ಬ್ರೇಕಿಂಗ್ ನ್ಯೂಸ್
06-10-24 10:58 pm Udupi Correspondent ಕರಾವಳಿ
ಉಡುಪಿ, ಅ.6 : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಕಾಣಿಸಿಕೊಂಡಿದ್ದು ಇತ್ತ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಭಾನುವಾರ ಸಂಜೆ ಮೇಘಸ್ಫೋಟ ಸಂಭವಿಸಿದೆ. ಹೆಬ್ರಿ ಸಮೀಪದ ಕಬ್ಬಿನಾಲೆ ಬೆಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ಆಸುಪಾಸಿನಲ್ಲಿ ದಿಢೀರ್ ಪ್ರವಾಹ ಸ್ಥಿತಿ ಏರ್ಪಟ್ಟಿದೆ.
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟ ಉಂಟಾಗಿದೆ. ಇದರಿಂದಾಗಿ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ.
ಭೀಕರ ಜಲ ಪ್ರವಾಹದಿಂದಾಗಿ ಹಲವು ಮನೆಗಳು, ಕಾರು ಬೈಕ್ ಗಳು ಕೊಚ್ಚಿ ಹೋಗಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿದ್ದರಿಂದ ಭೀಕರ ಪ್ರವಾಹ ಸೃಷ್ಟಿಯಾಗಿದೆ ಎನ್ನಲಾಗುತ್ತಿದೆ. ಮುದ್ರಾಡಿಯ ಹೊಸ ಕಂಬ್ಲದಲ್ಲಿ 1, ಕಾಂತರಬೈಲಿನಲ್ಲಿ 4, ಕೆಲಕಿಲದಲ್ಲಿ 3 ಮನೆಗಳು ಅರ್ಧದಷ್ಟು ಮುಳುಗಿದ್ದು, ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಗ್ಗ ಕಟ್ಟಿ ಮನೆ ಮಂದಿಯನ್ನು ರಕ್ಷಿಸಿದ್ದಾರೆ.
ಮುದ್ರಾಡಿ ಆಸುಪಾಸಿನಲ್ಲಿ ಎಂಟು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ನೆರೆಯಿಂದಾಗಿ ಮುದ್ರಾಡಿ ಸಂಪರ್ಕಿಸುವ ಬಲ್ಲಾಡಿ ತುಂಡುಗುಡ್ಡೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು ಸ್ಥಳೀಯರು ಬದಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
‘ಕಬ್ಬಿನಾಲೆಯ ಬೆಟ್ಟದಲ್ಲಿ ಉಂಟಾದ ಮೇಘಸ್ಫೋಟದಿಂದ ಕೆಲವೇ ಗಂಟೆಯಲ್ಲಿ ಭಾರೀ ಮಳೆಯಾಗಿ ಜಲ ಪ್ರವಾಹ ಸೃಷ್ಠಿಯಾಗಿದೆ. ಇದರ ಪರಿಣಾಮ ನೀರು ಮನೆಗಳಿಗೆ ನುಗ್ಗಿವೆ ಎಂದು ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಗಣಪತಿ ಮುದ್ರಾಡಿ ತಿಳಿಸಿದ್ದಾರೆ.
ಇನ್ನೆರಡು ದಿನ ಭಾರೀ ಮಳೆ ಸೂಚನೆ
ಪ್ರವಾಹದ ಕುರಿತು ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, 'ಅ.9ರ ವರೆಗೆ ಇದೇ ರೀತಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಹೆಬ್ರಿ ತಾಲೂಕಿನ ಬಲ್ಲಾಡಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು, ನೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ' ಎಂದು ಹೇಳಿದ್ದಾರೆ.
Heavy rain at hebri and Udupi, houses flooded with water cars bike go missing.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm