ಬ್ರೇಕಿಂಗ್ ನ್ಯೂಸ್
16-10-24 03:30 pm Mangalore Correspondent ಕರಾವಳಿ
ಮಂಗಳೂರು, ಅ.16: ದೀಪಾವಳಿ ಸಂದರ್ಭದಲ್ಲಿ ಮನೆಯವರೆಲ್ಲರೂ ಸೇರಿ ತಯಾರಿಸುತ್ತಿದ್ದ ಗೂಡುದೀಪದ ಜಾಗವನ್ನು ಅಂಗಡಿಯಲ್ಲಿ ಸಿಗುವ ಗೂಡು ದೀಪಗಳು ಆವರಿಸಿಕೊಂಡಿವೆ. ಗೂಡುದೀಪ ರಚಿಸುವ ಕಲೆಯನ್ನು ಉಳಿಸುವ ಜೊತೆಗೆ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 25 ವರ್ಷಗಳ ಹಿಂದೆ 'ನಮ್ಮ ಕುಡ್ಲ' ವಾಹಿನಿ ಗೂಡುದೀಪ ಸ್ಪರ್ಧೆಯನ್ನು ಆಯೋಜನೆ ಮಾಡಲು ಆರಂಭಿಸಿತ್ತು. ಈ ಬಾರಿ 25ನೇ ವರ್ಷದ ಗೂಡುದೀಪದ ಸ್ಪರ್ಧೆ ಅ.30ರಂದು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗದಲ್ಲಿ ಗೂಡುದೀಪ ಸ್ಪರ್ಧೆ ನಡೆಸಲಾಗುತ್ತಿದೆ. ಈ ಮೂರು ವಿಭಾಗದಲ್ಲಿ ನಡೆಯುವ ಗೂಡುದೀಪ ಸ್ಪರ್ಧೆಯಲ್ಲಿ ಸ್ಪರ್ಧಿಗಳು ಉತ್ತಮ ರೀತಿಯಲ್ಲಿ ಭಾಗವಹಿಸಿದ್ದಾರೆ. ಈ ಬಾರಿಯೂ ಮೂರೂ ವಿಭಾಗದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಗೂಡುದೀಪ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೆಲವೊಂದು ನಿಯಮಗಳಿದ್ದು, ಅವುಗಳನ್ನು ಪಾಲಿಸಬೇಕಾಗುತ್ತದೆ.
ಗೂಡುದೀಪ ಸ್ಪರ್ಧೆ ನಿಯಮಗಳು
ಸಾಂಪ್ರದಾಯಿಕ ವಿಭಾಗದಲ್ಲಿ ಬಣ್ಣದ ಕಾಗದ, ಗ್ಲಾಸ್ ಪೇಪರ್ ಅಥವಾ ಬಟ್ಟೆಯಿಂದ ಗೂಡುದೀಪ ತಯಾರು ಮಾಡಿರಬೇಕು. ಗೂಡುದೀಪಕ್ಕೆ ಬಾಲ ಇರಬೇಕು ಹಾಗೂ ಅದು ನೇತು ಹಾಕುವಂತಿರಬೇಕು. ಗೂಡುದೀಪದ ಒಳಗಿನ ಬೆಳಕು ಹೊರಗೆ ಕಾಣುವಂತೆ ತಯಾರಿಸಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಅಥವಾ ಯಾವುದೇ ಆಧುನಿಕ ಪರಿಕರಗಳನ್ನು ಬಳಸುವಂತಿಲ್ಲ. ಬೇಗಡೆಯನ್ನು ಉಪಯೋಗಿಸಲು ಅವಕಾಶ ಇದೆ. ಗೂಡುದೀಪ ಶುದ್ಧವಾಗಿ ಸಾಂಪ್ರದಾಯಿಕವಾಗಿಯೇ ಇರಬೇಕು.
ಆಧುನಿಕ ವಿಭಾಗದಲ್ಲಿ ಗೂಡುದೀಪ ರಚನೆಗೆ ಯಾವುದೇ ಆಧುನಿಕ ಪರಿಕರಗಳನ್ನು ಬಳಸಬಹುದಾಗಿದೆ. ಆದರೆ, ಸಾಂಪ್ರದಾಯಿಕ ಗೂಡುದೀಪದಂತೆ ಇದೂ ಕೂಡ ನೇತು ಹಾಕುವಂತೆ ಇರಬೇಕು. ಗೂಡುದೀಪದಲ್ಲಿ ಗೂಡು ಇರುವುದು ಕಡ್ಡಾಯವಾಗಿದ್ದು, ಪ್ರತಿಕೃತಿಯ ಹೋಲಿಕೆ ಇರಬಾರದು.
ಪ್ರತಿಕೃತಿ ವಿಭಾಗದಲ್ಲಿ ಯಾವುದೇ ಕಲಾತ್ಮಕ ರಚನೆಗೆ ಅವಕಾಶವಿದೆ. ಯಾವುದೇ ಆಧುನಿಕ ಪರಿಕರಗಳನ್ನು ಇದರಲ್ಲಿ ಬಳಕೆ ಮಾಡಬಹುದಾಗಿದೆ. ಆದಷ್ಟು ಹೊಸತನವನ್ನು ಅಳವಡಿಸಿಕೊಂಡು ಪ್ರತಿಕೃತಿಯ ರಚನೆ ಇರಬೇಕು.
Hallowed precincts of Sri Kshetra Gokarnanatha will come alive to ‘gududeepas’ in different hues when the 25th annual ‘Gududeepa Pantha’ organised by Namma Kudla, local Tulu TV news channel is held at Kudroli on October 30th
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am