ಬ್ರೇಕಿಂಗ್ ನ್ಯೂಸ್
07-10-24 01:23 pm Mangalore Correspondent ಕರಾವಳಿ
ಮಂಗಳೂರು, ಅ.7: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ, ಉದ್ಯಮಿ ಮುಮ್ತಾಜ್ ಆಲಿ ಶವ ಪತ್ತೆಯಾಗಿದೆ. ಇದೇ ವೇಳೆ ಘಟನೆ ಸಂಬಂಧಿಸಿ ಇನ್ನೊಬ್ಬ ಸೋದರ ಕಾವೂರು ಠಾಣೆಗೆ ದೂರು ನೀಡಿದ್ದು ಮುಮ್ತಾಜ್ ಆಲಿ ಅವರನ್ನು ಬ್ಲಾಕ್ಮೇಲ್ ಮಾಡಿದ್ದಾರೆಂದು ಹೇಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ.
ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಮಹಿಳೆ ಸೇರಿದಂತೆ ಆರು ಮಂದಿಯ ವಿರುದ್ಧ ಮುಮ್ತಾಜ್ ಆಲಿ ಸೋದರ ಹೈದರ್ ಆಲಿ ದೂರು ನೀಡಿದ್ದಾರೆ. ಮುಮ್ತಾಜ್ ಆಲಿ ಅವರನ್ನು ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಆರೋಪ ಕೇಳಿಬಂದಿದೆ. ಕಾಟಿಪಳ್ಳ ನಿವಾಸಿ ರೆಹಮತ್, ಸುರತ್ಕಲ್ ಆಸುಪಾಸಿನ ನಿವಾಸಿಗಳಾದ ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯಿಬ್, ಸತ್ತಾರ್ ಮತ್ತು ಮುಮ್ತಾಜ್ ಆಲಿಯವರ ಕಾರು ಚಾಲಕ ಸಿರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ರೆಹಮತ್ ಎಂಬ ಮಹಿಳೆಯನ್ನು ಮುಂದಿಟ್ಟು ಬ್ಲ್ಯಾಕ್ಮೇಲ್ ಮಾಡಿದ್ದು ಈಗಾಗಲೇ 50 ಲಕ್ಷ ರೂಪಾಯಿ ಮುಮ್ತಾಜ್ ಅಲಿಯವರಿಂದ ವಸೂಲಿ ಮಾಡಿದ್ದಾರೆ. ಅಲ್ಲದೇ, 25 ಲಕ್ಷ ರು. ಮೊತ್ತದ ಚೆಕ್ ಪಡೆದಿದ್ದಾರೆ. ಆದರೆ ಮತ್ತೆ 50 ಲಕ್ಷ ಕೊಡಬೇಕೆಂದು ಬ್ಲಾಕ್ಮೇಲ್ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಶಾಫಿ ಮರಳು ದಂಧೆ ನಡೆಸುವ ವ್ಯಕ್ತಿಯಾಗಿದ್ದು ಮೊಯ್ದೀನ್ ಬಾವಾರ ರಾಜಕೀಯ ವಿರೋಧಿಯಾಗಿದ್ದಾನೆ.






ಆರೋಪಿಗಳು ಈ ಮೊದಲು ಮುಮ್ತಾಜ್ ಆಲಿ ಮೇಲೆ ಹಲ್ಲೆ ನಡೆಸಿದ್ದು ಹಣಕ್ಕಾಗಿ ಪೀಡಿಸುತ್ತಿದ್ದರು. ಅದೇ ಕಾರಣಕ್ಕೆ ಸೋದರ ಮುಮ್ತಾಜ್ ಸಾವಿಗೆ ಶರಣಾಗಿರುವ ಸಾಧ್ಯತೆಯಿದೆ. ಮುಮ್ತಾಜ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಹೊಂದಿದ್ದು ರೆಹಮತ್ ಎನ್ನುವ ಮಹಿಳೆ ಜೊತೆಗೆ ಸಂಬಂಧ ಇಟ್ಟುಕೊಂಡಿದ್ದಾರೆಂದು ಬಿಂಬಿಸಿ ಹೆಸರು ಕೆಡಿಸುವ ಷಡ್ಯಂತ್ರ ಮಾಡಿದ್ದರು ಎಂಬುದಾಗಿ ದೂರಿನಲ್ಲಿ ಹೈದರ್ ಆಲಿ ತಿಳಿಸಿದ್ದಾರೆ.
ಇದೇ ವೇಳೆ, ಸೋದರನನ್ನ ನೆನೆದು ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಕಣ್ಣೀರು ಹಾಕಿದ್ದು ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಪೊಲೀಸರು ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು. ರಾಜಕೀಯ ರಹಿತವಾಗಿ ಕೆಲಸ ಮಾಡಿದ್ದ ವ್ಯಕ್ತಿಯಾಗಿದ್ದ ಎಂದು ಹೇಳಿದ್ದಾರೆ.
Mangalore Mumtaz ali suicide case, Kavoor police book blackmail case against six persons including woman, extort 75 lakhs amount. Based on the complaint by Ali’s brother Hydar Ali, the police booked a case under sections 308 (2), 308 (5), 351 (2), 190 of BNS Act against Rehamath, Abdul Sattar, Shafi, Mustafa and Sohaib, Siraj. In his complaint, he has accused all six of blackmailing him and extorting money.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am