ಬ್ರೇಕಿಂಗ್ ನ್ಯೂಸ್
13-08-24 07:52 pm Mangalore Correspondent ಕರಾವಳಿ
ಮಂಗಳೂರು, ಆ.13: ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ರೈತ ಮುಖಂಡರೊಂದಿಗೆ ನಡೆದ ಚರ್ಚೆಯ ಬಳಿಕ ಈ ಬಗ್ಗೆ ಮಾಹಿತಿ ನೀಡಿದರು.
ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂದು ರೈತರಿಂದ ಒತ್ತಾಯ ಇದೆ. ಈ ಬಗ್ಗೆ ಪರಿಶೀಲಿಸಿ, ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದರು. ಬೆಳೆಗಳ ರಕ್ಷಣೆಗೆ ರೈತರಿಗೆ ನೀಡುವ ಕೋವಿ ಪರವಾನಿಗೆಯನ್ನು ಸರಳೀಕರಣ ಮಾಡಲು ಪ್ರಯತ್ನಿಸಲಾಗುವುದು. ತಂದೆ ಮರಣದ ನಂತರ ಮಗನಿಗೆ ಕೋವಿ ಪರವಾನಿಗೆಯನ್ನು ಹಸ್ತಾಂತರಿಸುವ ಬಗ್ಗೆ ಗೊಂದಲಗಳನ್ನು ಸರಿಪಡಿಸಲಾಗುವುದು. ಕೋವಿ ಪರವಾನಿಗೆ ಅರ್ಜಿಗಳ ತ್ವರಿತ ವಿಲೇವಾರಿಗೆ ಆಯಾ ಕಚೇರಿಗಳಿಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ರೈತರ ಜಮೀನುಗಳ ದಾಖಲೆಗಳ ಗೊಂದಲ ತಪ್ಪಿಸಲು ಪೋಡಿಮುಕ್ತ ಅಭಿಯಾನ ನಡೆಸಲಾಗುತ್ತಿದ್ದು, ಇದಕ್ಕೆ ರೈತರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಮಂಗ ಮತ್ತು ನವಿಲುಗಳ ದಾಳಿಯಿಂದ ಬೆಳೆಗಳಿಗೆ ಹಾನಿಯಾಗುವುದನ್ನು ತಪ್ಪಿಸಲು ಮಂಗ ಮತ್ತು ನವಿಲುಗಳ ಪ್ರತ್ಯೇಕ ಪಾರ್ಕ್ ಮಾಡುವ ಬಗ್ಗೆ ಪರಿಶೀಲಿಸಲಾಗುವುದು. ಪ್ರಾಣಿಗಳ ಹಾವಳಿಯಿಂದ ತೆಂಗು, ಅಡಿಕೆ ಹಾನಿಯಾದಲ್ಲಿ ಪರಿಹಾರವನ್ನು ನೀಡುವ ಯಾವುದೇ ಯೋಜನೆಗಳಿಲ್ಲ. ಆದರೆ ಮರಗಳು ಹಾನಿಯಾದಲ್ಲಿ ಪರಿಹಾರಗಳನ್ನು ನೀಡಲಾಗುತ್ತದೆ ಎಂದರು.
ವಿದ್ಯುತ್ ಪ್ರಸರಣ ಮಾರ್ಗವನ್ನು ಸ್ಥಾಪಿಸಲು ರೈತರ ಜಮೀನುಗಳನ್ನು ಅಗೆಯುವ ಕೆಲಸವಾಗುತ್ತಿದ್ದು, ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಕಾನೂನು ಬಾಹಿರವಾಗಿ ಖಾಸಗಿ ಕಂಪನಿಯವರು ಇಂಥ ಕೆಲಸವನ್ನು ನಡೆಸುತ್ತಿದ್ದಾರೆ ಎಂದು ರೈತ ಮುಖಂಡರು ಆಕ್ಷೇಪಿಸಿದರು. ಜಿಲ್ಲಾಧಿಕಾರಿ ಮಾತನಾಡಿ, ವಿದ್ಯುತ್ ಪ್ರಸರಣ ಮಾರ್ಗಗಳಿಗೆ ಅಗೆಯುವುದು ಕಾನೂನು ಬಾಹಿರವಲ್ಲ. ಇದು ಸರ್ಕಾರದ ಕೆಲಸವಾಗಿದೆ. ಇದರ ಬಗ್ಗೆ ಮಾಲಿಕತ್ವ ಹೊಂದಿರುವ ಕಂಪನಿಯವರನ್ನು ಕರೆದು ರೈತ ಮುಖಂಡರೊಂದಿಗೆ ಸಭೆ ನಡೆಸಲಾಗುವುದು ಎಂದರು.
ರೈತರ ಕೃಷಿ ನೀರಾವರಿ ಪಂಪ್ ಸೆಟ್‍ಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು ಡೆಪಾಸಿಟ್, ಕರಾರು ಪತ್ರ ಮತ್ತು ಅರ್ಜಿ ಶುಲ್ಕ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದಾಗ, ಕೃಷಿ ನೀರಾವರಿ ಪಂಪುಸೆಟ್‍ಗಳಿಗೆ ಆಧಾರ್ ಜೋಡಣೆ ಕಾರ್ಯವನ್ನು ಮೆಸ್ಕಾಂ ಅಧಿಕಾರಿಗಳು ನಿರ್ವಹಿಸುತ್ತಿದ್ದು, ಸದರಿ ಪ್ರಕ್ರಿಯೆಗೆ ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದರು. ಪ್ರತಿ ಮೂರು ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ತುಂಬೆ ಡ್ಯಾಮ್ ಬಳಿ ಸವೆದು ಹೋಗಿರುವ ಪ್ರದೇಶಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರ ಮಂಜೂರು ಮಾಡಿದರೂ, ವಿತರಿಸಿಲ್ಲ. ಸಂತ್ರಸ್ತರಿಗೆ ಈವರೆಗೆ ಪರಿಹಾರ ಮೊತ್ತ ಸಿಗದೆ ಪ್ರತಿದಿನ ಅಲೆಯುತ್ತಿದ್ದಾರೆ ಎಂದು ರೈತ ಮುಖಂಡರು ಜಿಲ್ಲಾಧಿಕಾರಿಗಳಿಗೆ ತಮ್ಮ ಅಳಲು ತಿಳಿಸಿದರು. ಇನ್ನು ಎರಡು ದಿನಗಳಲ್ಲಿ ಪರಿಹಾರ ಧನ ವಿತರಿಸಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ, ಸೈಬರ್ ಕ್ರೈಂ ಡಿಎಸ್ಪಿ ಮಂಜುನಾಥ್, ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಭಂದಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.
Deputy Commissioner Mullai Mugilan said he would send a proposal to the state government to provide support price for arecanut crop. He gave this information after a discussion with farmer leaders on the problems of farmers in the district held at the deputy commissioner's office on Tuesday.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm