ಬ್ರೇಕಿಂಗ್ ನ್ಯೂಸ್
10-10-24 08:24 pm Mangaluru Correspondent ಕರಾವಳಿ
ಮಂಗಳೂರು, ಅ.10: ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ಎಲ್ಲ ಸಹ ಸಂಘಟನೆಗಳ ಸಹಕಾರದಿಂದ ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಪ್ರತಿಭಟನಾ ಸಭೆ ನಗರದ ಕ್ಲಾಕ್ ಟವರ್ ಎದುರು ಗುರುವಾರ ನಡೆಯಿತು.
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರು ಭಾಗವಹಿಸಿ, ಕಾಫಿ ಕೃಷಿಯನ್ನು ಸಫಾಸಿ ಕಾಯಿದೆಯಡಿ ತಂದು ಬೆಳೆಗಾರರಿಗೆ ಕಿರುಕುಳ ನೀಡುತ್ತಿರುವ ಕೆನರಾ ಬ್ಯಾಂಕ್‌ನ ರೈತ/ ಬೆಳೆಗಾರರ ವಿರೋಧಿ ಮನಸ್ಥಿತಿಯ ಕೆಲವು ಉನ್ನತ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆ ವಿರುದ್ಧ ಘೋಷಣೆ ಕೂಗಿ, ಸಂಘಟನೆ ಪ್ರತಿನಿಧಿಗಳು ಮಾತನಾಡಿದರು.

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ರೈತರು ದೇಶದ ಬೆನ್ನುಲುಬಾಗಿದ್ದಾರೆ. ಕಾಫಿ ಬೆಳೆಗಾರರೆಂದರೆ ದೊಡ್ಡ ಶ್ರೀಮಂತರೆಂಬ ಭಾವನೆ ಇದೆ. ಅಲ್ಲಿಯೂ ಸಣ್ಣ ರೈತರು, ಸಂಕಷ್ಟವಿದೆ. ಈಗಿನ ಸಮಸ್ಯೆ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಗಮನ ಸೆಳೆಯುವುದಾಗಿ ಹೇಳಿದರು.
ಮೂಡಿಗೆರೆ ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಡಿ.ಮನೋಹರ್, ಮುಖಂಡರಾದ ದೀಪಕ್ ದೊಡ್ಡಯ್ಯ, ನಿಡುವಾಳೆ ಚಂದ್ರು, ಹದ್ದೂರಿ ಕುಮಾರ್, ಲೋಹಿತ್, ಕೃಷ್ಣ ಕೆಜಿಎಫ್, ಮಲ್ಲೇಶ್, ಬಿ.ಸಿ.ದಯಾಕರ್ ಮತ್ತಿತರರು ಮಾತನಾಡಿದರು.
ಈಗಾಗಲೇ ಹಲವಾರು ಸಮಸ್ಯೆಗಳಲ್ಲಿ ಸಿಲುಕಿರುವ ಕಾಫಿ ಬೆಳೆಗಾರರಿಗೆ ಈಗ ಸಾಲ ಹಾಗೂ ಸುಸ್ತಿ ಸಾಲದ ಸಮಸ್ಯೆ ಬಹಳ ತೀವ್ರವಾಗಿ ಕಾಡುತ್ತಿದೆ. ಸರ್ಫಾಸಿ ಕಾಯಿದೆ ನೆಪದಲ್ಲಿ ಬೆಳೆಗಾರರ ಆಸ್ತಿ ಹರಾಜು ಹಾಕುತ್ತಿರುವ ಬ್ಯಾಂಕ್‌ಗಳ ನೀತಿ ವಿರುದ್ಧ ಹೋರಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಬೆಳೆಗಾರರ ಸಮಸ್ಯೆಗಳನ್ನು ಕುರಿತು ತಿಳಿದಿರುವ ಬಹುತೇಕ ಎಲ್ಲ ಬ್ಯಾಂಕ್‌ಗಳು ಬೆಳೆಗಾರರ ಹಿತರಕ್ಷಣೆ ದೃಷ್ಟಿಯಿಂದ ಸಾಲ ಮರುಪಾವತಿಗೆ ಸಮಯಾವಕಾಶ ನೀಡಲು ಒಪ್ಪಿ ಬೆಳೆಗಾರರ ಸಹಾಯಕ್ಕೆ ನಿಂತಿವೆ. ಆದರೆ ಕೆನರಾ ಬ್ಯಾಂಕ್ ಮಾತ್ರ ಅತ್ಯಂತ ಅಮಾನವೀಯವಾಗಿ ಬೆಳೆಗಾರರ ವಿರುದ್ಧ ವಸೂಲಾತಿ, ಹರಾಜು ಕ್ರಮ ಜರುಗಿಸುತ್ತಿದೆ.
ಬೆಳೆಗಾರರ ತೋಟಗಳನ್ನು ಕೆಲವೇ ತಿಂಗಳ ನೋಟಿಸ್ ನೀಡಿ ಆನ್‌ಲೈನ್‌ನಲ್ಲಿ ಹರಾಜು ಮಾಡುತ್ತಿದೆ, ಈ ಕುರಿತು ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಜಿಲ್ಲಾ ಲೀಡ್ ಬ್ಯಾಕ್ ಮುಖ್ಯಸ್ಥರ ಮೂಲಕ ಮನವಿ ಸಲ್ಲಿಸಿದ್ದರೂ ಕೂಡ ಕೆನರಾ ಬ್ಯಾಂಕ್ ಅಧಿಕಾರಿ ವರ್ಗ ಅತ್ಯಂತ ಉದ್ಧಟತನದಿಂದ ಬೆಳೆಗಾರರ ವಿರುದ್ಧ ಕ್ರಮ ಜರುಗಿಸುತ್ತಲೇ ಬಂದಿದೆ ಎಂದು ಅವರು ಆರೋಪಿಸಿದರು.
A protest meeting against the Sarfasi Act and Canara Bank was held in front of the clock tower in the city on Thursday under the leadership of the Karnataka Growers' Union with the cooperation of all other organizations.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am