ಬ್ರೇಕಿಂಗ್ ನ್ಯೂಸ್
15-10-24 07:30 pm Mangalore Correspondent ಕರಾವಳಿ
ಮಂಗಳೂರು, ಅ.15 : ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲೀಕರ ಸಂಘದ ನೇತೃತ್ವದಲ್ಲಿ ಜಿಲ್ಲಾ ಕ್ಯಾಟರಿಂಗ್, ಧ್ವನಿ, ಬೆಳಕು ಹಾಗೂ ಫ್ಲವರ್ ಡೆಕೋರೇಶನ್ ಮಾಲೀಕರ ಸಂಘಗಳ ಜಂಟಿ ಸಮಾಲೋಚನಾ ಸಭೆ ಶಾಮಿಯಾನ ಮಾಲೀಕರ ಸಂಘದ ಜಿಲ್ಲಾ ಅಧ್ಯಕ್ಷ ಬಾಬು ಕೆ. ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದು, ಒಕ್ಕೂಟ ರಚನೆಗೆ ನಿರ್ಧರಿಸಲಾಯಿತು.
ಏಕರೂಪಿ ದರ ಪಟ್ಟಿ ಪಾಲನೆ, ಬಿಲ್ ವಸೂಲಾತಿ ಮೊದಲಾದ ಸಮಸ್ಯೆಗಳನ್ನು ಸರಿಪಡಿಸಲು ಒಗ್ಗಟ್ಟಿನಲ್ಲಿ ಸಮನ್ವಯತೆಯಿಂದ ಗ್ರಾಹಕರಿಗೆ ನ್ಯಾಯಯುತ ಸೇವೆ ನೀಡಲು ಒಕ್ಕೂಟ ರಚನೆಯಿಂದ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ನ.5ರಂದು ಸಭೆ ನಡೆಸಿ, ರೂಪುರೇಷೆಗಳನ್ನು ಸಿದ್ದಪಡಿಸಲು ಉದ್ದೇಶಿಸಲಾಗಿದೆ. ಈ ಸಂದರ್ಭ ಮಾತನಾಡಿದ ಬಾಬು ಕೆ. ವಿಟ್ಲ ಅವರು, ಜಿಲ್ಲೆಯಲ್ಲಿ 8 ವರ್ಷಗಳಿಂದ ಶಾಮಿಯಾನ ಮಾಲೀಕರ ಸಂಘ ಕಾರ್ಯಾಚರಿಸುತ್ತಿದೆ.


650 ಸದಸ್ಯರಿದ್ದು, 11 ಸಾವಿರಕ್ಕೂ ಅಧಿಕ ಮಂದಿ ಕೆಲಸಗಾರರಿದ್ದಾರೆ. ಕ್ಯಾಟರಿಂಗ್, ಧ್ವನಿ, ಬೆಳಕು ಹಾಗೂ ಫ್ಲವರ್ ಡೆಕೋರೇಶನ್ ಮಾಲೀಕರ ಸಂಘಗಳಲ್ಲಿ ಒಟ್ಟು 4 ಸಾವಿರ ಸದಸ್ಯರಿದ್ದು, 30 ಸಾವಿರಕ್ಕೂ ಅಧಿಕ ಮಂದಿ ಕೆಲಸಗಾರರಿದ್ದಾರೆ. ಸಂಘಟಿತರಾಗಿ, ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಉದ್ದೇಶದಿಂದ ಒಕ್ಕೂಟ ರಚನೆ ಮಾಡಲಾಗುತ್ತಿದೆ. ಎಲ್ಲಾ ಸಂಘಗಳ ಸದಸ್ಯರು ಒಪ್ಪಿಗೆ ನೀಡಿದ್ದಾರೆ ಎಂದರು.
ಜಿಲ್ಲಾ ಶಾಮಿಯಾನ ಮಾಲೀಕರ ಸಂಘದ ಕೋಶಾಧಿಕಾರಿ ನಿಶಿತ್ ಪೂಜಾರಿ ಮಾತನಾಡಿ, ಸಂಘದ ಸದಸ್ಯರಲ್ಲದವರಿಂದ ನಮ್ಮ ಉದ್ಯಮಕ್ಕೆ ತೊಂದರೆ ಉಂಟಾಗುತ್ತಿದೆ. ಗ್ರಾಹಕರಿಗೂ ಇದರಿಂದ ಅನ್ಯಾಯವಾಗುತ್ತಿದೆ. ಬಹಳಷ್ಟು ಸಂದರ್ಭಗಳಲ್ಲಿ ಬಿಲ್ ವಸೂಲಾತಿಗೆ ತೊಂದರೆಯಾಗುತ್ತಿದೆ. ಇಂತಹ ಸಮಸ್ಯೆಗಳನ್ನು ಹೋಗಲಾಡಿಸಲು ಒಕ್ಕೂಟ ರಚನೆಯಿಂದ ಸಾಧ್ಯವಾಗಲಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘದ ಉಪಾಧ್ಯಕ್ಷ ವಿಜಯ ಕುಮಾರ್, ಧ್ವನಿ ಮತ್ತು ಬೆಳಕು ಮಾಲೀಕರ ಸಂಘದ ಜಿಲ್ಲಾ ಅಧ್ಯಕ್ಷ ಧನರಾಜ್ ಶೆಟ್ಟಿ, ಮಂಗಳೂರು ಘಟಕದ ಅಧ್ಯಕ್ಷ ಬೆನೆಟ್ ಡಿಸಿಲ್ವಾ, ಜಿಲ್ಲಾ ಫ್ಲವರ್ ಡೆಕೋರೇಟರ್ಸ್ ಮಾಲೀಕರ ಸಂಘದ ಅಧ್ಯಕ್ಷ ತುಷಾರ್ ಸುರೇಶ್, ಕಾರ್ಯಕ್ರಮದ ಸಂಯೋಜಕ ಗುರುದತ್ ಪೈ ಹಾಗೂ ನಿಶಿತ್ ಪೂಜಾರಿ, ಜಿಲ್ಲಾ ಶಾಮಿಯಾನ ಮಾಲೀಕರ ಸಂಘದ ಕಾರ್ಯದರ್ಶಿ ಮ್ಯಾಕ್ಸಿಮ್ ಸಿಕ್ವೇರ, ಮಂಗಳೂರು ಘಟಕದ ಅಧ್ಯಕ್ಷ ಬಾಲಕೃಷ್ಣ ಕದ್ರಿ, ಕಾರ್ಯದರ್ಶಿ ಸ್ಪಂದನ ನಾಗರಾಜ್, ಕೋಶಾಧಿಕಾರಿ ಗಾಡ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.
Catering, Shamiana, Flower Decoration Owners Association Meeting held in Mangalore, Decide to form union.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am