ಬ್ರೇಕಿಂಗ್ ನ್ಯೂಸ್
23-07-24 07:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕುರಿತು ಅವರಿಗಿರುವ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಮೋದಿ 3.0 ನ ಸಂಕಲ್ಪ ಪತ್ರದಲ್ಲಿ ಮಾಡಲಾದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು ಇಟ್ಟಿರುವ ಮೊದಲ ಹೆಜ್ಜೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದಂತೆ ಕೇಂದ್ರ ಬಜೆಟ್‌ನ ಒಂಬತ್ತು ಆದ್ಯತೆಗಳು ಚುನಾವಣೆ ಸಂದರ್ಭದಲ್ಲಿ ಹಾಕಿಕೊಂಡಿರುವ ಕಾರ್ಯಸೂಚಿ ‘ನವಯುಗ- ನವಪಥ'ಕ್ಕೆ ಪೂರಕವಾಗಲಿದೆ. ನಮ್ಮ 9 ಆದ್ಯತೆಗಳ ಗುರಿಯನ್ನು ಸಮರ್ಥವಾಗಿ ಪೂರ್ಣಗೊಳಿಸಲು ಈ ಬಜೆಟ್ ಸಹಕಾರಿಯಾಗಲಿದೆ. ಬಜೆಟ್ ನ ಒಂಬತ್ತು ಆದ್ಯತೆಗಳಲ್ಲಿ 1) ಕೃಷಿಯಲ್ಲಿನ ಉತ್ಪಾದಕತೆ ಮತ್ತು ಚೇತರಿಕೆ, 2) ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ, 3) ಅಂತರ್ಗತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ, 4) ಉತ್ಪಾದನೆ ಮತ್ತು ಸೇವೆಗಳು, 5) ನಗರಾಭಿವೃದ್ಧಿ, 6) ಇಂಧನ ಭದ್ರತೆ, 7) ಮೂಲಸೌಕರ್ಯ, 8) ಆವಿಷ್ಕಾರ, ಸಂಶೋಧನೆ ಮತ್ತು ಅಭಿವೃದ್ಧಿ, 9) ಮುಂದಿನ ಪೀಳಿಗೆಯ ಸುಧಾರಣೆಗಳು ಎಂಬುದಾಗಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನ ದೃಷ್ಟಿಕೋನಕ್ಕೆ ಅನುಗುಣವಾಗಿ ಆಂತರಿಕ ಬೆಳವಣಿಗೆಗೆ ಸಹಕಾರಿಯಾಗುವ ಮೂಲಕ ವಿವಿಧ ವಲಯಗಳಿಗೆ, ವಿವಿಧ ಪ್ರದೇಶಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಲು ಈ ಬಜೆಟ್ ಸಹಕಾರಿಯಾಗಲಿದೆ.
ನರೇಂದ್ರ ಮೋದಿ ಅವರು ಹೇಳಿದಂತೆ "ಇಂದಿನ ಬಜೆಟ್ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವಲ್ಲಿ ವೇಗವರ್ಧಕವಾಗಿ ಕಾರ್ಯ ನಿರ್ವಹಿಸುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ದೃಢವಾದ ಅಡಿಪಾಯವನ್ನು ಹಾಕುತ್ತದೆ ಎಂಬ ಅವರ ಮಾತು ಭವ್ಯ ಭಾರತದ ಭವಿಷ್ಯವನ್ನು ರೂಪಿಸಲಿದೆ.
ಸ್ಟಾರ್ಟ್ ಅಪ್‌ಗಳು ಮತ್ತು ನಾವಿನ್ಯತೆ ಪರಿಸರದ ವ್ಯವಸ್ಥೆಯ ಮೇಲೆ ಗಮನ ಕೇಂದ್ರೀಕರಿಸುವುದು, MSME ಮತ್ತು ಉತ್ಪಾದನೆಗೆ ಬೆಂಬಲ ನೀಡುವುದು, ಉತ್ಪಾದನಾ ವಲಯದಲ್ಲಿ ಹೆಚ್ಚುವರಿ ಉದ್ಯೋಗಕ್ಕೆ ಸಹಾಯ ಮಾಡುವುದು, ನಗರಗಳನ್ನು ಬೆಳವಣಿಗೆಯ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸುವ ಕಾರ್ಯಕ್ರಮ, ಮೊದಲ ಬಾರಿಗೆ ಉತ್ಪಾದನಾ ವಲಯಕ್ಕೆ ಉದ್ಯೋಗಿಗಳು ಪ್ರವೇಶ ಮಾಡಲು ಉತ್ತೇಜಿಸುವುದು ಮುಂತಾದವುಗಳ ಮೂಲಕ ಈ ಬಜೆಟ್ ಹೊಸ ದಾರಿಯನ್ನು ತೆರೆದಿದೆ.
ಯುವಕರಿಗೆ ಮತ್ತು ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು, ಶೈಕ್ಷಣಿಕ ಸಾಲಗಳು, ಸಿಗಡಿ ಕೃಷಿ ಮತ್ತು ಸಂಸ್ಕರಣೆಗೆ ಬೆಂಬಲ, ತರಕಾರಿ ಉತ್ಪಾದನಾ ಕ್ಲಸ್ಟರ್, ಮುದ್ರಾ ಸಾಲ ಮಿತಿಯನ್ನು 20 ಲಕ್ಷಕ್ಕೆ ಹೆಚ್ಚಿಸಿರುವುದು, ಹೂಡಿಕೆಗೆ ಸಿದ್ಧವಾದ “ಪ್ಲಗ್ ಆಂಡ್ ಪ್ಲೇ” ಕೈಗಾರಿಕಾ ಪಾರ್ಕುಗಳ ಅಭಿವೃದ್ಧಿಯ ಪ್ರಯತ್ನಗಳು ನಮ್ಮ ಕ್ಷೇತ್ರದಲ್ಲಿಯೂ ಅಳವಡಿಸಿಕೊಂಡು ನಮ್ಮ ನವಪಥದ ಕಾರ್ಯಸೂಚಿಗೆ ಬೆಂಬಲವಾಗಿ ನಿಲ್ಲಲಿದೆ. ಬಜೆಟ್ ನ ಪ್ರಯೋಜನಗಳನ್ನು ನಮ್ಮ ಜಿಲ್ಲೆಯಲ್ಲಿ ಹೇಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬಹುದು ಎಂಬುದರ ಕುರಿತು ಮುಂದಿನ ದಿನಗಳಲ್ಲಿ ವಿಶೇಷವಾಗಿ ಗಮನಹರಿಸಲಾಗುವುದು ಎಂದು ಸಂಸದ ಬ್ರಿಜೇಶ್ ಚೌಟ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The Union Budget presented by Union Finance Minister Nirmala Sitharaman has further enhanced Prime Minister Narendra Modi's commitment to an evolving India. Dakshina Kannada MP Captain Brijesh Chowta said this is the first step taken to fulfil all the promises made in the Sankalp Patra of Modi 3.0.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am