ಬ್ರೇಕಿಂಗ್ ನ್ಯೂಸ್
03-11-24 08:43 pm Mangalore Correspondent ಕರಾವಳಿ
ಬೆಳ್ತಂಗಡಿ, ನ.3: ಕೋಲಾರ ಜಿಲ್ಲೆಯ ಚಿಂತಾಮಣಿಯಿಂದ ಅಕ್ಟೋಬರ್ 31ರಂದು ಕಾಣೆಯಾಗಿದ್ದ ದಂಪತಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಮತ್ತು ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಊರಿನಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾಗಿ ಸುದ್ದಿ ಹಬ್ಬಿತ್ತು. ಅನುಮಾನಗೊಂಡ ಕುಟುಂಬಸ್ಥರು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸಂಶಯದಲ್ಲಿ ಹುಡುಕಾಟ ನಡೆಸಿದ್ದರು. ಬೆಳ್ತಂಗಡಿಯ ಶೌರ್ಯ ತಂಡ ಹಾಗೂ ಪೊಲೀಸರ ಸಹಕಾರದಲ್ಲಿ ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಉದ್ದಕ್ಕೂ ಹುಡುಕಾಟ ನಡೆದಿತ್ತು.
ಭಾನುವಾರ ಮಧ್ಯಾಹ್ನ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದು ಪತ್ತೆಯಾಗಿದೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನವೆಂಬರ್ 1 ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.
Kolar missing couple body found in river at Dharmasthala in Mangalore. The deceased has been identified as Madi Reddy and Eshwaramma.
30-07-25 11:40 am
Bangalore Correspondent
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 03:00 pm
Mangalore Correspondent
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
30-07-25 11:37 am
HK News Desk
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm