ಬ್ರೇಕಿಂಗ್ ನ್ಯೂಸ್
24-10-24 01:13 pm Mangalore Correspondent ಕರಾವಳಿ
ಉಳ್ಳಾಲ, ಅ.24: ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11 ರ ಹರೆಯದ ವಿದ್ಯಾರ್ಥಿನಿಯೋರ್ವಳು ದಾರುಣ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಸರಕಾರಿ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ಆಟೋ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ, ಅಜಾಗರೂಕತೆಯಿಂದ ಬಂದ ಪಿಕಪ್ ವಾಹನವು ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಿಂದ ರಿಕ್ಷಾ ಚಾಲಕನೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಸಾರಲಾಗಿದೆ.
Mangalore 11 year old girl dies of accident after van hits school auto at Belma in ullal. The deceased has been identified as Ayesha Vayiba.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 12:32 pm
Mangalore Correspondent
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm