ಬ್ರೇಕಿಂಗ್ ನ್ಯೂಸ್
06-10-24 08:18 pm Mangalore Correspondent ಕರಾವಳಿ
ಮಂಗಳೂರು, ಅ.6: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪ ಚುನಾವಣೆಯ ಕಾರ್ಯ ಚಟುವಟಿಕೆಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಜಿಲ್ಲಾ ಪ್ರಮುಖರ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಗೆಲುವಿಗೆ ಗ್ರಾಮ ಮಟ್ಟದಲ್ಲಿ ಚಟುವಟಿಕೆಗಳನ್ನು ನಡೆಸುವ ದೃಷ್ಟಿಯಿಂದ ಬಿಜೆಪಿಯ ಎಲ್ಲಾ ನಾಯಕರು ಕಾರ್ಯೋನ್ಮುಖರಾಗಬೇಕು. ಚುನಾವಣೆ ಸಮೀಪದಲ್ಲೇ ಇರುವಾಗ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಉಡುಪಿ ಸಂಸತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲುವು ಸಾಧಿಸುತ್ತದೆ. ಕಿಶೋರ್ ಕುಮಾರ್ ಅವರು ನಿಮ್ಮೆಲ್ಲರ ಪ್ರತಿನಿಧಿಯಾಗಿ ನಮ್ಮ ಜಿಲ್ಲೆಯನ್ನು ಪ್ರತಿನಿಧಿಸುತ್ತಾರೆ. ಅವರ ಗೆಲುವಿನ ದೃಷ್ಟಿಯಿಂದ ಚುನಾವಣೆಯ ವರೆಗೂ ಅವಿರತವಾಗಿ ಶ್ರಮಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಶಾಸಕರಾದ ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ ವೈ, ವೇದವ್ಯಾಸ್ ಕಾಮತ್, ಭಾಗಿರಥಿ ಮುರುಳ್ಯ, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಡಾ. ಧನಂಜಯ್ ಸರ್ಜಿ, ಚುನಾವಣಾ ಸಂಚಾಲಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಾಜಿ ಶಾಸಕರುಗಳು, ಜಿಲ್ಲೆಯ ಪ್ರಮುಖರು, ಚುನಾವಣಾ ಕಾರ್ಯ ನಿರ್ವಹಣಾ ತಂಡದ ಪ್ರಮುಖರು ಉಪಸ್ಥಿತರಿದ್ದರು.
ಕಿಶೋರ್ ಕುಮಾರ್ ರಿಂದ ಪ್ರೇರಣೆ ಪಡೆದಿದ್ದೇನೆ ; ಚೌಟ
ಇದಕ್ಕೂ ಮುನ್ನ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳ ಸಭೆ ನಡೆಯಿತು. ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಕಿಶೋರ್ ಕುಮಾರ್ ಅವರಿಂದ ಪಕ್ಷ ಚಟುವಟಿಕೆಯಲ್ಲಿ ಪ್ರೇರಣೆ ಪಡೆದವರಲ್ಲಿ ನಾನೂ ಒಬ್ಬ ಎಂಬ ಹೆಮ್ಮೆಯಿದೆ. ವಿವಿಧ ಚುನಾವಣೆಗಳಲ್ಲಿ ಬೂತ್ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ಸಂಘಟನಾ ಚಟುವಟಿಕೆಯ ಅನುಭವವಿರುವ ಕಿಶೋರ್ ಕುಮಾರ್ ಅವರನ್ನು ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸಂಘಟನೆ, ಚಟುವಟಿಕೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಅವರನ್ನು ವಿಧಾನ ಪರಿಷತ್ತಿಗೆ ಗೆಲ್ಲಿಸಿ ಕಳಿಸಿಕೊಡುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಹೇಳಿದರು.
ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್ ಮಾತನಾಡಿ, ಪಕ್ಷದ ಅನೇಕ ಜವಬ್ದಾರಿಗಳನ್ನು ಹೊತ್ತು ಯಶಸ್ವಿಯಾಗಿರುವ ಕಿಶೋರ್ ಕುಮಾರ್ ಅವರು ಜನಸೇವೆಯಲ್ಲಿಯೂ ಅದೇ ಬದ್ಧತೆ ಪ್ರದರ್ಶಿಸುತ್ತಾರೆ. ವಿಧಾನ ಪರಿಷತ್ತಿನಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಧ್ವನಿಯಾಗುತ್ತಾರೆ ಎಂದು ಹೇಳಿದರು.
ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಚು, ಉಪ ಮೇಯರ್ ಭಾನುಮತಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಇನ್ನಿತರ ಪ್ರಮುಖರು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು.
Mangalore BJP leaders hold meeting about Vidhan Sabha elections; Secretary Sunil Kumar gives instructions.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm