ಬ್ರೇಕಿಂಗ್ ನ್ಯೂಸ್
18-09-24 10:29 pm Mangalore Correspondent ಕರಾವಳಿ
ಮಂಗಳೂರು, ಸೆ.18: ಎಸ್ಇಝೆಡ್ ವ್ಯಾಪ್ತಿಯ ಜೆಬಿಎಫ್ ಕಂಪನಿಯನ್ನು ಕೇಂದ್ರ ಸರಕಾರದ ಗೈಲ್ ಕಂಪನಿ ಸ್ವಾಧೀನಕ್ಕೆ ಪಡೆದಿದ್ದು, ಇದಕ್ಕಾಗಿ ಭೂಮಿ ಕಳಕೊಂಡಿದ್ದ 115 ಮಂದಿ ಕುಟುಂಬಸ್ಥರಿಗೆ ಉದ್ಯೋಗ ಭದ್ರತೆ ಇರಲಿಲ್ಲ. ಈ ಬಗ್ಗೆ ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ಘಟಕದಿಂದ ಹೋರಾಟ ಕೈಗೆತ್ತಿಕೊಂಡು ಗೈಲ್ ಕಂಪನಿಯ ಅಧಿಕಾರಿಗಳಿಗೆ ಒತ್ತಡ ಹೇರಿದ್ದು ಮತ್ತು ಎಂಎಲ್ಸಿ ಮಂಜುನಾಥ ಭಂಡಾರಿಯವರು ಪರಿಷತ್ ಅಧಿವೇಶನದಲ್ಲಿ ಪ್ರಸ್ತಾಪಿಸಿ ರಾಜ್ಯ ಸರಕಾರ ಮತ್ತು ಜಿಲ್ಲಾಧಿಕಾರಿಗಳಿಗೆ ಒತ್ತಡ ಹೇರಿದ್ದರಿಂದ ಗೈಲ್ ಕಂಪನಿಯು 115 ಮಂದಿಗೆ ಉದ್ಯೋಗ ನೀಡುವುದಕ್ಕೆ ಒಪ್ಪಿಗೆ ನೀಡಿದೆ ಎಂದು ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ಇಝೆಡ್ ಮತ್ತು ಗೈಲ್ ಕಂಪನಿಯ ಅಧಿಕಾರಿಗಳ ಸಭೆಯನ್ನು ಹಲವು ಬಾರಿ ನಡೆಸಲಾಗಿದೆ. ಇದಲ್ಲದೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸದನದಲ್ಲಿ ಪ್ರಸ್ತಾಪಿಸಿದ್ದರು. ಕೈಗಾರಿಕೆಗಾಗಿ ಭೂಮಿ ಕಳಕೊಂಡವರಿಗೆ ಉದ್ಯೋಗ ನೀಡಬೇಕೆಂಬುದು ರಾಜ್ಯ ಸರಕಾರದ ಕಾನೂನು. ಈ ವಿಚಾರವನ್ನು ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ಅವರು ಗೈಲ್ ಕಂಪನಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೂ ಒತ್ತಡ ಹೇರಿದ್ದಲ್ಲದೆ, ಉದ್ಯೋಗ ನೀಡದಿದ್ದರೆ ಲೈಸನ್ಸ್ ನವೀಕರಣ ಮಾಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು.
ಸದನದಲ್ಲಿ ಪ್ರಸ್ತಾಪಿಸಿದ್ದಾಗ, ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಕೂಡ 115 ಮಂದಿಗೆ ಉದ್ಯೋಗ ನೀಡಬೇಕು ಎನ್ನುವ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಡ ಹೇರುವುದಾಗಿ ತಿಳಿಸಿದ್ದರು. ಒಂದು ತಿಂಗಳ ಮೊದಲೇ ಆಗಸ್ಟ್ ಅಂತ್ಯದಲ್ಲಿ ಉದ್ಯೋಗ ನೀಡುವ ಬಗ್ಗೆ ಗೈಲ್ ಕಂಪನಿ ಚೇರ್ಮನ್ ಆಯುಷ್ ಗುಪ್ತಾ ತಿಳಿಸಿದ್ದರು. ಆದರೆ, ಉದ್ಯೋಗ ಖಾಯಮಾತಿ ಮಾಡಿದ ಬಗ್ಗೆ ಆದೇಶ ಪತ್ರ ನೀಡುವಂತೆ ಕೇಳಿಕೊಂಡಿದ್ದೆವು. ಇದೀಗ ಜಿಲ್ಲಾಧಿಕಾರಿಗಳಿಗೆ ಸ್ವತಃ ಪತ್ರ ಬರೆದು ಆಯುಷ್ ಗುಪ್ತಾ ಸೆ.30ರ ಒಳಗೆ ಉದ್ಯೋಗಿಗಳಿಗೆ ಆದೇಶ ಪತ್ರ ನೀಡುವುದಾಗಿ ತಿಳಿಸಿದ್ದಾರೆ. ಇದು ಕಾಂಗ್ರೆಸ್ ಕಾರ್ಮಿಕ ಘಟಕದ ಮತ್ತು ಇದಕ್ಕಾಗಿ ಶ್ರಮಿಸಿದ ಎಲ್ಲರ ಗೆಲುವು ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಮನೋರಾಜ್ ರಾಜೀವ, 115 ಮಂದಿ ಭೂಮಿ ಕಳಕೊಂಡವರಿಗೆ ಉದ್ಯೋಗ ನೀಡುವುದು ಖಚಿತವಾಗಿದೆ. ಆದರೆ, ಜೆಬಿಎಫ್ ನಲ್ಲಿ ಉದ್ಯೋಗದಲ್ಲಿದ್ದ ಇನ್ನೂ 80 ಮಂದಿಯಷ್ಟು ಜನ ಗೈಲ್ ಕಂಪನಿಯಲ್ಲಿ ಉದ್ಯೋಗ ವಂಚಿತರಾಗಿದ್ದಾರೆ. ಕೌಶಲ್ಯ ಇದ್ದರೂ, ಗೈಲ್ ಕಂಪನಿಯವರು ಕೆಲಸಕ್ಕೆ ನಿರಾಕರಣೆ ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ, ದಕ್ಷಿಣ ಕನ್ನಡ ಆಸುಪಾಸಿನ ಜಿಲ್ಲೆಯವರು ಈ ರೀತಿ ಉದ್ಯೋಗ ಕಳಕೊಂಡವರಿದ್ದಾರೆ. ಗೈಲ್ ಕಂಪನಿಯಲ್ಲಿ ಇನ್ನೂ ನೂರಕ್ಕೂ ಹೆಚ್ಚು ಉದ್ಯೋಗಗಳಿದ್ದು, ಭರ್ತಿ ಮಾಡುವ ಸಂದರ್ಭದಲ್ಲಿ ಜೆಬಿಎಫ್ ನಲ್ಲಿ ಕೆಲಸಕ್ಕಿದ್ದವರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.
SEZ land GAIL company employment is the victory of congress labourers says Lawrence D’Souza, District President of the Labour Cell.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm