ಬ್ರೇಕಿಂಗ್ ನ್ಯೂಸ್
17-09-24 12:41 pm Mangaluru Correspondent ಕರಾವಳಿ
ಮಂಗಳೂರು, ಸೆ.17: ಹಿಂದು ಸಂಘಟನೆಗಳು ‘ಬಿ.ಸಿ.ರೋಡ್ ಚಲೋ’ ನಡೆಸಿದ್ದನ್ನು ವಿರೋಧಿಸಿ ಬಂಟ್ವಾಳ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್, ಭರತ್ ಕುಮ್ಡೇಲು ಮತ್ತು ಯಶೋಧರ ಕರ್ಬೆಟ್ಟು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಜೊತೆಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಯಶೋಧರ ಕರ್ಬೆಟ್ಟು ಎಂಬವರ ವಿರುದ್ಧ ಬಂಟ್ವಾಳದ ಮಹಮ್ಮದ್ ನವಾಜ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಮಹಮ್ಮದ್ ರಫೀಕ್ ಕೆಳಗಿನಪೇಟೆ ಎಂಬವರು, ಸೆ.16ರಂದು ಬಿಸಿ ರೋಡ್ ಚಲೋ ನಡೆಸಿದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಶರಣ್ ಪಂಪ್ವೆಲ್ ಹಾಗೂ ಭರತ್ ಕುಮ್ಡೇಲು ಮುಸ್ಲಿಂ ಧರ್ಮದ ಘನತೆಗೆ ಕುಂದುಂಟಾಗುವ ರೀತಿ ಮತ್ತು ಮುಸ್ಲಿಮ್ ಸಮುದಾಯದ ಭಾವನೆಗೆ ಧಕ್ಕೆ ಬರುವ ರೀತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮವನ್ನು ನಿಂದಿಸಿ ಕೋಮು ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆ. ಹಿಂದು – ಮುಸ್ಲಿಮರ ನಡುವೆ ದ್ವೇಷ ಉಂಟಾಗುವ ರೀತಿ ವರ್ತಿಸಿದ್ದಾರೆ. ಇದರಿಂದ ಬಂಟ್ವಾಳದಲ್ಲಿ ಶಾಂತಿ ಕದಡುವ ಯತ್ನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದು, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಎಂಬವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಮತ್ತು ಇದರ ಜೊತೆಗ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Bc road protest news, two FIR booked separately on Hindu leaders, Tigh secutity has been impsed in Bantwal. Tension prevailed in BC Road on September 16, Monday morning over the issue of provocative statements made by VHP leader Sharan Pumpwell and Bantwal TMC’s former president Mohammad Sharief.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm