ಬ್ರೇಕಿಂಗ್ ನ್ಯೂಸ್
11-10-24 09:54 pm Mangalore Correspondent ಕರಾವಳಿ
ಮಂಗಳೂರು, ಅ.11 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯ ನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು ಮತ್ತು ಕೆಪಿಸಿಸಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಉಭಯ ಜಿಲ್ಲೆಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನಿಯೋಜಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ಉಡುಪಿ-ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಯ ಉಸ್ತುವಾರಿಗಳಾಗಿ ಕೆಪಿಸಿಸಿಯ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಯೋಜಿಸಲಾಗಿದೆ.
ದ.ಕ. ಜಿಲ್ಲಾ ಉಸ್ತುವಾರಿಗಳಾಗಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ವಿಧಾನಸಭಾ ಅಭ್ಯರ್ಥಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಜಿ.ಕೃಷ್ಣಪ್ಪ, ಉಸ್ತುವಾರಿ ಪದಾಧಿಕಾರಿಗಳಾಗಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಹೆಗ್ಗಡೆ, ಜಿ.ಎ.ಬಾವ, ನಿವೇದಿತ್ ಆಳ್ವ, ಲಲಿತ್ ರಾಘವ್, ಜುಲ್ಫಿಕರ್ ಅಹಮದ್ ಖಾನ್, ಮಟಿಲ್ಡ ಡಿಸೋಜ, ಪ್ರವೀಣ್ ಪೀಟರ್ ಅವರನ್ನು ನಿಯೋಜಿಸಲಾಗಿದೆ.
ಉಡುಪಿ ಜಿಲ್ಲಾ ಉಸ್ತುವಾರಿಗಳಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಎಂಎಲ್ಸಿ-ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಸುಕುಮಾರ ಶೆಟ್ಟಿ, ವಿಧಾನಸಭಾ ಅಭ್ಯರ್ಥಿಗಳಾದ ಎಂ.ದಿನೇಶ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ಉದಯ ಶೆಟ್ಟಿ, ಉಸ್ತುವಾರಿ ಪದಾಧಿಕಾರಿಗಳಾಗಿ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಗೌಡ, ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಲಾವಣ್ಯ ಬಳ್ಳಾಲ್ ಅವರನ್ನು ನಿಯೋಜಿಸಲಾಗಿದೆ.
ಸಂಚಾಲಕರಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಯೋಜಕರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಬಾಲರಾಜ್ ಅವರು ನೇಮಕಗೊಂಡಿದ್ದಾರೆ.
By elections, incharge election committee ordered to inspect vidhan parishad elections in both DK and Udupi.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm