ಬ್ರೇಕಿಂಗ್ ನ್ಯೂಸ್
13-08-24 12:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ರಾಜ್ಯ ಶಿಕ್ಷಣ ಇಲಾಖೆ ಅನುದಾನ ರಹಿತ ಖಾಸಗಿ ಶಾಲೆಗಳ ಮೇಲೆ ಸವಾರಿ ನಡೆಸುತ್ತಿದ್ದು ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿನಾಕಾರಣ ಖಾಸಗಿ ಸಂಸ್ಥೆಗಳಿಗೆ ತೊಂದರೆ ನೀಡುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಆ.21ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಒಂದು ದಿನ ಶಾಲೆ ಮುಚ್ಚಿ ಆಡಳಿತ ಮಂಡಳಿ, ಶಾಲಾ ಸಿಬಂದಿ, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ “ಬೆಂಗಳೂರು ಚಲೋ’ ನಡೆಸಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ )ಕರ್ನಾಟಕದ ಗೌರವಾಧ್ಯಕ್ಷ ಎಂ.ಬಿ. ಪುರಾಣಿಕ್ ಹೇಳಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸುಮಾರು 64 ಮಾಹಿತಿಗಳನ್ನು ಒದಗಿಸಬೇಕಾಗಿದ್ದು, ಇವುಗಳಿಗೆ ಭಾರೀ ಶುಲ್ಕ ಪಾವತಿಸಬೇಕಾಗಿದೆ. ಅದರಲ್ಲೂ ಅಗ್ನಿ ಸುರಕ್ಷೆ ಬಗ್ಗೆ ದೃಢೀಕರಣ, ಕಟ್ಟಡ ಸುರಕ್ಷೆ ದೃಢೀಕರಣ ಹಾಗೂ ಶಾಲಾ ಕಟ್ಟಡವಿರುವ ನಿವೇಶನವು ಶೈಕ್ಷಣಿಕ ಉದ್ದೇಶಕ್ಕೆ ಭೂ ಪರಿವರ್ತನಾ ಆದೇಶ ಇವುಗಳು ಖಾಸಗಿಯವರಿಗೆ ತೀವ್ರ ಸಂಕಷ್ಟ ತಂದಿದೆ. ಅವುಗಳನ್ನು ಸಡಿಲಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರಕಾರ ತಿರಸ್ಕರಿಸಿದೆ ಎಂದು ಆರೋಪಿಸಿದರು.
ಯಾವುದೇ ಜಾಗದಲ್ಲಿ ಶಾಲೆಗೆ ಕಟ್ಟಡವಿದ್ದರೂ ತೆರಿಗೆ ವಿಧಿಸುವಂತಿಲ್ಲ. ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ಕೋರ್ಟ್ ಆದೇಶವಿದೆ. ಆದರೂ ತೆರಿಗೆ ವಸೂಲಾತಿ ನಡೆಸಲಾಗುತ್ತಿದೆ. ಮನವಿ ಸಲ್ಲಿಸಿ ಮೇಲಧಿಕಾರಿಗಳು ಒಪ್ಪಿದರೂ ಕಾರ್ಯಗತವಾಗುವುದಿಲ್ಲ. ಅಲ್ಲದೆ, ತೆರಿಗೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದ.ಕ., ಉಡುಪಿ ಘಟಕದ ಜಿಲ್ಲಾಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣಕರ್ ಮಾತನಾಡಿ, ಸರಕಾರಿ ಶಾಲೆಗಳಿಗೊಂದು ಖಾಸಗಿ ಶಾಲೆಗಳಿಗೊಂದು ನೀತಿಯನ್ನು ಇಲಾಖೆ ಅನುಸರಿಸುತ್ತಿರುವುದು ಸರಿಯಲ್ಲ. ಶಾಲಾ ಕಟ್ಟಡವಿರುವ ನಿವೇಶನದ ಭೂ ಪರಿವರ್ತನಾ ಆದೇಶದ ಬಗ್ಗೆ ವಿನಾಯಿತಿ ನೀಡಬೇಕು. ಅಲ್ಲದೆ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಿಸಿ ಆಯ್ದ ಮಕ್ಕಳನ್ನು ಟ್ಯೂಷನ್ ನೀಡುತ್ತಿರುವ ಟ್ಯುಟೋರಿಯಲ್ ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
Mangalore Puranik says private school face renewal issues, warns of Bangalore chalo
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm