ಬ್ರೇಕಿಂಗ್ ನ್ಯೂಸ್
12-09-24 10:21 pm Mangalore Correspondent ಕರಾವಳಿ
ಮಂಗಳೂರು, ಸೆ.12: ಖಾಸಗಿ ಸಿಟಿ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರಿಂದ ವಿದ್ಯಾರ್ಥಿಗಳು ಫುಟ್ ಬೋರ್ಡಿನಲ್ಲಿ ನೇತಾಡುತ್ತ ತೆರಳುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ವಿಡಿಯೋ ಸಹಿತ ಸುದ್ದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಬಸ್ಸಿನ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಕೇಸು ದಾಖಲಿಸಿದ್ದಾರೆ.
ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ 42 ನಂಬರಿನ ಖಾಸಗಿ ಸಿಟಿ ಬಸ್ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಗೆ ತಲುಪಿದಾಗ, ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದು ಈ ವೇಳೆ ಫುಡ್ ಬೋರ್ಡಿನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೊರಕ್ಕೆಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದ. ಇದರ ವಿಡಿಯೋವನ್ನು ಹಿಂದಿನಿಂದ ಬರುತ್ತಿದ್ದ ಆಟೋ ಚಾಲಕರೊಬ್ಬರು ಸೆರೆಹಿಡಿದಿದ್ದು ಅಪಘಾತ ಆದರೆ ಯಾರು ಹೊಣೆಯೆಂದು ಪ್ರಶ್ನಿಸಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
ವಿಡಿಯೋ ಆಧರಿಸಿ ಹೆಡ್ ಲೈನ್ ಕರ್ನಾಟಕ ಈ ಬಗ್ಗೆ ಪೊಲೀಸರನ್ನು ಪ್ರಶ್ನಿಸಿ ಸುದ್ದಿ ಪ್ರಕಟಿಸಿದ್ದಲ್ಲದೆ, ಟ್ವಿಟರ್ ನಲ್ಲಿ ವಿಡಿಯೋವನ್ನು ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಎಡಿಜಿಪಿ ಅಲೋಕ್ ಕುಮಾರ್ ಗೆ ಟ್ಯಾಗ್ ಮಾಡಿತ್ತು. ಇದರಿಂದ ಅಲರ್ಟ್ ಆಗಿರುವ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್, ಬಸ್ಸಿನ ಸಿಬಂದಿ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ. ವಿಡಿಯೋ ಆಧರಿಸಿ ಸುಮೊಟೊ ಪ್ರಕರಣ ದಾಖಲಿಸಲು ಅವಕಾಶ ಇದ್ದರೂ, ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಆಟೋ ಚಾಲಕನಲ್ಲಿಯೇ ದೂರು ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬಸ್ಸಿನ ಚಾಲಕ ಮಹಮ್ಮದ್ ಫಯಾಜ್ ಮತ್ತು ನಿರ್ವಾಹಕ ಮನೀಶ್ ತೀರಾ ನಿರ್ಲಕ್ಷ್ಯದಿಂದ ಪ್ರಯಾಣಿಕರನ್ನು ತುಂಬಿಸಿಕೊಂಡು ಹೋಗಿದ್ದಾರೆ. ಇದರಿಂದ ಪ್ರಯಾಣಿಕರ ಜೀವಕ್ಕೆ ಅಪಾಯಕ್ಕೀಡು ಮಾಡುವಂತೆ ವರ್ತಿಸಿದ್ದಾರೆ ಎಂದು ಕೇಸು ದಾಖಲಾಗಿದೆ.
We appreciate #AnupamAgarwal, the Commissioner of #Mangalore City #Police, for taking prompt action against the overloading of a bus on footrests on Route No. 42, St. Antony Travels. #Mangalorenews @compolmlr @alokkumar6994 pic.twitter.com/4TrzrE7a6u
— Headline Karnataka (@hknewsonline) September 12, 2024
Mangalore St Antony bus driver and conductor booked by traffic police after Headline Karnataka news video goes viral on overloading.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm