ಬ್ರೇಕಿಂಗ್ ನ್ಯೂಸ್
10-07-24 01:52 pm Mangalore Correspondent ಕರಾವಳಿ
ಮಂಗಳೂರು, ಜುಲೈ.10: ಕಾಂಗ್ರೆಸ್ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯ ಕೆನ್ನೆಗೆ ಹೊಡೆಯಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಬಿಎನ್ಎಸ್ 353 ಮತ್ತಿತರ ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.





ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಕಾವೂರಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಭರತ್ ಶೆಟ್ಟಿ ವಿವಾದಾತ್ಮಕ ಮಾತುಗಳನ್ನಾಡಿದ್ದರು. ರಾಹುಲ್ ಗಾಂಧಿ ಒಬ್ಬ ಹುಚ್ಚನ ರೀತಿ ವರ್ತಿಸುತ್ತಿದ್ದಾರೆ. ಆತನಿಗೆ ಸ್ಥಿಮಿತ ಇಲ್ಲ. ಯಾರಾದ್ರೂ ಸಂಸತ್ತಿನ ಒಳಗಡೆಯೇ ಆತನ ಕಪಾಳಕ್ಕೆ ಹೊಡೆಯಬೇಕು. ಆತ ಈ ಕಡೆ ಬಂದರೆ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ತಾಕತ್ತಿದ್ದರೆ ನಮ್ಮ ಒಬ್ಬ ಕಾರ್ಯಕರ್ತನಿಗೆ ಹೊಡೆದು ನೋಡಲಿ ಎಂದಿದ್ದಲ್ಲದೆ, ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕೆಂದು ಆಗ್ರಹ ಮಾಡಿದ್ದರು.
ಭರತ್ ಶೆಟ್ಟಿ ವಿರುದ್ಧ ಮಹಾನಗರ ಪಾಲಿಕೆಯ ಕಚೇರಿ ಮುಂಭಾಗದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದು, ಭರತ್ ಶೆಟ್ಟಿ ಮುಖವಾಡ ತೊಟ್ಟು ಧಿಕ್ಕಾರ ಕೂಗಿದ್ದಾರೆ.
Mangalore Police book FIR on MLA Bharath Shetty for his remarks on Rahul Gandhi. Karnataka BJP MLA Bharat Shetty on Monday, July 8, stirred a major controversy, saying the Leader of the Opposition (LoP) Rahul Gandhi should be locked up and slapped inside the Parliament for his alleged anti-Hindu remarks.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm