ಬ್ರೇಕಿಂಗ್ ನ್ಯೂಸ್
17-10-24 10:57 am Mangalore Correspondent ಕರಾವಳಿ
ಉಳ್ಳಾಲ, ಅ-17: ಎರಡು ಕಾರುಗಳ ನಡುವೆ ನಡೆದ ಸಣ್ಣ ಅಪಘಾತವೊಂದರಲ್ಲಿ ವಿಭಿನ್ನ ಕೋಮಿನ ಚಾಲಕರಿಬ್ಬರ ಮಧ್ಯೆ ನಡೆದ ಹೊಯ್ ಕೈ ಪ್ರಕರಣವು ಉಳ್ಳಾಲ ಠಾಣೆಯ ಮೆಟ್ಟಿಲೇರಿದ್ದು,ಮಾತುಕತೆಗೆ ತೆರಳಿದ್ದ ಬಜರಂಗದಳ ಮುಖಂಡನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ಕೊಠಡಿಯೊಳಗೆ ಅನ್ಯಮತೀಯ ವ್ಯಕ್ತಿಯೊಬ್ಬ ಹಲ್ಲೆಗೈದ ಘಟನೆ ನಿನ್ನೆ ರಾತ್ರಿ ನಡೆದಿದೆ. ಘಟನೆಯಿಂದ ಕೆರಳಿದ ಹಿಂದೂ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದ್ದು ನಡುರಾತ್ರಿಯಲ್ಲಿ ಪುತ್ತೂರಿನಿಂದ ಉಳ್ಳಾಲಕ್ಕೆ ಧಾವಿಸಿದ ಅರುಣ್ ಪುತ್ತಿಲ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬಜರಂಗದಳದ ಉಳ್ಳಾಲ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಅವರ ಮೇಲೆ ಉಳ್ಳಾಲ ಠಾಣೆಯ ಇನ್ಸ್ ಪೆಕ್ಟರ್ ಕೊಠಡಿಯೊಳಗಡೆ ಹಲ್ಲೆಯಾಗಿದೆ. ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕಡಂಬಾರು ಸರಕಾರಿ ಶಾಲೆಯ ಬಳಿಯ ನಿವಾಸಿ ಮಹಮ್ಮದ್ ಆಸಿಫ್(33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಬುಧವಾರ ರಾತ್ರಿ 9.45ರ ವೇಳೆ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ಸಣ್ಣ ಅಪಘಾತ ಉಂಟಾಗಿದೆ. ಈ ವಿಚಾರದಲ್ಲಿ ಖಲೀಲ್ ಮತ್ತು ಆತನ ಸಹೋದರ ಅಸಿಫ್ ಸೇರಿ ಶರತ್ ಎಂಬವರಿಗೆ ಕೈಯಲ್ಲಿ ಹಲ್ಲೆಗೈದಿದ್ದಾರೆಂದು ಆರೋಪಿಸಲಾಗಿದ್ದು ಪ್ರಕರಣ ಬಳಿಕ ಉಳ್ಳಾಲ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ರಾತ್ರಿ 11 ಗಂಟೆ ಸುಮಾರಿಗೆ ಶರತ್ ಅವರ ಪರಿಚಯದ ಅರ್ಜುನ್ ಮಾಡೂರು ತನ್ನ ಸ್ನೇಹಿತರೊಂದಿಗೆ ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಇನ್ಸ್ ಪೆಕ್ಟರ್ ಕೊಠಡಿಯೊಳಗೆ ಅಪಘಾತದ ವಿಚಾರದಲ್ಲಿ ಕಾರು ಚಾಲಕರಾದ ಶರತ್, ಖಲೀಲ್ ಜತೆ ಮಾತುಕತೆ ನಡೆಸುತ್ತಿದ್ದ ವೇಳೆ ಏಕಾಏಕಿ ಒಳನುಗ್ಗಿದ ಆರೋಪಿ ಆಸಿಫ್, ಅರ್ಜುನ್ ಮಾಡೂರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತೆ ಹಲ್ಲೆ ನಡೆಸಿದ್ದಾನೆ. ಅರ್ಜುನ್ ಸ್ನೇಹಿತರು ಆಸಿಫ್ ನನ್ನ ತಡೆದಿದ್ದು ಎಚ್ಚೆತ್ತ ಪೊಲೀಸರು ಕೂಡಲೇ ಆತನನ್ನ ಬಂಧಿಸಿದ್ದಾರೆ. ಘಟನೆಯ ದೃಶ್ಯಗಳು ಇನ್ಸ್ ಪೆಕ್ಟರ್ ಕೊಠಡಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಲ್ಲೆಗೊಳಗಾದ ಅರ್ಜುನ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಹಲ್ಲೆಗೈದ ಆಸಿಫ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಮಧ್ಯರಾತ್ರಿ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಅರ್ಜುನ್ ಗೆ ಹಲ್ಲೆ ನಡೆಸಿದ ಆರೋಪಿ ಆಸಿಫ್ ನನ್ನ ತಮ್ಮ ವಶಕ್ಕೆ ನೀಡುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಡಿಸಿಪಿ ಸಿದ್ಧಾರ್ಥ್ ಗೋಯಲ್, ಎಸಿಪಿ ಧನ್ಯ ನಾಯಕ್ ಅವರು ಠಾಣೆಯ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಠಾಣೆಗೆ ಭೇಟಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಶ್ವ ಹಿಂದೂ ಪರಿಷತ್ ಮುಖಂಡರಾದ ಗೋಪಾಲ ಕುತ್ತಾರ್ ಅವರು ಆರೋಪಿ ಆಸಿಫ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ನಡುರಾತ್ರಿ ಪುತ್ತೂರಿನಿಂದ ಉಳ್ಳಾಲಕ್ಕೆ ಧಾವಿಸಿದ ಪುತ್ತಿಲ
ಠಾಣೆಯ ಒಳಗಡೆ ಅರ್ಜುನ್ ಮಾಡೂರಿಗೆ ಅನ್ಯ ಮತೀಯ ವ್ಯಕ್ತಿ ಹಲ್ಲೆಗೈದ ವಿಚಾರ ತಿಳಿಯುತ್ತಲೇ ನಡುರಾತ್ರಿ 1 ಗಂಟೆ ವೇಳೆ ಬಿಜೆಪಿ ಮುಖಂಡ ಅರುಣ್ ಪುತ್ತಿಲ ಅವರು ಉಳ್ಳಾಲ ಠಾಣೆಗೆ ಭೇಟಿ ನೀಡಿದ್ದಾರೆ. ಅರುಣ್ ಪುತ್ತಿಲ ಆಗಮಿಸುತ್ತಿದ್ದಂತೆ ಠಾಣೆಯ ಮುಂದೆ ಜಮಾಯಿಸಿದ್ದ ಹಿಂದೂ ಕಾರ್ಯಕರ್ತರು ಜೈಕಾರ ಘೋಷಣೆಗಳನ್ನ ಕೂಗಿದ್ದಾರೆ. ಠಾಣೆಯೊಳಗೆ ನಡೆದ ಹಲ್ಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಆರೋಪಿ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಡಿಸಿಪಿ ಸಿದ್ಧಾರ್ಥ್ ಗೋಯಲ್ ಅವರನ್ನ ಅರುಣ್ ಪುತ್ತಿಲ ಆಗ್ರಹಿಸಿದ್ದಾರೆ.
ಠಾಣೆ ಒಳಗಡೆ ಹಲ್ಲೆ, ಕೊಲೆಯತ್ನ ನಡೆದರೆ ಇನ್ನೇನು ಗತಿ..?
ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರ ಕೊಠಡಿಯೊಳಗಡೆ ಕಾರು ಚಾಲಕರ ನಡುವಿನ ಗಲಾಟೆ ವಿಚಾರದಲ್ಲಿ ಮಾತುಕತೆ ನಡೆಯುತ್ತಿದ್ದ ಸಂದರ್ಭ ಇನ್ಸ್ ಪೆಕ್ಟರ್ ಮೊಬೈಲ್ನಲ್ಲಿ ಮಾತನಾಡುತ್ತಾ ಕೋಣೆಯಿಂದ ಹೊರ ಹೋಗಿದ್ದಾರೆ. ಈ ವೇಳೆ ಆರೋಪಿ ಆಸಿಫ್ ಒಳನುಗ್ಗಿ ಅರ್ಜುನ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಠಾಣೆಗೆ ದೂರು ನೀಡಲು ಬಂದವರ ಸಮಸ್ಯೆಗಳನ್ನ ಸರಿಯಾಗಿ ಆಲಿಸದ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರು ಮೊಬೈಲ್ ನಲ್ಲೇ ಹೆಚ್ಚಿನ ಕಾಲ ಕಳೆಯುತ್ತಿರುವುದರ ಬಗ್ಗೆ ಆರೋಪಗಳಿವೆ. ಠಾಣೆಯ ಒಳಗಡೆ ನ್ಯಾಯ ಕೇಳಲು ಬಂದವರಿಗೇ ರಕ್ಷಣೆ ಇಲ್ಲ ಅಂತಾದ್ರೆ ಉಳ್ಳಾಲ ಠಾಣೆಯ ಅವ್ಯವಸ್ಥೆಯ ಗೂಡಾಗಿದೆಯೇ ಎನ್ನುವ ಮಾತು ಕೇಳಿಬಂದಿದೆ.
Hindu leader Arjun Maduru assaulted by Muslim youth inside police inspector cabin at ullal over accident issue. Hindu leaders throng police station. Arun puthila visit police station midnight including many other leaders.
06-05-25 08:18 pm
Bangalore Correspondent
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm