ಬ್ರೇಕಿಂಗ್ ನ್ಯೂಸ್
28-08-24 05:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ದಿನೇಶ್ ಕುಡ್ತಮೊಗರು (20) ಮತ್ತು ಬೋಳಂತೂರು ನಿವಾಸಿ ಭರತ್ ಅಲಿಯಾಸ್ ಯಕ್ಷಿತ್ (24) ಬಂಧಿತ ಆರೋಪಿಗಳು. ಇಬ್ಬರೂ ಬಜರಂಗದಳ ಕಾರ್ಯಕರ್ತರೆಂದು ತಿಳಿದುಬಂದಿದೆ. ದಿನೇಶ್ ಚಾಲಕನಾಗಿ ಕೆಲಸ ಮಾಡುತ್ತಿದ್ದು ಈ ಹಿಂದೆ ಮೂರು ಹಲ್ಲೆ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಭರತ್ ಕನ್ಯಾನದಲ್ಲಿ ಫೈನಾನ್ಸ್ ಕಲೆಕ್ಷನ್ ಮಾಡುವ ಕೆಲಸ ಮಾಡುತ್ತಿದ್ದು ಈ ಹಿಂದೆ ಒಂದು ಪ್ರಕರಣ ಇದೆ. ಆರೋಪಿಗಳು ಮಂಗಳೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ, ಐವಾನ್ ವಿರುದ್ಧದ ಸಿಟ್ಟಿನಲ್ಲಿ ಕಲ್ಲು ಎಸೆದಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.
ಐವನ್ ಮನೆಯ ಪರಿಸರದ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ರಾಜ್ಯಪಾಲರನ್ನು ಬಾಂಗ್ಲಾಕ್ಕೆ ಹೋಲಿಸಿ ಹೇಳಿಕೆ ನೀಡಿದ್ದಕ್ಕಾಗಿ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಇದರ ನಡುವೆ, ಆಗಸ್ಟ್ 20 ರ ತಡರಾತ್ರಿ ಐವನ್ ಡಿಸೋಜಾ ಅವರ ಮಂಗಳೂರು ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಮನೆಯ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು ಎನ್ನಲಾಗಿತ್ತು. ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪಾಂಡೇಶ್ವರ ಠಾಣೆ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.
Stone pelting on Congress Ivan Dsouza house, two members of Bajrang dal arrested from bantwal. The accused have been identified as Bharat alias Yakshith (24) from Bolantoor Village, Bantwal Taluk and Dinesh Kurthamogeru (20) from Kolnadu Village, Bantwal Taluk.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm