ಬ್ರೇಕಿಂಗ್ ನ್ಯೂಸ್
09-07-24 07:47 pm Udupi Correspondent ಕರಾವಳಿ
ಉಡುಪಿ, ಜುಲೈ.9: ಟಿ20 ವಿಶ್ವಕಪ್ ಜಯದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನ ವತಿಯಿಂದ ದಂಪತಿಗೆ ವಿಶೇಷ ಸ್ವಾಗತ ಕೋರಲಾಯಿತು.
ಇದೇ ವೇಳೆ, ನೂತನವಾಗಿ ನಿರ್ಮಾಣವಾಗುತ್ತಿರುವ ಕಾಪು ಶ್ರೀ ಹಳೆ ಮಾರಿಗುಡಿ ದೇವಸ್ಥಾನಕ್ಕೆ ಸೂರ್ಯಕುಮಾರ್ ದಂಪತಿ ಭೇಟಿ ನೀಡಿದರು. ದೇವಸ್ಥಾನದ ನಿರ್ಮಾಣ, ಕೆತ್ತನೆ ಶಿಲ್ಪಕಲೆಯ ಬಗ್ಗೆ ಕ್ರಿಕೆಟಿಗ ಮಾಹಿತಿ ಪಡೆದುಕೊಂಡರು. ಇಳಕಲ್ ಶಿಲೆಯಲ್ಲಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಗರ್ಭಗುಡಿ, ಉಚ್ಚಂಗಿ ಗುಡಿ, ಸುತ್ತುಪೌಳಿ ಕಾಮಗಾರಿ ಶೇ.90 ಭಾಗ ಪೂರ್ಣವಾಗಿದೆ. ಮುಂದಿನ ಮಾರ್ಚ್ 2 ರಂದು ಬ್ರಹ್ಮಕಲಶ ಮಹೋತ್ಸವಕ್ಕೆ ದಿನ ನಿಗದಿಯಾಗಿದೆ.
![]()

![]()
ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿ ಸಿಕ್ಕಿದೆ. ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯ್ತು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭ ಬರಬೇಕು ಎಂಬ ಇಚ್ಛೆ ಇದೆ. ಆ ಸಂದರ್ಭದಲ್ಲಿ ಅವಕಾಶ ಸಿಕ್ಕರೆ ಖಂಡಿತವಾಗಿ ಬರುತ್ತೇನೆ ಎಂದು ತಿಳಿಸಿದರು.
ಮುಂಬೈನಲ್ಲಿ ವರ್ಲ್ಡ್ ಕಪ್ ಸೆಲೆಬ್ರೇಶನ್ ಜನಸ್ತೋಮ ನೋಡಿ ಬಹಳ ಖುಷಿಯಾಯಿತು. ಕಾಪುವಿನಲ್ಲಿ ಕೂಡ ಜನರು ಪ್ರೀತಿಯಿಂದ ಬರಮಾಡಿಕೊಂಡಿದ್ದು ಮನಸ್ಸಿಗೆ ತಟ್ಟಿದೆ. ದೇವಸ್ಥಾನದಲ್ಲಿ ಇಷ್ಟು ಮಂದಿ ಸೇರುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ ಎಂದು ಖುಷಿ ವ್ಯಕ್ತಪಡಿಸಿದರು.
‘ಕಾಪುದ ಅಮ್ಮ’ (ಕಾಪುವಿನ ತಾಯಿ) ಎಂದು ಪತ್ನಿಯ ಪ್ರಭಾವದಿಂದ ತುಳುವಿನಲ್ಲಿ ಮಾತನಾಡಿದ ಕ್ರಿಕೆಟರ್ ಸೂರ್ಯ ಕುಮಾರ್, ಟೀಮ್ ಇಂಡಿಯಾ ಕಪ್ತಾನನಾಗಿ ಕಾಪುವಿಗೆ ಬನ್ನಿ ಎಂದು ಅರ್ಚಕರು ಪ್ರಾರ್ಥಿಸಿದ್ದಕ್ಕೆ ಪ್ರತಿಕ್ರಿಯಿಸಿ, ತಂಡದ ಕಪ್ತಾನ ಆಗೋದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿ. ದೇವರು ಇಚ್ಛಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ ಎಂದು ಹೇಳಿದರು.
ಪತ್ನಿ ದೇವಿಶಾ ಮಾತನಾಡಿ, ಕಾಪು ಮಾರಿಗುಡಿಗೆ ಬಂದು ಮನಸ್ಸಿಗೆ ಖುಷಿಯಾಗಿದೆ. ಐದು ವರ್ಷದ ಹಿಂದೆ ನಾವು ಒಮ್ಮೆ ಉಡುಪಿಗೆ ಬಂದಿದ್ದೆವು. ಮತ್ತೊಮ್ಮೆ ಕಾಪು ಅಮ್ಮನಲ್ಲಿಗೆ ಬರಬೇಕು ಎಂಬ ಇಚ್ಛೆ ಇತ್ತು. ಯಾವುದೇ ಟೂರ್ನಿ ಇಲ್ಲದಿದ್ದರೆ ದೇಗುಲ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಬರುತ್ತೇವೆ. ಕಾಪು ಮಾರಿಯಮ್ಮನನ್ನು ನೋಡಲು ಪತಿಯನ್ನೂ ಕರೆದುಕೊಂಡು ಬಂದಿದ್ದೇನೆ. ದೇವಿಯಲ್ಲಿ ಏನು ಪ್ರಾರ್ಥಿಸಿದ್ದೇನೆ ಎಂದು ಹೇಳುವುದಿಲ್ಲ. ದೇವರಿಗೆ ಸೇವೆ ಕೊಡಬೇಕು ಎಂಬ ಸಂಕಲ್ಪ ಇತ್ತು. ದೇವರಿಗೆ ಸಲ್ಲಿಸಿದ ಕಾಣಿಕೆಯನ್ನು ಹೇಳಿಕೊಳ್ಳಲು ಇಷ್ಟವಿಲ್ಲ. ಭಾರತವನ್ನು ಪ್ರತಿನಿಧಿಸಬೇಕು ಮತ್ತು ವರ್ಲ್ಡ್ ಕಪ್ ಗೆಲ್ಲಬೇಕು ಎಂಬುದು ಎಲ್ಲಾ ಕ್ರಿಕೆಟರ್‌ಗಳ ಕನಸು. ಒಂದು ಕನಸು ಸಾಕಾರಗೊಂಡಿದೆ ಎಂಬ ಖುಷಿ ಇದೆ. ಇಂತಹ ಹಲವಾರು ಕನಸುಗಳನ್ನು ಕಂಡು ಮುಂದೆ ಸಾಗಬೇಕಾಗಿದೆ ಎಂದರು.
While Suryakumar spoke in Hindi, Devisha impressed everyone by speaking in Tulu. Suryakumar mentioned that his life improved significantly after visiting this temple and promised to return next year if he is not on tour.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm