ಬ್ರೇಕಿಂಗ್ ನ್ಯೂಸ್
17-09-24 03:43 pm HK News Desk ಕರಾವಳಿ
ಮಂಗಳೂರು, ಸೆ.17: “ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಸಹಕಾರ ಇಲಾಖೆಯಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಸಂಘವಾಗಿದೆ. ಬೀದಿ ಬದಿ ವ್ಯಾಪಾರಕ್ಕೆ ಸಂಬಂಧಪಟ್ಟ ಯಾವುದೇ ಅನಧಿಕೃತವಾಗಿರುವಂತಹ ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷದ ಲಾಭಕ್ಕಾಗಿ ಬೀದಿ ಬದಿ ವ್ಯಾಪಾರಿಗಳನ್ನು ಸ್ವಂತ ಲಾಭಕ್ಕೆ
ಉಪಯೋಗಿಸಿಕೊಳ್ಳುವ ಯಾವುದೇ ಸಂಘಟನೆಗಳಿಗೆ ಮಹತ್ವವನ್ನು ಕೊಡಬಾರದು“ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿ ಮನವಿ ಮಾಡಿದರು.
”ಬೀದಿ ಬದಿ ವ್ಯಾಪಾರಸ್ಥರ ಸಂಘಟನೆ ಎಂಬ ಹೆಸರಿನ ಯಾವುದೇ ರಾಜಕೀಯ ಪ್ರೇರಿತ ಪಕ್ಷದ ಹೆಸರಿನಲ್ಲಿ ನಿಮಗೆ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ನಿಮ್ಮ ಬಳಿ ಬಂದರೆ ಜಾಗರೂಕರಾಗಿರಿ. ನಾವೆಲ್ಲರೂ ಮೋಸ ಹೋಗಿದ್ದೇವೆ. ನಮಗೆಲ್ಲರಿಗೂ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ಹೇಳಿ ಮೋಸ ಮಾಡಿದ ಬಿ.ಕೆ.ಇಮ್ತಿಯಾಜ್ ಇವರನ್ನು ನಮ್ಮ ಶ್ರೇಯೋಭಿವೃದ್ಧಿ ಸಂಘದಿಂದ ವಜಾಗೊಳಿಸಿದ್ದೇವೆ. ಇವರನ್ನು ವಜಾಗೊಳಿಸಿದ ಕೇವಲ ಒಂದು ತಿಂಗಳ ಒಳಗೆ 93 ಬೀದಿ ವ್ಯಾಪಾರಿಗಳಿಗೆ ಪ್ರಮಾಣಪತ್ರ ಸಿಕ್ಕಿದೆ.
ಬೀದಿ ವ್ಯಾಪಾರಿಗಳ ಪ್ರಮಾಣ ಪತ್ರಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಬೀದಿ ಬದಿ ವ್ಯಾಪಾರದ ಪ್ರಮಾಣ ಪತ್ರಕ್ಕೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಮಕ್ಷಮದೊಂದಿಗೆ ನಡೆಯುತ್ತಿದೆ. ಯಾರು ಗೊಂದಲಕ್ಕೊಳಗಾಗುವ ಅವಶ್ಯಕತೆ ಇಲ್ಲ. ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ನಿರ್ದೇಶಕರೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಬಿ.ಕೆ.ಇಮ್ತಿಯಾಜ್ ಅವರಿಂದ ನಡೆದಿದೆ. ಇವರನ್ನು ನಮ್ಮ ಸಂಘದಿಂದ ವಜಾಗೊಳಿಸುವ ಮೊದಲೇ ಅಧ್ಯಕ್ಷ ಸ್ಥಾನಕ್ಕೆ ಮತ್ತು ನಿರ್ದೇಶಕ ಸ್ಥಾನಕ್ಕೆ ತನ್ನ ವೈಯುಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದಾರೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಘದ ನಿರ್ದೇಶಕ ಪ್ರವೀಣ್ ಕುಮಾರ್, ಮುಹಮ್ಮದ್ ಮುಸ್ತಫ, ಅಬ್ದುಲ್ ರಹಿಮಾನ್, ಇಸ್ಮಾಯಿಲ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.
Mangalore Street Vendors Assn says not to trust any unauthorised institutions or persons that state of giving justice should not be beleived says Association persons holding press meet at press club in Mangalore.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm