ಬ್ರೇಕಿಂಗ್ ನ್ಯೂಸ್
15-07-24 11:36 am Mangalore Correspondent ಕರಾವಳಿ
ಉಳ್ಳಾಲ, ಜುಲೈ 15: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬಸ್ಥರು ಭಾಗಿಯಾಗಿದ್ದಾರೆ.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಆಕೆಯ ಪತಿ ಕ್ರಿಕೆಟಿಗ ಕೆ.ಎಲ್.ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಕೈಫ್ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು 9 ಮಂದಿ ಆಗಮಿಸಿದ್ದರು. ಮುಂಬೈನ ಉದ್ಯಮಿಯೊಬ್ಬರು ಎರಡು ತಿಂಗಳ ಹಿಂದೆ ಹರಕೆ ಕೋಲ ಬರೆಸಿದ್ದರು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದುಕೊಂಡರೆ, ರಾಹುಲ್ ಮತ್ತು ಅಹಾನ್ ಶೆಟ್ಟಿ ಕೋಲದಲ್ಲಿ ಭಾಗಿಯಾಗಿದ್ದಾರೆ.




ಭಾನುವಾರ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಪ್ರಮುಖರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
Katrina Kaif made a splash at Anant Ambani and Radhika Merchant's wedding celebration over the weekend, dishing out couple goals as she posed with Vicky Kaushal. The actress had a brief stay in Mumbai and quickly jetted off to an undisclosed location post the festivity.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm