ಬ್ರೇಕಿಂಗ್ ನ್ಯೂಸ್
27-08-24 08:32 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.27: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ '(ಪಿಎಂ ಸೂರ್ಯ ಗೃಹ - ಉಚಿತ ವಿದ್ಯುತ್) ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಗೊಂಡಿದ್ದು, ಯೋಜನೆಯ ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನು ವಿತರಿಸಿದರು.
'ಇನರ್ಜಿ ಸೋಲಾರ್ ಕಂಪನಿ'ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ.ಸುಧಾಕರ್ ಕುಟುಂಬಕ್ಕೆ 78000 ರೂ. ಸಬ್ಸಿಡಿ ಪತ್ರವನ್ನು ಹಸ್ತಾಂತರ ಮಾಡಿದರು.
ಈ ವೇಳೆ ಮಾತನಾಡಿದ ಸಂಸದರು "ಸೂರ್ಯನಿಂದ ಉತ್ಪತ್ತಿಯಾಗುವ ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಮೂಲಕ ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆಯಲ್ಲಿ ಭಾರತ ಕ್ರಾಂತಿ ಸೃಷ್ಟಿಸಿದ ದೇಶವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆ ಒಂದು ಕುಟುಂಬವನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಈ ಯೋಜನೆ ಮೂಲಕ ಅಗತ್ಯವಿರುವ ವಿದ್ಯುತ್ ಉತ್ಪಾದಿಸಿ ಬಳಸುವ ಜೊತೆಗೆ ಉಳಿದ ಯುನಿಟ್ ಗಳನ್ನು ಮಾರಾಟ ಮಾಡಬಹುದಾಗಿದೆ. ಇದು ಕರ್ನಾಟಕದಲ್ಲಿ ಇರುವಂತೆ ಹಣ ಕೊಟ್ಟು ಪಡೆಯುವ ಗ್ಯಾರಂಟಿಯಲ್ಲ. ಇದು ಹಣ ಸಂಪಾದನೆ ಮಾಡಿ ತಮ್ಮ ಬದುಕಿಗೆ ಗ್ಯಾರಂಟಿ ಪಡೆಯುವಂಥ ಯೋಜನೆಯಾಗಿದೆ ಎಂದು ಹೇಳಿದರು.
"ಪ್ರಧಾನಿಗಳ ಇಂತಹ ಮಹತ್ವಾಕಾಂಕ್ಷಿ ಯೋಜನೆಗಳನ್ನು ಮೊದಲು ಒಂದು ಗ್ರಾಮ, ವಾರ್ಡ್ ಅಥವಾ ಬೂತ್ ಮಟ್ಟದಲ್ಲಿ ಮಾದರಿಯಾಗಿ ಅನುಷ್ಠಾನಗೊಳಿಸಬೇಕು. ಸಣ್ಣ ಸಣ್ಣ ಪ್ರದೇಶದಲ್ಲಿ ಅನುಷ್ಠಾನ ಪ್ರಕ್ರಿಯೆ ಸುಲಭವಾಗುತ್ತದೆ. ಇದರಿಂದ ಮುಂದೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಲು ಅನುಕೂಲವಾಗುವ ಜೊತೆಗೆ ಇತರರಿಗೆ ಪ್ರೇರಣೆ ನೀಡುತ್ತದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಒಂದು ಬೂತ್ ಅಥವಾ ವಾರ್ಡ್ ನಲ್ಲಿ ಈ ಯೋಜನೆಗಳನ್ನು ಅನುಷ್ಟಾನಗೊಳಿಸಿ ಮಾದರಿಯನ್ನಾಗಿ ರೂಪಿಸುವುದಕ್ಕೆ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ಶಾಸಕ ವೇದವ್ಯಾಸ್ ಕಾಮತ್, ಪಾಲಿಕೆ ಸದಸ್ಯೆ ವನಿತಾ ಪ್ರಸಾದ್, ಇನರ್ಜಿ ಕಂಪನಿಯ ಅರವಿಂದ್, ಸೂರಜ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಏನಿದು ಪಿಎಂ ಸೂರ್ಯ ಘರ್ ಯೋಜನೆ?
ದೇಶದ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ಮೋದಿಯವರ ಕನಸಿನ ಯೋಜನೆ ಇದಾಗಿದೆ. ಯೋಜನೆಯಡಿ ಜನರಿಗೆ ತಮ್ಮ ಮನೆಯ ಛಾವಣಿ ಮೇಲೆ ಸೌರ ಫಲಕಗಳನ್ನು ಅಳವಡಿಸಲು 78,000 ರೂ. ಗಳ ವರೆಗೆ ಸಬ್ಸಿಡಿ ನೀಡಲಾಗುತ್ತದೆ. ಇದರ ಫಲಾನುಭವಿಗಳು ಉತ್ಪತ್ತಿಯಾದ ವಿದ್ಯುತ್ ಅನ್ನು ಬಳಕೆ ಮಾಡಿಕೊಂಡು ಉಳಿದ ಯೂನಿಟ್ ಗಳನ್ನು ವಿತರಣಾ ಸಂಸ್ಥೆಗೆ ಮಾರಾಟ ಮಾಡುವ ಮೂಲಕ ಲಾಭ ಗಳಿಸಬಹುದಾಗಿದೆ.
Prime Minister Narendra Modi's ambitious 'PM Surya Ghar Muft Bijli' (PM Surya Griha - Free Electricity) scheme has already been implemented in Dakshina Kannada district. Brijesh Chowta distributed the subsidy letter.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm