ಬ್ರೇಕಿಂಗ್ ನ್ಯೂಸ್
15-09-24 09:49 pm Mangalore Correspondent ಕರಾವಳಿ
ಮಂಗಳೂರು, ಸೆ.15: ಈದ್ ಮಿಲಾದ್ ಮೆರವಣಿಗೆ ನಡೆಸಲು ಅವಕಾಶ ನೀಡಬಾರದು ಎಂದು ಹೇಳಿಕೆ ನೀಡಿದ್ದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಬಿಸಿ ರೋಡಿನ ಕಾಂಗ್ರೆಸ್ ಮುಖಂಡರೊಬ್ಬರು ಸವಾಲು ಹಾಕುವ ರೀತಿ ಆಡಿಯೋ ಮೆಸೇಜ್ ಹರಿಯಬಿಟ್ಟಿದ್ದಾರೆ. ನಾವು ಬಿಸಿ ರೋಡ್ ಕೈಕಂಬದಲ್ಲಿ ರಸ್ತೆಯಲ್ಲಿ ಮೆರವಣಿಗೆ ಮಾಡುತ್ತೇವೆ. ಶರಣ್ ಪಂಪ್ವೆಲ್ ತಾಕತ್ತಿದ್ದರೆ ಇಲ್ಲಿಗೆ ಬಂದು ನಿಲ್ಲಲಿ ಎಂದು ಸವಾಲು ಹಾಕುವ ರೀತಿ ಆಡಿಯೋ ಕಳಿಸಿದ್ದು, ಇದು ವೈರಲ್ ಆಗಿದೆ.
ಬಂಟ್ವಾಳ ಮಾಜಿ ಪುರಸಭೆ ಅಧ್ಯಕ್ಷ ಮಹಮ್ಮದ್ ಶರೀಫ್ ಎಂಬವರು ಈ ರೀತಿಯ ಮೆಸೇಜ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಆಡಿಯೋದಲ್ಲಿ ತನ್ನದೇ ಹೆಸರಿಡಿದು ಸವಾಲಿನ ಮಾತುಗಳನ್ನು ಹೇಳಿದ್ದಾರೆ. ಸೋಮವಾರ ಬೆಳಗ್ಗೆ 7 ಗಂಟೆಗೆ ಎಂದಿನಂತೆ ಬಿಸಿ ರೋಡಿನಲ್ಲಿ ಈದ್ ಮೆರವಣಿಗೆ ನಡೆಸುತ್ತೇವೆ. ಶರಣ್ ಪಂಪ್ವೆಲ್ ಧೈರ್ಯ ಇದ್ದರೆ ಬಂದು ನಿಲ್ಲಲಿ, ಬಂದು ನಿಂತರೆ ನಾವು ಸನ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈ ಮಾತಿಗೆ ಪ್ರತಿಯಾಗಿ ಬಜರಂಗದಳ ಮುಖಂಡ ಪುನೀತ್ ಅತ್ತಾವರ್ ತನ್ನ ಫೇಸ್ಬುಕ್ ಪೇಜ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಜಿಹಾದಿಗಳೇ ನಿಮ್ಮ ಸವಾಲನ್ನು ನಾವು ಸ್ವೀಕರಿಸಿದ್ದೇವೆ. ನೀವು ಹೇಳಿದ ಜಾಗಕ್ಕೆ ನಾವು ಬರುತ್ತೇವೆ, ತಾಕತ್ತಿದ್ದರೆ ನೀವು ತಡೆಯಿರಿ ಎಂದು ಪೋಸ್ಟ್ ಹಾಕಿದ್ದಾರೆ. ಇದೇ ವೇಳೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರತಿಕ್ರಿಯೆ ನೀಡಿದ್ದು, ಕೋಮುಗಲಭೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ವಾಯ್ಸ್ ಮೆಸೇಜ್ ಹರಿಯಬಿಟ್ಟಿರುವ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡಿದ್ದಾರೆ.
ಶಾಂತಿಯುತ ಬಂಟ್ವಾಳವನ್ನು ಮತ್ತೆ ಕೋಮು ಸಂಘರ್ಷಕ್ಕೆ ಗುರಿಮಾಡುವ ಉದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತ ಮಹಮ್ಮದ್ ಶರೀಫ್ ಈ ವಾಯ್ಸ್ ಮೆಸೇಜ್ ಹಾಕಿದ್ದಾನೆ. ಈತ ಒಬ್ಬ ರೌಡಿಶೀಟರ್ ಆಗಿದ್ದು, ಬಿಸಿ ರೋಡಿನಲ್ಲಿ ಶಾಂತಿ ಕದಡುವ ಅವಕಾಶಗಳಿವೆ. ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ತಿಳಿಸಿದ್ದಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಇದೇ ವೇಳೆ, ಬಂಟ್ವಾಳದ ನರಿಕೊಂಬು ಗ್ರಾಪಂ ಮಾಜಿ ಅಧ್ಯಕ್ಷ ಯಶೋಧರ್ ಎಂಬವರು ಮತ್ತೊಂದು ವಾಯ್ಸ್ ಮೆಸೇಜ್ ಹಾಕಿದ್ದು, ನಾಳೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಶರಣ್ ಪಂಪ್ವೆಲ್ ಬಿಸಿ ರೋಡಿಗೆ ಬರಲಿದ್ದಾರೆ, ತಾಕತ್ತಿದ್ದರೆ ತಡೆಯಿರಿ ಎಂದು ಮೆಸೇಜ್ ಹಾಕಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಗೊತ್ತಾಗಿಲ್ಲ.
Mangalore Eid, controversial communial clash audio challenging Sharan Pumpwell goes viral. Audio of former Bantwal municipal corporation Mohammed Sharif had threatened VHP Sharan to come to kaikamba during EID rally.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm