ಬ್ರೇಕಿಂಗ್ ನ್ಯೂಸ್
07-12-20 12:53 pm Mangalore Correspondent ಕರಾವಳಿ
ಮುಲ್ಕಿ, ಡಿಸೆಂಬರ್,7: ತಾಯಿ - ಮಗ ನಡೆದುಕೊಂಡು ಹೋಗುತ್ತಿದ್ದ ವೇಳೆ ಟೆಂಪೋ ಡಿಕ್ಕಿಯಾಗಿದ್ದು ತಾಯಿ ಮೃತಪಟ್ಟರೆ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹಳೆಯಂಗಡಿ ಬಸ್ಸು ನಿಲ್ದಾಣದ ಬಳಿಯ ನಿವಾಸಿ ಸುಖಲತ (44), ಅವರ ಮಗ ಚಿರಾಗ್(10) ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ತಾಯಿ ಮತ್ತು ಮಗನಿಗೆ ಡಿಕ್ಕಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಡಿವೈಡರ್ ಮೇಲೇರಿ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ.
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ತಾಯಿ - ಮಗ ಗಂಭೀರ ಗಾಯಗೊಂಡಿದ್ದಾರೆ. ಇಬ್ಬರನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಸುಖಲತ (42) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಗ ಚಿರಾಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೃತ ಸುಖಲತಾ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು ಹಳೆಯಂಗಡಿಯಲ್ಲಿ ನೆಲೆಸಿದ್ದಾರೆ. ಮಗ ಚಿರಾಗ್ ಮುಲ್ಕಿ ಮಹರ್ಷಿ ಶಾಲೆಯ ವಿದ್ಯಾರ್ಥಿ. ಸುರತ್ಕಲ್ ಟ್ರಾಫಿಕ್ ಪೊಲೀಸರು ಟೆಂಪೋ ಚಾಲಕನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
A woman was killed when a Speeding Tempo Rammed while they she was walking along with her 10-Year-Old son at Mulki. The Son is admitted to a private hospital in Mangalore.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm