ಬ್ರೇಕಿಂಗ್ ನ್ಯೂಸ್
25-09-24 09:03 pm Mangalore Correspondent ಕರಾವಳಿ
ಮಂಗಳೂರು, ಸೆ.25 : ಮಂಗಳೂರಿನ ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್)ದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಕುಟುಂಬದ (ಪಿಡಿಎಫ್) ಉದ್ಯೋಗಸ್ಥರನ್ನು ಜಿಎಂಪಿಎಲ್(ಗೈಲ್) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್‌ದೀಪ್ ಸಿಂಗ್ ಪುರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜೆಬಿಎಫ್- ಜಿಎಂಪಿಎಲ್(ಗೈಲ್) ಸಮಸ್ಯೆಯನ್ನು ಕೇಂದ್ರ ಸರ್ಕಾರವು ಕೇವಲ 40 ದಿನಗಳಲ್ಲಿ ಬಗೆಹರಿಸಿರುವ ಹಿನ್ನಲೆಯಲ್ಲಿ ಕ್ಯಾ. ಚೌಟ ಅವರು ಮಂಗಳೂರಿನ ಜೆಬಿಎಫ್ ಪಿಡಿಎಫ್ ಉದ್ಯೋಗಸ್ಥರ ಪರವಾಗಿ ಇಂದು ನವದೆಹಲಿಯಲ್ಲಿ ಪೆಟ್ರೋಲಿಯಂ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.
ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ತಕ್ಷಣದಲ್ಲೇ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದ ಸುಮಾರು 115 ಪಿಡಿಎಫ್ ಕುಟುಂಬಸ್ಥರ ಬಹುದಿನಗಳಿಂದ ಈಡೇರದೆ ಬಾಕಿಯಾಗಿದ್ದ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಪೆಟ್ರೋಲಿಯಂ ಸಚಿವಾಲಯ ಹಾಗೂ ಜಿಎಂಪಿಎಲ್ ಕಂಪೆನಿ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಪ್ರೇರೇಪಿಸಿ ಸಮಸ್ಯೆ ಬಗೆಹರಿಸುವುದಕ್ಕೆ ವಹಿಸಿದ್ದ ಮುತುರ್ವಜಿಗೆ ಸಚಿವ ಹರ್‌ದೀಪ್ ಸಿಂಗ್ ಅವರು ಇದೇ ವೇಳೆ ಕ್ಯಾ. ಚೌಟ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಖುದ್ದು ಸಚಿವ ಹರ್‌ದೀಪ್ ಸಿಂಗ್ ಪುರಿ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, “ಮಂಗಳೂರಿನ ಎಂಎಸ್‌ಇಝೆಡ್‌ನಲ್ಲಿ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್(ಜಿಎಂಪಿಎಲ್), ಜೆಬಿಎಫ್ ಕಂಪನಿಯನ್ನು ಸ್ವಾಧೀನ ಪಡಿಸಿದ ಬಳಿಕ 115 ಜೆಬಿಎಫ್ - ಪಿಡಿಎಫ್ ಕುಟುಂಬಸ್ಥರ ಉದ್ಯೋಗ ಮುಂದುವರಿಸುವುದಕ್ಕೆ ಸಮಸ್ಯೆಯಾಗಿತ್ತು. ಈ ಸಮಸ್ಯೆ ಬಗ್ಗೆ ಕ್ಯಾ. ಚೌಟ ಅವರು ನನ್ನ ಬಳಿ ನಿರಂತರ ಫಾಲೋಅಪ್ ಮಾಡಿ ಬಹಳ ವರ್ಷಗಳಿಂದ ಬಗೆಹರಿಯದೆ ಬಾಕಿಯುಳಿದಿದ್ದ ಕುಟುಂಬಸ್ಥರ ಸಂಕಷ್ಟವನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 3.0 ಸರ್ಕಾರದಲ್ಲಿ ಕೇವಲ 40 ದಿನದಲ್ಲಿ ಜೆಬಿಎಫ್ ಉದ್ಯೋಗಸ್ಥರ ಈ ಜ್ವಲಂತ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿರುವುದು ನನಗೆ ಬಹಳ ಸಂತಸ ತಂದಿದೆ. ಈ ವಿಚಾರದಲ್ಲಿ ನಾನು ಕ್ಯಾ. ಚೌಟ ಅವರ ಬದ್ಧತೆ ಮತ್ತು ಪ್ರಯತ್ನವನ್ನು ಪ್ರಶಂಸಿಸುತ್ತೇನೆ ಎಂದು ಸಚಿವ ಹರ್‌ದೀಪ್ ಸಿಂಗ್ ಪುರಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Dakshina Kannada Member of Parliament & @BJP4Karnataka State Secretary @CaptBrijesh Chowta Ji met me today to express his appreciation for the quick resolution of the matter pertaining to employment of members of 115 Project Displaced Families affected by the formation of GAIL… pic.twitter.com/RRc7bMlODX
— Hardeep Singh Puri (@HardeepSPuri) September 25, 2024
GAIL Mangalore Petrochemicals takeover of erstwhile JBF, Hardeep Singh Puri appreciates efforts of MP Brijesh Chowta. Dakshina Kannada Member of Parliament CaptBrijesh Chowta Ji met me today to express his appreciation for the quick resolution of the matter pertaining to employment of members of 115 Project Displaced Families affected by the formation of GAIL Mangalore Petrochemicals Ltd after the takeover of erstwhile JBF Petrochemical Ltd. in Mangalore Special Economic Zone (MSEZ).
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm