ಬ್ರೇಕಿಂಗ್ ನ್ಯೂಸ್
02-09-24 09:20 pm Mangalore Correspondent ಕರಾವಳಿ
ಮಂಗಳೂರು, ಸೆ.2: ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಯಲ್ಲಿ 28 ಲಕ್ಷ ವೆಚ್ಚದ ಸಿಎಸ್.ಆರ್ ನಿಧಿ ಯೋಜನೆಯಡಿ
ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೂಲಂಕುಷವಾದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.
ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್ ಅಧಿಕಾರಿ ಖುದ್ದು ಸಚಿವರನ್ನ ಭೇಟಿ ಮಾಡಿ ಉದ್ದೇಶಪೂರ್ವಕ ತನ್ನ ಮೇಲೆ ಆರೋಪ ಹೊರಿಸುತ್ತಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ಸಾಮಾಜಿಕ ಕಾರ್ಯಕರ್ತ ವಾಸುದೇವ್ ಹೊಳ್ಳ, ಜಿ.ಎಸ್.ಡಿ ಪಾಣಿ, ಕಿರಣ್ ಪೂಜಾರಿ ಎಂಬವರು ದುರುದ್ದೇಶ ಹೊಂದಿದ್ದು, ಆಯುಷ್ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಯಾಗಿದ್ದಾರೆ. ಅನಗತ್ಯ ದೂರುಗಳನ್ನ ಸಲ್ಲಿಸಿ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್.ಆರ್ ಯೋಜನೆಯ ಮೂಲಕ ಹಣವನ್ನ ತಂದು ಆಯುಷ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಶ್ರಮ ವಹಿಸಲಾಗಿತ್ತು. ಆದರೆ ಈ ಮೂವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರ್ಕಾರಿ ಕಾರ್ಯಕ್ಕೆ ಅಡ್ಡಿಯುಂಟುಮಾಡಿದ್ದಾರೆ ಎಂದು ದೂರಿದ್ದರು.
ಇನ್ನೊಂದಡೆ ಈ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವು ಕೇಳಿಬಂದಿತ್ತು. ಆರೋಪ ಪ್ರತ್ಯಾರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣದ ಕೂಲಂಕುಷ ತನಿಖೆಗೆ ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಆರೋಪದಲ್ಲಿ ಸತ್ಯಾಸತ್ಯತೆ ಇದೆಯೇ ಅಥವಾ ಉದ್ದೇಶಪೂರ್ವಕವಾಗಿ ದೂರು ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿ. ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪಗಳನ್ನ ಮಾಡಿದ್ದಾರೆ ಎಂದು ಕಂಡುಬಂದರೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಆದೇಶದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದಾರೆ.
Mangalore Ayush instrument scam, Health minister orders probe.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm