ಬ್ರೇಕಿಂಗ್ ನ್ಯೂಸ್
05-07-24 10:48 pm Mangalore Correspondent ಕರಾವಳಿ
ಮಂಗಳೂರು, ಜುಲೈ.5: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯಲ್ಲಿ ಪಕ್ಷದ ನಾಯಕರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪಕ್ಷದ ಪ್ರಮುಖರಿಗೆ ಕರೆ ನೀಡಿದ್ದಾರೆ.
ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಿದರು. ಸದ್ಯದಲ್ಲೇ ಅಭ್ಯರ್ಥಿ ಆಯ್ಕೆ ಕುರಿತು ಮಹತ್ವದ ಸಭೆ ನಡೆಸುತ್ತೇವೆ. ನಾಯಕರ ಮತ್ತು ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸುತ್ತೇವೆ. ಈ ಬಗ್ಗೆ ಯೋಚಿಸಿ ಮುಂದಡಿಯಿಡುತ್ತೇವೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶತಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.


ಸಭೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಶಾಸಕ ಅಶೋಕ್ ಕುಮಾರ್ ರೈ, ಲೋಕಸಭೆ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ವಿಧಾನಸಭಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ಮಹಮ್ಮದ್, ಜಿ.ಎ.ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಮುಖಂಡರಾದ ಯು.ಕೆ.ಮೋನು, ಸುರೇಶ್ ಬಳ್ಳಾಲ್, ಶಶಿಧರ್ ಹೆಗ್ಡೆ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಸಂಯೋಜಕರು ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿ, ವಂದಿಸಿದರು.
Health and Family Welfare Minister Dinesh Gundu Rao on Friday, July 5, exhorted party cadres to gear up for the elections to Karnataka Legislative Council from local bodies constituency of Dakshina Kannada.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm