ಬ್ರೇಕಿಂಗ್ ನ್ಯೂಸ್
04-07-24 10:04 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ಸಮಯದಲ್ಲಿ ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಲ್ಪನೆ ಸಾಕಾರಗೊಳಿಸಲು ಮುನ್ನುಡಿ ಬರೆದಿದ್ದಾರೆ.
ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೋವಾಲ್ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಂಗಳೂರು ಎನ್‌ಎಮ್‌ಪಿಎ ಬಂದರು ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್‌ಮಾಲಾ ಯೋಜನೆ ಅಡಿಯಲ್ಲಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ ಮತ್ತು ಕ್ರೂಸ್ ಟರ್ಮಿನಲ್ ನಿರ್ಮಾಣದ ಕುರಿತು ಚರ್ಚೆ ನಡೆಸಿದರು.
ಹಾಗೆಯೇ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೇ ಯೋಜನೆಗಳ ಪ್ರಗತಿ, ಸಮಸ್ಯೆ ಮತ್ತು ಸಾಧ್ಯತೆಗಳ ಕುರಿತು ಚರ್ಚಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ಚೌಟ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದ್ದು, ಶಿರಾಡಿ ಘಾಟಿಯ ಮೂಲಕ ಹಾದು ಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಳಿಕೊಂಡಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡದಲ್ಲಿ ಪೆಟ್ರೋಲಿಯಂ ಇಲಾಖೆಗೆ ಸಂಬಂಧಿಸಿದ ಮತ್ತು ಜಿಲ್ಲೆಯ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಕೇಳಿಕೊಂಡರು. ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪಿಸುವ ಸಾಧ್ಯತೆಗಳ ಬಗ್ಗೆ ಹಾಗೂ ಅದರಿಂದ ಸೃಷ್ಟಿಯಾಗುವ ಉದ್ಯೋಗಗಳನ್ನು ಸ್ಥಳೀಯರಿಗೆ ನೀಡುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರ್ಗದರ್ಶನ ಮತ್ತು ಸಹಕಾರ ನೀಡುವಂತೆ ಮನವಿ ಮಾಡಿದರು.
Mangalore MP Brijesh Chowta meets central ministers, seeks helps in development of Dakshina Kannada
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm