ಬ್ರೇಕಿಂಗ್ ನ್ಯೂಸ್
15-07-24 08:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯಿಂದ ಜುಲೈ 16ರ ವರೆಗೂ ರೆಡ್ ಅಲರ್ಟ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮುಂಡಗೋಡ, ಹಳಿಯಾಳ ತಾಲೂಕು ಹೊರತುಪಡಿಸಿ ಉಳಿದ ಹತ್ತು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿ ರಜೆ ನೀಡಿದ್ದರಿಂದ ಮಕ್ಕಳಿಗೆ ಸ್ವಲ್ಪಮಟ್ಟಿಗೆ ಗೊಂದಲ ಆಗಿತ್ತು. ಬೆಳಗ್ಗೆ 6.30ರ ವೇಳೆಗೆ ರಜೆಯ ಆದೇಶದ ಪ್ರಕಟಣೆ ನೀಡಲಾಗಿತ್ತು. ಅದು ಜನಸಾಮಾನ್ಯರಿಗೆ ತಲುಪುವ ಹೊತ್ತಿಗೆ ಕೆಲವು ಕಡೆ ಮಕ್ಕಳು ಶಾಲೆಗೆ ಹೊರಟಾಗಿತ್ತು. ಅನಂತರ, ಶಾಲೆಗಳಿಗೆ ಹಿಂತಿರುಗಿದ ವಿದ್ಯಮಾನವೂ ಆಗಿತ್ತು. ಸೋಮವಾರ ಇಡೀ ದಿನ ಮಳೆಗಿಂತ ಗಾಳಿಯೇ ಜೋರಾಗಿತ್ತು. ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗಿತ್ತು. ಆನಂತರ, ಮಳೆಗೆ ಕೊಂಚ ಬಿಡುವು ಇತ್ತಾದರೂ, ಗಾಳಿ ಆಗಿಂದಾಗ್ಗೆ ಜೋರಾಗಿಯೇ ಬೀಸುತ್ತಿತ್ತು.
ಸಂಜೆ ಹೊತ್ತಿಗೆ, ಜುಲೈ 16ರ ಮಂಗಳವಾರವೂ ರೆಡ್ ಅಲರ್ಟ್ ನೀಡಿದ್ದು, ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಈ ಬಾರಿ ಕಳೆದೊಂದು ತಿಂಗಳಲ್ಲಿ ಮಳೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ದಿನ ರಜೆ ನೀಡಲಾಗಿದ್ದು, ಮಕ್ಕಳ ಪಾಲಿಗೆ ನೆಚ್ಚಿನ ಡಿಸಿಯಾಗಿ ಮುಲ್ಲೈ ಮುಗಿಲನ್ ಹೆಸರು ಪಡೆದಿದ್ದಾರೆ.
Due to high rainfall in the twin districts a holiday has been declared in Dakshina Kannada and Udupi districts for schools and pre-university colleges on Tuesday, July 16.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm