ಬ್ರೇಕಿಂಗ್ ನ್ಯೂಸ್
13-08-24 06:32 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಕಾನೂನು ಸುವ್ಯವಸ್ಥೆ ನೋಡಿಕೊಳ್ಳುವ ಎಸ್ಸಿ ಕಚೇರಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪುತ್ತೂರಿಗೆ ಸ್ಥಳಾಂತರಿಸಬೇಕು ಎನ್ನುವುದು ಸುಳ್ಯ, ಪುತ್ತೂರು ಭಾಗದ ಜನರ ಬಹುದಿನಗಳ ಬೇಡಿಕೆ. ಈ ಬಗ್ಗೆ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಹಾಲಿ ಶಾಸಕ ಅಶೋಕ್ ರೈ ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದರು. ಈ ಹಿಂದೆ ಬೊಮ್ಮಾಯಿ ಸರಕಾರ ಇದ್ದಾಗ ಎಸ್ಪಿ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆಯೂ ಸಿಕ್ಕಿತ್ತು. ಆದರೆ, ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಎಸ್ಪಿ ಕಚೇರಿ ಸ್ಥಳಾಂತರ ವಿರೋಧಿಸಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದ್ದು, ಪುತ್ತೂರು ಶಾಸಕರ ಪ್ರಯತ್ನಕ್ಕೆ ಎಳ್ಳುನೀರು ಬಿಟ್ಟಿದ್ದಾರೆ.
ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಐವಾನ್ ಡಿಸೋಜ, ಎಸ್ಪಿ ಕಚೇರಿ ಜಿಲ್ಲಾ ಕೇಂದ್ರದಿಂದ ಸ್ಥಳಾಂತರ ಮಾಡುವುದರಿಂದ ಜನರಿಗೆ ಅನಾನುಕೂಲವೂ ಆಗಲಿದೆ ಎಂದು ಹೇಳಿದ್ದಲ್ಲದೆ, ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಇತರೇ ಜಿಲ್ಲಾ ಮಟ್ಟದ ಕಚೇರಿಗಳು ಮಂಗಳೂರಿನಲ್ಲೇ ಇರುವುದರಿಂದ ಸಾರ್ವಜನಿಕರಿಗೆ ಒಂದೇ ಕಡೆ ಎಲ್ಲವೂ ಲಭ್ಯವಾಗುತ್ತದೆ. ಪುತ್ತೂರಿಗೆ ಸ್ಥಳಾಂತರ ಮಾಡಿದರೆ ಜನರು ಅಲೆದಾಡುವ ಸ್ಥಿತಿಯಾಗುತ್ತದೆ ಎಂದು ಆಕ್ಷೇಪಿಸಿದ್ದಾರೆ. ಇದಕ್ಕುತ್ತರಿಸಿದ ಗೃಹ ಸಚಿವ ಪರಮೇಶ್ವರ್, ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಪ್ರಸ್ತಾಪ ಸರಕಾರದ ಮುಂದಿಲ್ಲ. ಆ ಕುರಿತು ಜಮೀನು ಗುರುತು ಸೇರಿದಂತೆ ಯಾವುದೇ ಪ್ರಯತ್ನವೂ ಆಗಿಲ್ಲ ಎಂದು ಹೇಳಿದ್ದಾರೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಗೆ ಪುತ್ತೂರಿನಲ್ಲಿ ಡಿವೈಎಸ್ಪಿ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಅಲ್ಲದೆ, ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿ ಮತ್ತೊಂದು ಡಿವೈಎಸ್ಪಿ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಜಿಲ್ಲಾ ಮಟ್ಟದ ಕಚೇರಿಗಳು ಮಂಗಳೂರಿನಲ್ಲೇ ಇದ್ದು ಎಸ್ಪಿ ಕಚೇರಿಯೂ ಒಂದೇ ಕಡೆ ಇದ್ದರೆ ಜನರಿಗೆ ಅನುಕೂಲವಾಗಲಿದೆ ಎಂದಿದ್ದಾರೆ. ತುರ್ತು ಸಂದರ್ಭಗಳಲ್ಲಿ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಕ್ಕೂ ಇದು ಸಹಾಯಕವಾಗುತ್ತದೆ. ಹುಬ್ಬಳ್ಳಿ- ಧಾರವಾಡ, ಮೈಸೂರು, ಬೆಳಗಾವಿ, ಕಲಬುರಗಿಯಲ್ಲೂ ಎಸ್ಪಿ ಕಚೇರಿ ಜಿಲ್ಲಾ ಕೇಂದ್ರದಲ್ಲೇ ಇವೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.
19 ಎಕರೆ ಜಮೀನು ಗುರುತಿಸಿದ್ದ ಬಿಜೆಪಿ ಸರಕಾರ
ಈ ಹಿಂದೆ ಬಿಜೆಪಿ ಸರಕಾರದಲ್ಲಿ ಬಸವರಾಜ ಬೊಮ್ಮಾಯಿ ಗೃಹಮಂತ್ರಿ ಮತ್ತು ಆನಂತರ ಮುಖ್ಯಮಂತ್ರಿಯಾಗಿದ್ದಾಗ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ತಾತ್ವಿಕ ಒಪ್ಪಿಗೆ ಸೂಚಿಸಿದ್ದರು. ಅಲ್ಲದೆ, ಎಸ್ಪಿ ಮತ್ತು ಡಿಎಆರ್ ಕಚೇರಿ ಹಾಗೂ ಪೊಲೀಸ್ ಕ್ವಾಟ್ರಸ್ ಸ್ಥಾಪಿಸಲು ಪುತ್ತೂರಿನಲ್ಲಿ ಮೂರು ಕಡೆ 19 ಎಕರೆ ಜಮೀನು ಗುರುತಿಸಲಾಗಿದೆ. ಪುತ್ತೂರಿನಲ್ಲಿ ಎಸ್ಪಿ ಕಚೇರಿ ಸ್ಥಾಪಿಸಿದರೆ, ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯ ಎಲ್ಲಾ ಗಡಿಗಳು 50-60 ಕಿಮೀ ವ್ಯಾಪ್ತಿಯಲ್ಲಿರುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸಹಾಯ ಮಾಡುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು.
ಈ ಕುರಿತು ಸರಕಾರಕ್ಕೆ ಪ್ರಬಲ ಬೇಡಿಕೆ ಇರಿಸಿದ್ದ ಆಗಿನ ಶಾಸಕ ಸಂಜೀವ ಮಠಂದೂರು, ಮಂಗಳೂರಿನಿಂದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ತಾಲೂಕಿನ ಹಳ್ಳಿಗಳು ನೂರು ಕಿಮೀ ದೂರದಲ್ಲಿರುವುದರಿಂದ ತುರ್ತು ಸಂದರ್ಭಗಳಲ್ಲಿ ಎಸ್ಪಿ ಕಚೇರಿಯಿಂದ ತೆರಳುವುದಕ್ಕೆ ಸಮಯ ಬೇಕಾಗುತ್ತದೆ. ಹಾಗಾಗಿ, ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಿ ಎರಡನೇ ಜಿಲ್ಲಾ ಕೇಂದ್ರ ಮಾಡಬೇಕು. ಪುತ್ತೂರು, ಸುಳ್ಯದ ಪೊಲೀಸರು ಕೂಡ ಸಭೆಗಳಿಗೆಂದು ದೂರದ ಮಂಗಳೂರಿಗೆ ಬಂದು ಹೋಗುವುದು ಇದರಿಂದ ತಪ್ಪುತ್ತದೆ ಎಂದು ಒತ್ತಾಯಿಸಿದ್ದರು. ಹಿಂದಿನ ಬಿಜೆಪಿ ಸರಕಾರ ಜಮೀನು ಗುರುತಿಸಿ, ಎಸ್ಪಿ ಕಚೇರಿ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದ್ದರೂ, ಕಾಂಗ್ರೆಸ್ ಸರಕಾರ ಆ ಪ್ರಸ್ತಾವನೆಯನ್ನೇ ಕೈಬಿಟ್ಟಿದ್ದು ಪುತ್ತೂರು ಭಾಗದ ಶಾಸಕರ ಹಕ್ಕೊತ್ತಾಯಕ್ಕೆ ಎಳ್ಳುನೀರು ಬಿಟ್ಟಿದೆ. ಇದೇ ವಿಚಾರದಲ್ಲಿ ಹಾಲಿ ಪುತ್ತೂರು ಶಾಸಕ ಅಶೋಕ್ ರೈ ಕೂಡ ಹಿಂದಿನ 2-3 ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರಕಾರದ ಗಮನ ಸೆಳೆದಿದ್ದರು.
The Congress government in Karnataka has dumped the proposal to shift the Dakshina Kannada Superintendent of Police (SP) office from Mangaluru to Puttur.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm