ಬ್ರೇಕಿಂಗ್ ನ್ಯೂಸ್
01-07-24 10:15 pm Mangalore Correspondent ಕರಾವಳಿ
ಮಂಗಳೂರು, ಜುಲೈ.1: ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಆಳ್ವಾರಿಸ್ ಒತ್ತಾಯಿಸಿದರು.
ಸೋಮವಾರ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೋಗ್ಲಿಂಗ್ ಸ್ಮರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್ ಮಾತನಾಡಿ, ಹರ್ಮನ್ ಮೋಗ್ಲಿಂಗ್ ಅವರು ಮಂಗಳೂರ ಸಮಾಚಾರ ಪತ್ರಿಕೆಯನ್ನು ಆರಂಭಿಸುವ ಮೂಲಕ ನೈಜ ಪತ್ರಿಕಾ ಧರ್ಮದ ಅಡಿಪಾಯ ಹಾಕಿದ್ದರು. ಇವತ್ತಿನ ಸಂದರ್ಭದಲ್ಲಿ ಪತ್ರಿಕಾ ಧರ್ಮವನ್ನು ಪಾಲಿಸುವ ಬಗ್ಗೆ ಬದ್ಧತೆಯಿಂದ ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಮ್.ವಾಟ್ಸನ್ ಮಾತನಾಡಿ, ಕಿಟೆಲ್, ಮೋಗ್ಲಿಂಗ್, ಬ್ರಿಗೆಲ್, ಗುಂಡರ್ಟ್ ಮೊದಲಾದ ಯುಗ ಪ್ರವರ್ತಕರ ನೆನಪಿನಲ್ಲಿ ಬಾಸೆಲ್ ಮಿಷನ್ ಮ್ಯೂಸಿಯಂ ಆರಂಭಿಸುವ ಉದ್ದೇಶ ಇದೆ ಎಂದು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವ ಅಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ ಕಾರ್ಯಕ್ರಮ ನಿರ್ವಹಿಸಿದರು.
Karnataka Konkani Sahitya Akademi President Stany Alvares has requested that a circle be built in the name of Reverend Herman Mogling, who was the editor of Mangalore Samachar, the first Kannada newspaper.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm