ಬ್ರೇಕಿಂಗ್ ನ್ಯೂಸ್
16-09-24 10:57 pm Mangalore Correspondent ಕರಾವಳಿ
ಮಂಗಳೂರು, ಸೆ.16: “ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್ ನ ಕಳಪೆ ಸೇವೆಗಳ ವಿರುದ್ಧ ಜ್ಯೋತಿ ಸರ್ಕಲ್ ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್ ಸರ್ವಿಸ್ ಸೆಂಟರ್ ಮ್ಯಾಪಲ್ ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ನಮ್ಮ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
”ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ, ಸಮಸ್ಯೆಗೊಳಗಾದ ಗ್ರಾಹಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಬೆಂಬಲ ನೀಡಬೇಕಾಗಿ ಕೇಳಿ ಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆ ಬಂದರೆ ಫ್ಲಿಪ್ಕಾರ್ಟ್ ಅಥವಾ ಅಮೆಜಾನ್ ನಂತಹ ವಿದೇಶೀ ಕಂಪನಿಗಳು ಗ್ರಾಹಕರ ಹಿತರಕ್ಷಣೆಗೆ ನಿಲ್ಲುವುದಿಲ್ಲ. ಕೇವಲ ಸ್ಥಳೀಯ ಅಂಗಡಿಗಳು ಮಾತ್ರ ಗ್ರಾಹಕರ ಹಿತರಕ್ಷಣೆಗೆ ಹಾಗು ಅವರ ಅನುಕೂಲಕ್ಕೆ ನಿಲ್ಲುತ್ತೇವೆ. ಮುಂದಿನ ಹಬ್ಬದ ಖರೀದಿಯನ್ನು ಗ್ರಾಹಕರು ಆದಷ್ಟು ಸ್ಥಳೀಯ ಅಂಗಡಿಗಳಲ್ಲಿ ವ್ಯಾಪಾರ ನಡೆಸಿ ಸ್ಥಳೀಯರನ್ನು ಬೆಂಬಲಿಸಬೇಕಾಗಿ ವಿನಂತಿಸಿ ಕೊಳ್ಳುತ್ತಿದ್ದೇವೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಚೇರ್ ಮೆನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಮಾಜಿ ಅಧ್ಯಕ್ಷ ಶೈಲೇಂದ್ರ ಸರಳಾಯ, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.
iPhone phones issue in phone, retailers to hold protest against company on sep 17.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm