ಬ್ರೇಕಿಂಗ್ ನ್ಯೂಸ್
06-10-24 09:22 pm Mangalore Correspondent ಕರಾವಳಿ
ಮಂಗಳೂರು, ಅ.6: ದೇಶ ಸ್ವತಂತ್ರಗೊಂಡು 75 ವರ್ಷ ಕಳೆದರೂ ಪ್ರಾಚೀನ ದೇಗುಲಗಳು ಸೇರಿದಂತೆ ಹಿಂದುಗಳ ಹೆಚ್ಚಿನ ದೇವಸ್ಥಾನಗಳು ಸರಕಾರದ ವಶದಲ್ಲೇ ಇವೆ. ಇದರಿಂದ ಹಿಂದೂಗಳ ನಂಬಿಕೆಗೆ ಧಕ್ಕೆ ಉಂಟಾಗುವ ಕೆಲಸಗಳಾಗುತ್ತಿವೆ. ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿಯಲ್ಲಿ ದೇಶದ ಎಲ್ಲ ದೇವಸ್ಥಾನಗಳಿಗೂ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿರುವ ದೇವಾಲಯಗಳನ್ನು ಹಿಂದೂಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಸೂಚನೆ ನೀಡಿದೆ. ಆದರೆ ದೇವಸ್ಥಾನಗಳನ್ನು ಸರಕಾರ ಹಿಂದುಗಳಿಗೆ ನೀಡದೆ ತನ್ನ ವಶದಲ್ಲೇ ಇರಿಸಿಕೊಂಡಿದ್ದು ಇದರಿಂದಾಗಿ ನಮ್ಮ ಶ್ರದ್ಧಾಕೇಂದ್ರಗಳಿಗೆ ಅಪಚಾರಗಳಾಗುತ್ತಿವೆ. ನ್ಯಾಯಾಲಯದ ತೀರ್ಪಿನಂತೆ ಎಲ್ಲ ಹಿಂದೂ ದೇಗುಲಗಳನ್ನು ಸರಕಾರವು ಸಮಾಜದ ವಶಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಗಳು ದೇವಸ್ಥಾನಗಳನ್ನು ವಶಕ್ಕೆ ಪಡೆದ ಬಳಿಕ ಅವನ್ನು ಸ್ವಸ್ಥ ಸ್ಥಿತಿಯಲ್ಲಿಡಬೇಕಾದ ಕರ್ತವ್ಯ ಇರುತ್ತದೆ. ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ಅಪವಿತ್ರದಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾದ್ದು ಆಯಾ ಸರ್ಕಾರಗಳ ಕರ್ತವ್ಯ. ಸಂಬಂಧಪಟ್ಟ ವಿಭಾಗಗಳು ಈ ಬಗ್ಗೆ ನಿಗಾ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದೇ ಇರಬೇಕಾದರೆ, ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾಗಬೇಕು. ತಮ್ಮದೇ ಗೋವುಗಳಿದ್ದರೆ ಶುದ್ಧ ತುಪ್ಪ, ಹಾಲು ದೊರಕುತ್ತದೆ.
ದೇವಸ್ಥಾನಗಳು ಹಿಂದುಗಳ ಜಾಗೃತ ಕೇಂದ್ರಗಳಾದಾಗ ಮಾತ್ರ ಧಾರ್ಮಿಕ ನಂಬಿಕೆ, ನಡವಳಿಕೆಯನ್ನು ಗೌರವಿಸಲು ಸಾಧ್ಯವಾಗುತ್ತದೆ. ಇಂತಹ ಉಪಕ್ರಮಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.
Despite 75 years of independence, many ancient temples, including prominent ones, remain under government control, which is damaging the faith of Hindus, according to Pejawar Matha’s Sri Vishwaprasanna Teertha Swamiji.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm