ಬ್ರೇಕಿಂಗ್ ನ್ಯೂಸ್
28-07-24 09:03 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಶಾಸಕನಾದರೂ ಕೊಲೆ ಪ್ರಕರಣದಿಂದಾಗಿ ಕ್ಷೇತ್ರ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ, ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ತುಳುನಾಡಿನ ಕಾರಣಿಕದ ದೈವ ಕೊರಗಜ್ಜ ಅಭಯ ನೀಡಿದ್ದಾನೆ. 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಕೋಲದ ಸಂದರ್ಭದಲ್ಲಿ ವಿನಯ ಕುಲಕರ್ಣಿಗೆ ಅಭಯ ನೀಡಿದ್ದಾಗಿ ಹೇಳಲಾಗುತ್ತಿದೆ.
ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ವಿನಯ ಕುಲಕರ್ಣಿಗೆ ದೈವ ನುಡಿ ಕೊಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆಯಂತೆ.


ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆದಿದ್ದು ಧಾರವಾಡ ಶಾಸಕ ವಿನಯ ಕುಲಕರ್ಣಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಕೋಲದ ಕೊನೆಯಲ್ಲಿ ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಪ್ರಸ್ತಾಪ ಮಾಡಿದ್ದು ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ವಿನಯ ಕುಲಕರ್ಣಿ ಅಳಲು ಹೇಳಿಕೊಂಡಿದ್ದರು.
ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ಒಳ್ಳೆಯವರು ಇದ್ದಾರೆ, ಕೆಟ್ಟವರೂ ಇದ್ದಾರೆ. ಎಲ್ಲಾ ಸಂಕಷ್ಟವನ್ನು ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಅಭಯ ನೀಡಿದ್ದಾನೆ.
Vijay Kulkarni kola in Mangalore, daiva gives 48 days time for all to turn out well
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm