು.
ರಾಯಭಾರ ಕಚೇರಿಯ ಸೂಚನೆಯಂತೆ, ಖಾಸಗಿ ಕಂಪನಿಯ ಪ್ರತಿನಿಧಿಗಳು ಯುವಕನಿಗೆ ರಜೆ ಕೊಟ್ಟಿದ್ದಲ್ಲದೆ, ವೇತನ ಸಹಿತ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ, ಜೂನ್ 27ರ ಗುರುವಾರ ರಾತ್ರಿ ತ್ರಿಶೂಲ್ ಬೆಂಗಳೂರು ತಲುಪಿದ್ದು, ಅಲ್ಲಿಂದ ರಸ್ತೆ ಮೂಲಕ ಶುಕ್ರವಾರ ಬೆಳಗ್ಗೆ ಊರಿಗೆ ತಲುಪಿದ್ದಾರೆ. ಈ ಬಗ್ಗೆ ಫೋನ್ ಕರೆ ಮಾಡಿದ್ದ ರುಕ್ಮಯ ಗೌಡರಲ್ಲಿ ಕೇಳಿದಾಗ, ತ್ರಿಶೂಲ್ ಮಾಲ್ದೀವ್ಸ್ ತೆರಳಿ ಮುಂದಿನ ಅಕ್ಟೋಬರ್ ಗೆ ಎರಡು ವರ್ಷ ಆಗುತ್ತದೆ. ಅಲ್ಲಿ ವರೆಗೂ ರಜೆ ಕೊಡುವುದಿಲ್ಲ ಎಂದು ಕಂಪನಿಯವರು ಹಠ ಹಿಡಿದಿದ್ದರು. ಏಕೈಕ ಮಗ ಆಗಿದ್ದರಿಂದ ನಾವು ಮೃತದೇಹವನ್ನು ಮಂಗಳೂರಿನಲ್ಲೇ ಇಟ್ಟು ನಾಲ್ಕು ದಿನ ಕಾದೆವು. ಕೊನೆಗೆ, ಅಂತ್ಯಕ್ರಿಯೆ ಮಾಡಿದ್ದೆವು. ಸಂಸದರಿಗೆ ಕರೆ ಮಾಡಿದಾಗ ತುರ್ತು ಸ್ಪಂದಿಸಿ ತುಂಬ ಉಪಕಾರ ಮಾಡಿದ್ದಾರೆ. ಅದನ್ನು ಯಾವತ್ತೂ ಮರೆಯುವುದಿಲ್ಲ ಎಂದಿದ್ದಾರೆ.
Sullia youth stuck in Maldives, mangalore mp captian Brijesh Chowta gets him after intervening with embassy. Thrishool who was held by the company by not allowing him to attend his father's funeral was safely brought back to Sullia after the intervention of MP
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm