ಬ್ರೇಕಿಂಗ್ ನ್ಯೂಸ್
11-09-24 07:53 pm Mangalore Correspondent ಕರಾವಳಿ
ಮಂಗಳೂರು, ಸೆ.11: 'Fact Vid’ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಹಿಂದು ದೇವತೆಗಳ ನಿಂದನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ಪೋಸ್ಟ್ ಮಾಡಲಾಗುತ್ತಿದ್ದು ಕೋಟ್ಯಂತರ ಹಿಂದುಗಳ ಧಾರ್ಮಿಕ ಭಾವನೆ, ಶ್ರದ್ಧಾಬಿಂದುಗಳಿಗೆ ಧಕ್ಕೆಯಾಗಿದೆ. ಇದರ ಹಿಂದಿರುವ ಅಡ್ಮಿನ್ ಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದು ಜನಜಾಗೃತಿ ಸಮಿತಿ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದೆ.
ಎಐ ಟೆಕ್ನಾಲಜಿಯಲ್ಲಿ ಮಾಡಲ್ಪಟ್ಟ ವಿಕೃತ ಫೋಟೊಗಳನ್ನು ಉದ್ದೇಶಪೂರ್ವಕ ಪೋಸ್ಟ್ ಮಾಡುತ್ತಿದ್ದಾರೆ. ಆಮೂಲಕ ಹಿಂದು - ಮುಸ್ಲಿಂ ನಡುವೆ ದ್ವೇಷ ಹುಟ್ಟಿಸುವ ರೀತಿ ಮಾಡಿದ್ದಾರೆ. ಇದರ ಹಿಂದೆ ಗಲಭೆ ಸೃಷ್ಟಿಸುವ ಹುನ್ನಾರ ಇದೆಯೆಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕಾರ ವಿಜಯ ಕುಮಾರ್ ಆಗ್ರಹಿಸಿದ್ದಾರೆ.
ಈ ಕುರಿತು ಮಂಗಳೂರಿನ ಸೈಬರ್ ಕ್ರೈಮ್ ವಿಭಾಗಕ್ಕೆ ಸಮಿತಿಯ ಸಮನ್ವಯಕರು ಮತ್ತು ಧರ್ಮಪ್ರೇಮಿ ನ್ಯಾಯವಾದಿಗಳ ಒಕ್ಕೂಟದಿಂದ ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವಾದಲ್ಲಿರುವ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಭಿವ್ಯಕ್ತಿ ಸ್ವಾತಂತ್ರ‍್ಯ ಎಂದು ತಮ್ಮ ಬಗ್ಗೆ ಬರೆದುಕೊಂಡ ‘Fact Vid’ ಫೇಸ್ಬುಕ್ ಪೇಜ್ ನಲ್ಲಿ ಪ್ರತಿದಿನ 7 ರಿಂದ 8 ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳು ಪ್ರಸಾರವಾಗುತ್ತಿದ್ದು, ಇದರಲ್ಲಿ ಹಿಂದುಗಳ ದೇವರಾದ ಭಗವಾನ್ ಶಿವ, ಕೃಷ್ಣ, ರಾಮ, ಗಣೇಶ ಮೊದಲಾದ ದೇವತೆಗಳು ಸ್ತ್ರೀಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವಂತೆ, ಚಿತ್ರ ನಟಿ ಯುವತಿಯರನ್ನು ಓಡಿಸುತ್ತಿರುವಂತೆ, ಕುಸ್ತಿ ಆಡುತ್ತಿರುವಂತೆ ವಿಕೃತ ರೀತಿಯಲ್ಲಿ ಚಿತ್ರಿಸಲಾಗಿದೆ. ಈ ಪೋಸ್ಟ್ ಗಳಿಗೆ ಅನೇಕ ಮತಾಂಧರು ಧಾರ್ಮಿಕ ಭಾವನೆಗಳನ್ನು ನೋಯಿಸುವಂತೆ ಕಮೆಂಟ್ ಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಹಿಂದೂಗಳನ್ನು ಕೆರಳಿಸುವ ಬಹುದೊಡ್ಡ ಷಡ್ಯಂತ್ರ ಇದರಲ್ಲಿ ಅಡಗಿದೆ.
ಫೇಸ್ಬುಕ್ ಪೇಜ್ ‘Fact Vid’ ಅನ್ನು ನಿಯಂತ್ರಿಸುತ್ತಿರುವ ಅಡ್ಮಿನ್ ಮತ್ತು ಸದ್ರಿ ಪೇಜ್ ನಲ್ಲಿ ಹಿಂದೂ ದೇವತೆಗಳ ಅವಹೇಳನ ಮಾಡುವ ಕಮೆಂಟ್ ಗಳನ್ನೂ ಹಾಕುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 299, 192, 353 ಮತ್ತು 67 IT Act ಸೆಕ್ಷನ್ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಧಾರ್ಮಿಕ ಭಾವನೆಗೆ ನೋವುಂಟು ಮಾಡಲು ಎಡೆಮಾಡಿಕೊಡುವ AI Tool ಗಳನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಇದೇ ವೇಳೆ ವಕೀಲ ತೀರ್ಥೇಶ್ ಆಗ್ರಹಿಸಿದ್ದಾರೆ. ವಕೀಲರಾದ ಈಶ್ವರ ಕೊಟ್ಟಾರಿ, ಯತೀಶ್, ವಿಜಯ ಕುಮಾರ್, ಸುಷ್ಮಾ, ಉದ್ಯಮಿಗಳಾದ ದಿನೇಶ್ ಎಂ.ಪಿ., ಚಂದ್ರಕಾಂತ್ ಕಾಮತ್, ಪ್ರಶಾಂತ್ ಕಾಂಚನ್, ಬಾಲಗಂಗಾಧರ, ನಾರಾಯಣ ಅಮೀನ್, ಹಿಂದೂ ಜನಜಾಗೃತಿ ಸಮಿತಿಯ ವಿಜಯಕುಮಾರ್ ಉಪಸ್ಥಿತರಿದ್ದರು.
Mangalore Fact Vid Facebook page pictures humaliting Hindu gods by AI images go viral, case filed by Hindu Janajagruti samati to Urwa police station. Facebook page has been creating communal dispute by creating AI images of Hindu gods.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm