ಬ್ರೇಕಿಂಗ್ ನ್ಯೂಸ್
16-11-24 02:23 pm Mangalore Correspondent ಕರಾವಳಿ
ಮಂಗಳೂರು, ನ.16: ನೀವು ಬರೆದಿಟ್ಟುಕೊಳ್ಳಿ, ಚನ್ನಪಟ್ಟಣದಲ್ಲಿ ಏನೇನು ಆಗುವುದಿಲ್ಲ. ಚನ್ನಪಟ್ಟಣದಲ್ಲಿ ಮೂರು ದಿನ ಪ್ರಚಾರ ಮಾಡಿದ್ದೇನೆ. ಯೋಗೀಶ್ವರ್ 18 ರಿಂದ 20 ಸಾವಿರ ಮತದಿಂದ ಗೆಲ್ಲುತ್ತಾರೆ, ಬರೆದಿಟ್ಟುಕೊಳ್ಳಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಜಮೀರ್ ಬಂದಿದ್ದರಿಂದ ಅನುಕೂಲ ಆಗಿದೆ, ಹೇಳಿಕೆಯಿಂದ ಸ್ವಲ್ಪ ಅನಾನುಕೂಲ ಆಗಬಹುದೋ ಏನೋ ಅಂತ ಯೋಗಿಶ್ವರ್ ಹೇಳಿದ್ದಾರೆ. ಅದನ್ನು ಮಾಧ್ಯಮದವರು ಉಲ್ಟಾ ಮಾಡಿದ್ದಾರೆ ಎಂದು ಈ ಕುರಿತ ಪ್ರಶ್ನೆಗೆ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ.
ಖಾಸಗಿ ಕಾರ್ಯಕ್ರಮಕ್ಕೆ ಮಂಗಳೂರಿಗೆ ಬಂದಿದ್ದ ಜಮೀರ್ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಲೋಕಾಯುಕ್ತ ನೋಟಿಸ್ ಬಂದಿದ್ದು ನನಗೆ ಗೊತ್ತಿಲ್ಲ. ನೋಟಿಸ್ ಕೊಡೋದು ರೂಟೀನ್. ಕೊಟ್ಟರೆ ವಿಚಾರಣೆಗೆ ಹೋಗುತ್ತೇನೆ. ಇಡಿಯವರು ಕೇಸನ್ನು ಎಸಿಬಿಗೆ ಫಾರ್ವರ್ಡ್ ಮಾಡಿದ್ದಾರೆ. ಎಸಿಬಿ ರದ್ದಾಗಿದ್ದರಿಂದ ಕೇಸ್ ಅಲ್ಲಿಂದ ಲೋಕಾಯುಕ್ತಕ್ಕೆ ಬಂದಿದೆ. ನೋಟಿಸ್ ಬಂದ ಮೇಲೆ ವಿಚಾರಣೆಗೆ ಹೋಗಲೇ ಬೇಕು ಎಂದು ಲೋಕಾಯುಕ್ತ ನೋಟಿಸ್ ಬಗ್ಗೆ ಕೇಳಿದ್ದಕ್ಕೆ ಹೇಳಿದರು.
ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ. ಕುಮಾರಸ್ವಾಮಿ ಅವರು ಮುಸ್ಲಿಂ ಮತ ನನಗೆ ಬೇಕಾಗಿಲ್ಲ ಅಂತ ಹೇಳಿದ್ದರು. ಆ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದೆ. ಮುಸ್ಲಿಂ ಓಟ್ ಬೇಡ ಅನ್ನುತ್ತಲೇ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಯಾಕೆ.. ಇದು ಎಷ್ಟು ಸರಿ ಅಂತ ಕೇಳಿದ್ದೇನೆ. ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್ ಮಾಡುವರು ಅಂತ ಲಘುವಾಗಿ ಮಾತಾಡಿದ್ದಾರೆ. ಯಾಕೆ ಅವರ ಬಳಿ ಬಂದು ಓಟ್ ಕೇಳುತ್ತೀರಿ. ನಿನ್ನೆ ಕುಮಾರಸ್ವಾಮಿ ಅದೇ ಮಾತು ಹೇಳಿದ್ದಾರೆ. ಹೌದು ಸ್ವಾಮಿ, ನಾವು ಬಡವರು ಪಂಚರ್ ಹಾಕೋರು, ಕೂಲಿ ಮಾಡೋರು. ಅಂಥವರ ಬಳಿ ಯಾಕೆ ಓಟ್ ಕೇಳುತ್ತೀರಿ. ಕುಮಾರಸ್ವಾಮಿಗೆ ಅದೇ ಪ್ರಶ್ನೆ ಕೇಳುತ್ತೇನೆ.
ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ. ಯೂ ಟರ್ನ್ ಕುಮಾರಸ್ವಾಮಿ ಅಂತಾನೇ ಅವರಿಗೆ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಅವರು. ನಾನು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಆ ಮಾತು ಹೇಳಿರುವುದು. ಒಕ್ಕಲಿಗರ ಬಗ್ಗೆ ಅಲ್ಲ. ಒಕ್ಕಲಿಗ ಸಮುದಾಯದ ಬಗ್ಗೆ ನನಗೆ ಗೌರವ ಇದೆ. ಒಕ್ಕಲಿಗರ ಬಗ್ಗೆ ಯಾವ ಹೇಳಿಕೆಯನ್ನೂ ನೀಡಿಲ್ಲ. ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದವನು ನಾನು. ಜನತಾದಳಕ್ಕೆ ಬರಲು ಕಾರಣ ಆದಿ ಚುಂಚನಗಿರಿ ಸ್ವಾಮೀಜಿ. ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವ. ಬೇಕಾದರೆ ಕುಮಾರಸ್ವಾಮಿ ಅವರಲ್ಲಿ ಕೇಳಿ ಎಂದು ಸಚಿವ ಜಮೀರ್ ಅಹ್ಮದ್ ತನ್ನ ಹೇಳಿಕೆ ಬಗ್ಗೆ ಸಮಜಾಯಿಷಿ ನೀಡಿದ್ದಾರೆ.
Zameer Ahmed speaking to media person in Mangalore states that CP Yogeshwar will have clear victory in Channapatna. He will win over 18-20 thousand votes. He came to Mangalore to attend a private function in the city.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm