ಬ್ರೇಕಿಂಗ್ ನ್ಯೂಸ್
17-09-24 09:34 pm Udupi Correspondent ಕರಾವಳಿ
ಉಡುಪಿ, ಸೆ.17: ರಾಜ್ಯ ಕಾಂಗ್ರೆಸ್ ಸರ್ಕಾರ ಕರಾವಳಿಯ ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿದೆ. ಇದರ ಬಗ್ಗೆ ಹತ್ತು ದಿನದಲ್ಲಿ ಅನುದಾನದ ಭರವಸೆ ನೀಡದಿದ್ದರೆ ಮುಖ್ಯಮಂತ್ರಿಗಳ ಮನೆಯೆದುರು ಧರಣಿ ನಡೆಸಲಾಗುವುದು ಎಂದು ಉಡುಪಿ ಜಿಲ್ಲೆಯ ಶಾಸಕರು ಮತ್ತು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಹಾಗೂ ಬೈಂದೂರು ಶಾಸಕ ಗುರುರಾಜ ಗಂಟಿಹೊಳಿ ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ದಾರೆ.
ಶಾಸಕ ಸುನಿಲ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಎರಡು ಬಜೆಟ್ ನಲ್ಲಿ ಉಡುಪಿಗೆ ಯಾವುದೇ ಯೋಜನೆ ನೀಡಿಲ್ಲ. ಜಿಲ್ಲಾಡಳಿತ ಈ ಬಾರಿ 240 ಕೋಟಿ ಮಳೆಹಾನಿ ಆಗಿದ್ದಾಗಿ ಹೇಳಿದೆ. ಆದರೆ ಚಿಕ್ಕಾಸು ಬಿಡುಗಡೆ ಮಾಡಿಲ್ಲ. ಇದು ಕರಾವಳಿಯ ನಿರ್ಲಕ್ಷ್ಯವಲ್ಲದೆ ಮತ್ತಿನ್ನೇನು?ಉಡುಪಿ ಜಿಲ್ಲೆಯಲ್ಲಿ ಐದು ಜನ ಬಿಜೆಪಿ ಶಾಸಕರಿದ್ದಾರೆ ಎನ್ನುವ ಕಾರಣಕ್ಕೆ ಅನುದಾನ ನೀಡುತ್ತಿಲ್ಲ ಎಂದರು.
ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ನಿರಂತರ ವರ್ಗಾವಣೆ ಮಾಡಲಾಗುತ್ತಿದೆ. ಶಾಸಕರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಸಹಕಾರ ನೀಡುತ್ತಿದ್ದಾರೆ. ಕರಾವಳಿಯ ಎಲ್ಲಾ ಬಿಜೆಪಿ ಶಾಸಕರು ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗೆ ನೀಡಿದ್ದೇವೆ. ಅನುದಾನವನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಸಮಸ್ಯೆಗಳನ್ನು 10 ದಿನದೊಳಗೆ ಸರಿಪಡಿಸದಿದ್ದರೆ ಅನುದಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರುವುದಾಗಿ ಎಚ್ಚರಿಸಿದರು.
ಗ್ರಾಮೀಣ ರಸ್ತೆಗಳಲ್ಲಿ ಡಾಮರು ಕಿತ್ತು ಹೋಗಿ ಓಡಾಡಲಾಗದ ಸ್ಥಿತಿಯಾಗಿದೆ. ರಸ್ತೆಗಳ ಪ್ಯಾಚ್ ವರ್ಕ್ ಗೂ ಸರ್ಕಾರ ಹಣ ನೀಡಿಲ್ಲ. ಹತ್ತು ದಿನದಲ್ಲಿ ಮುಖ್ಯಮಂತ್ರಿಗಳು ಉತ್ತರ ಕೊಡಬೇಕು. ಮೊದಲನೇ ಹಂತದಲ್ಲಿ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುತ್ತೇವೆ. ಎರಡನೇ ಹಂತದಲ್ಲಿ ಎರಡು ಜಿಲ್ಲೆಗಳಲ್ಲಿ ಜನಾಂದೋಲನ ಮಾಡಲಾಗುವುದು ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಬೇಕಾಬಿಟ್ಟಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಿರಂತರ ಬೆಲೆ ಏರಿಕೆ ಮಾಡಲಾಗುತ್ತಿದೆ. ಹಾಲಿಗೆ ಐದು ರು. ಹೆಚ್ಚುಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರವು 11 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ಸಿದ್ಧತೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 40,000 ಬಿಪಿಎಲ್ ಕಾರ್ಡ್ ರದ್ದತಿಗೆ ತಯಾರಿ ಮಾಡಿದೆ. ಜನರನ್ನು ಸೌಲಭ್ಯಗಳಿಂದ ವಂಚಿಸುವ ಹುನ್ನಾರವನ್ನು ಖಂಡಿಸಿ ಕ್ಷೇತ್ರವಾರು ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ ಎಂದರು.
The five BJP MLAs of Udupi district and Kota Srinivas Poojary, Udupi-Chikkamagaluru MP, alleged on Monday, September 16, that the State government is ignoring the district in development front.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm